ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌

(ನ್ಯೂಸ್ ಕಡಬ) newskadaba.com ನ. 14. ರೀಲ್ಸ್‌ ಗಾಗಿ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಪೋಟಿಸಿ ಎಲ್ಲೆ ಮೀರಿ ವರ್ತಿಸಿರುವ ಘಟನೆ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. ಆರ್ಯುವೇದ ಕಾಲೇಜಿನಲ್ಲಿ ಓದುತ್ತಿರುವ ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ ರಸ್ತೆಯಲ್ಲಿ ಪ್ಲಾಸ್ಟಿಕ್‌ ಕವರ್‌ಗೆ ಪೆಟ್ರೋಲ್ ತುಂಬಿ, ಅದರ ಮೇಲೆ ಪಟಾಕಿ ಬಾಂಬ್ ಇಟ್ಟು ಬೆಂಕಿ ಹಚ್ಚಿದ್ದಾರೆ. ಪರಿಣಾಮ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಾಂಬ್ ಸ್ಪೋಟಗೊಂಡ ಅನತಿ […]

ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ

(ನ್ಯೂಸ್ ಕಡಬ) newskadaba.com ನ. 14. ಬಾಲ ಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲೆ ಇದರ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಪ್ರಯುಕ್ತ 09ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಕದ್ರಿ ಜಿಲ್ಲಾ ಬಾಲ ಭವನದಲ್ಲಿ ಮಂಗಳವಾರದಂದು ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ವಾದ್ಯ ಸಂಗೀತ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ,

ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ Read More »

ಕರಾವಳಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನ. 14. ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ. ಅದರ ಪ್ರಕಾರ, ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ. ದೇವಸ್ಥಾನಕ್ಕೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ Read More »

ಕರಾವಳಿ

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

(ನ್ಯೂಸ್ ಕಡಬ) newskadaba.com ನ. 14.ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.  ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು Read More »

ರಾಷ್ಟ್ರೀಯ ನ್ಯೂಸ್

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ನ. 14. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಆಶಯದೊಂದಿಗೆ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮವು ನಮ್ಮ ರಾಜ್ಯ ಹಾಗೂ ಭಾಷೆಯ ಅಭಿಮಾನದ ಪ್ರತೀಕವಾಗಿದೆ ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರದಂದು ಮಂಗಳೂರು ತುಳು ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನಡೆಯುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಲಾದ ಪ್ರೌಢಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ,

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ

(ನ್ಯೂಸ್ ಕಡಬ) newskadaba.com ಟೋಕಿಯೋ, ನ. 14. ಚಂದ್ರ ಮತ್ತು ಮಂಗಳನ ಅಂಗಳದಲ್ಲಿ ಮರ ಬಳಸಿ ಮನೆ ಕಟ್ಟುವ ಯೋಜನೆಯನ್ನು ಹೊಂದಿರುವ ವಿಜ್ಞಾನಿಗಳು, ಇದರ ಸಾಧ್ಯಾಸಾಧ್ಯತೆಯನ್ನು ಅರ್ಥ ಮಾಡಿಕೊಳ್ಳಲು ಬಾಹ್ಯಾಕಾಶಕ್ಕೆ ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಉಡಾವಣೆ ಮಾಡಿದ್ದಾರೆ. ಇದು ವಿಶ್ವದಲ್ಲೇ ಮೊದಲ ಮರದ ಉಪಗ್ರಹ ಎಂಬ ಖ್ಯಾತಿ ಪಡೆದುಕೊಂಡಿದೆ. ಮರ ಎಂಬುದಕ್ಕೆ ಲ್ಯಾಟಿನ್ ಭಾಷೆಯಲ್ಲಿರುವ ಪದವನ್ನು ಬಳಸಿ ಲಿಗ್ನೋಸ್ಯಾಟ್ ಎಂಬ ಹೆಸರನ್ನು ಈ ಉಪಗ್ರಹಕ್ಕೆ ಇಡಲಾಗಿದೆ. ಜಪಾನ್ನ ಕ್ಯೋಟೋ ವಿವಿ ಮತ್ತು ಸುಮಿಟಾಮೋ ಫಾರೆಸ್ಟ್ರಿ ಸೇರಿ

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ನ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ. 16ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ
pilikula

ನ.18ರಂದು ಪಿಲಿಕುಳ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ನ. 14. ನವೆಂಬರ್ 18ರಂದು (ಸೋಮವಾರ) ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.18ರಂದು ಪಿಲಿಕುಳ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 14. 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಥ್ಲೆಟಿಕ್ಸ್‌, ಬಾಸ್ಕೆಟ್‌ಬಾಲ್‌, ಫುಟ್ಬಾಲ್‌, ಹಾಕಿ, ಕುಸ್ತಿ, ಜಿಮ್ನಾಸ್ಟಿಕ್ಸ್‌, ಶೂಟಿಂಗ್‌

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 14. 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳು ಹಾಗೂ (ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳು), ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ website ನಲ್ಲಿ ನೀಡಲಾದ Link http://faculty.mangaloreuniversity.in ರಲ್ಲಿ

ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top