ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ […]

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಇಳಿಕೆ ಕಂಡಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ ನ ಚಿನ್ನದ ದರ ತಲಾ 100 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 109 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,855 ರೂ.ಗೆ ತಲುಪಿದೆ.

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ Read More »

ಕರಾವಳಿ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ನ. 25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಜ್ಞಾನವಿಕಾಸ ಕೇಂದ್ರಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ವಲಯ ಹಾಗೂ ವೇದವ್ಶಾಸ ವಿದ್ಯಾಲಯ ಮತ್ತು ಗೋಪಾಲಕೃಷ್ಣ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಬಿಳಿನೆಲೆ ವೇದವ್ಶಾಸ ಸಭಾಭವನದಲ್ಲಿ ತಾಲೂಕು ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಶ ಮಾತನಾಡಿ, ಸಮಾಜದ ಪ್ರತೀ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. 2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75 ನೇ ವರ್ಷದ ಆರಂಭ. ನಾಳೆ, ಸಂವಿಧಾನ

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಉಡುಪಿ, ನ.25: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ  ಕಲಾವಿದರ ಬಸ್​ ಅಪಘಾತಕ್ಕೀಡಾಗಿದ್ದು,  ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ ಚಿತ್ರದ ಶೂಟಿಂಗ್, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿನ ಪ್ರಾಂತ್ಯಗಳಲ್ಲಿ ಭರದಿಂದ ಶೂಟಿಂಗ್ ನಡೆಸಿತ್ತು.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ Read More »

ಕರಾವಳಿ

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25. ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ದಿನೇಶ್ ಗೂಳಿಗೌಡ “ ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರ ಪಾಲು ನೀಡಬೇಕು ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು.

ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ನ.25. ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ಆಟೋಗ್ರಾಫ್ ಹೊಂದಿರುವ ಎಲೆಕ್ಟ್ರಿಕ್ ಗಿಟಾರ್‌ಗಳಿಗೆ ವಿಶೇಷ ಬೆಲೆ ನಿಗದಿಪಡಿಸಲಾಗಿದೆ. ಟ್ರಂಪ್ ಸಹಿ ಮಾಡಿರುವ ಗಿಟಾರ್ ಗಳ ಬೆಲೆ 10 ಸಾವಿರ ಡಾಲರ್ (8.45 ಲಕ್ಷ ರೂ.) ಎಂದು ಘೋಷಿಸಲಾಗಿದ್ದು, ಸಹಿ ಹಾಕಿದ ಗಿಟಾರ್​ ಕೇವಲ 275

ಹೊಸ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು

(ನ್ಯೂಸ್ ಕಡಬ)newskadaba.com   ಮಂಗಳೂರು, ನ.24: ಬ್ರೇಕ್ ಫೇಲ್ ನಿಂದ ನಡೆದ ರಿಕ್ಷಾ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಆದಿತ್ಯವಾರದಂದು ಸಂಭವಿಸಿದೆ. ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ ಮೃತರು. ಉಳ್ಳಾಲದ ಕೊಲ್ಯ ಅಡ್ಕ ಸಮೀಪ ನಡೆದಿದ್ದ ಸಂಬಂಧಿಕರ ಹುಟ್ಟುಹಬ್ಬ ಸಮಾರಂಭಕ್ಕೆ ಕುಂಬಳೆಯಿಂದ ರಿಕ್ಷಾದಲ್ಲಿ ಆಗಮಿಸಿದ್ದ ಅವರು ಅಲ್ಲಿಂದ ಸಂಬಂಧಿಕರನ್ನು ಕೊಣಾಜೆ ಕಲ್ಕಾರ್ ಎಂಬಲ್ಲಿಗೆ ಬಿಟ್ಟು ಬರಲು ರಿಕ್ಷಾದಲ್ಲೇ ತೆರಳಿದ್ದರು. ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ರಿಕ್ಷಾ ಢಿಕ್ಕಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top