ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಡ್ಯ, ನ. 26. ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ, ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಸೋಮವಾರ ಮೂರು ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ […]

ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ Read More »

ಕರ್ನಾಟಕ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 26. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಇಂದು ಹೈಕೋರ್ಟ್‌ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ವಿಚಾರಣೆ ಆಗಿದೆ. ಪ್ರಕರಣದಲ್ಲಿ ಅಧಿಕಾರಿಗಳಾದ ಕುಮಾರ್ ನಾಯ್ಕ್, ನಟೇಶ್ ಮತ್ತು ಪಾಲಾಯ್ಯ ವಿಚಾರಣೆ ಆಗಿದ್ದು, ಬಳಿಕ ಸಾಕ್ಷಿಗಳಿಂದ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ

ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ಕರ್ನಾಟಕ

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು. ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ Read More »

ಕರಾವಳಿ

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು Read More »

ರಾಷ್ಟ್ರೀಯ ನ್ಯೂಸ್

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್!

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ದೇಶದ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗಿದ್ದ ಸಮಾಜವಾದಿ ಹಾಗೂ ಜಾತ್ಯತೀತ  ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಭಾರತೀಯ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನುಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ ವಜಾ ಮಾಡುವ ತೀರ್ಮಾನ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನದ ಪೀಠಿಕೆಗೂ ವಿಸ್ತರಿಸುತ್ತದೆ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್! Read More »

ರಾಷ್ಟ್ರೀಯ ನ್ಯೂಸ್

ಕೊಪ್ಪಳದಲ್ಲಿ ಅಪರೂಪದ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆ

(ನ್ಯೂಸ್ ಕಡಬ)newskadaba.com  ಕೊಪ್ಪಳ, ನ.25:  ಕೊಪ್ಪಳದ ಬೀಳಗಿ ಗ್ರಾಮದ ಕೆರೆಯ ಹತ್ತಿರ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆಯಾಗಿವೆ. ಬಲಿದಾನ ಸ್ಮಾರಕ ಶಿಲ್ಪಗಳ ಗುಂಪಿಗೆ ಸೇರಿದ ಶಾಸನ ಇದಾಗಿದೆ ಎಂದು  ಇತಿಹಾಸಕಾರರು ಅಭಿಪ್ರಾಯಪಟ್ಟಿದ್ದಾರೆ. ಆತ್ಮ ಬಲಿದಾನಗಳಲ್ಲಿ ಒಂದಾದ ಈ ಹರಕೆಯು ಬಹಳ ವಿರಳ ಮತ್ತು ವಿಶೇಷವಾದುದಾಗಿದೆ. ರಾಜ್ಯದಲ್ಲಿ ಮಂಡ್ಯ ಜಿಲ್ಲೆಯ ತೊಣಚಿ ಗ್ರಾಮದ ಶಾಸನದಲ್ಲಿ ಉರಿ ಉಯ್ಯಾಲೆಯ ಉಲ್ಲೇಖವಿದೆ. ಈ ರೀತಿಯ ಶಿಲ್ಪಗಳು ಕರ್ನಾಟಕದಲ್ಲಿ ಬೆರಳೆಣಕಿಯಷ್ಟು ದೊರೆತಿವೆ ಎಂದು ಹೇಳಲಾಗಿದೆ.ಈ ಶಾಸನಗಳು ಮೂರು ಹಂತಗಳನ್ನು ಒಳಗೊಂಡಿವೆ. ಅವು 9ನೇ

ಕೊಪ್ಪಳದಲ್ಲಿ ಅಪರೂಪದ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆ Read More »

ಕರ್ನಾಟಕ

ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ- ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮುಂದಿನ ತಿಂಗಳ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಪ್ರಕ್ರಿಯೆಯಂತೆ ಡಿ.9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಗುತ್ತದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.  

ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ- ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು Read More »

ಕರ್ನಾಟಕ

ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ಇದೇ ನವೆಂಬರ್‌ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ. ನವೆಂಬರ್‌ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ,

ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ Read More »

ಕರ್ನಾಟಕ

ನಾಳೆ ಸಂವಿಧಾನ ದಿನಾಚರಣೆ, ಎಲ್ಲ ಶಾಲಾ-ಕಾಲೇಜು, ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ನಾಳೆ  ಸಂವಿಧಾನ ದಿನಾಚರಣೆ ಆಗಿದ್ದು, ಈ ಸಂದರ್ಭದಲ್ಲಿ ಸಂವಿಧಾನ ಕರ್ತೃ ಡಾ.ಬಿ.ಆರ್ ಅಂಬೇಡ್ಕ‌ರ್‌  ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ

ನಾಳೆ ಸಂವಿಧಾನ ದಿನಾಚರಣೆ, ಎಲ್ಲ ಶಾಲಾ-ಕಾಲೇಜು, ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ Read More »

ಕರ್ನಾಟಕ
Scroll to Top