ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನ. 16. ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಶಂಕಿತ ಕುಕಿ ಬಂಡುಕೋರರು ಒಂದೇ ಕುಟುಂಬದ 6 ಮಂದಿಯನ್ನು ಅಪಹರಿಸಿದ 3 ದಿನಗಳ ಬಳಿಕ ಶಿಶು ಸೇರಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆಯ ಕೊಳೆತ ಶವ ಮಣಿಪುರ-ಅಸ್ಸಾಂ ಗಡಿಯ ಬಳಿ ನ.15 ರಂದು ಪತ್ತೆಯಾಗಿದೆ. ಸದ್ಯ ಜಿರಿಬಾಮ್ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನ. 11ರಂದು ಮೂವರು ಮಹಿಳೆಯರು ಸಹಿತ 6 ಮಂದಿಯನ್ನು ಅಪಹರಿಸಲಾಗಿತ್ತು. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.ಅಪಹರಣ ನಡೆದ ಗ್ರಾಮದಿಂದ ಸುಮಾರು […]

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರದಂದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ Read More »

ಕರ್ನಾಟಕ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com ನ. 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ Read More »

ಕರಾವಳಿ

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ

(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯು ಶಿಶು ತೀವ್ರ ನಿಗಾ ಘಟಕದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತಿಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!

(ನ್ಯೂಸ್ ಕಡಬ) newskadaba.com ನ. 16. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ಶರ್ಮಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಈ ಮೊದಲೇ ವರದಿಯಾಗಿತ್ತು. ಇದೀಗ ಶುಕ್ರವಾರದಂದು ರಿತಿಕಾ ಮುಂಬೈನ

ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..! Read More »

ಕರ್ನಾಟಕ, ಕ್ರೀಡಾ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು Read More »

ಕರ್ನಾಟಕ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ

(ನ್ಯೂಸ್ ಕಡಬ) newskadaba.com ನ. 16. ವೈದ್ಯಕೀಯ ಶಿಕ್ಷಣದಲ್ಲಿ 25 ವರ್ಷಗಳ ಸ್ಮರಣಾರ್ಥ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಶುಕ್ರವಾರದಂದು ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿತು. ಈ ಸಂದರ್ಭದಲ್ಲಿ, ಫಾದರ್ ಮುಲ್ಲರ್ ಅವರು ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವಾಗಲು ಪ್ರಕ್ರಿಯೆಯ ಪ್ರಾರಂಭವನ್ನು ಗಣ್ಯರು ಅನುಮೋದಿಸಿದರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲೊ, ಎಫ್‌ಎಂಎಂಸಿಯ ಆಡಳಿತಾಧಿಕಾರಿ ಫಾ.ಅಜಿತ್ ಬಿ ಮೆನೆಜಸ್, ಡೀನ್ ಡಾ.ಆಂಟೋನಿ ಸಿಲ್ವನ್ ಡಿಸೋಜಾ ಮತ್ತು ಬಿಷಪ್

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ Read More »

ಕರಾವಳಿ

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 15. ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೋಲಿಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ. ಹಿಂದು ಸೇವಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾ.ಸಂಜಯ

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15. ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿ ಸಮೂಹವು ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ  ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿವಿಧ ಕಾಲೇಜಿನಿಂದ ಪ್ರತಿಭಟನೆಗೆ ಆಗಮಿಸಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಬಸ್ ಮೂಲಕ ತಂಡೋಪತಂಡವಾಗಿ

ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ಡಿ. 18ರವರೆಗೆ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 14.  ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ,

ಡಿ. 18ರವರೆಗೆ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ Read More »

ಕರ್ನಾಟಕ
Scroll to Top