ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 14. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ಆಯೋಗವು ಬಾಕಿ ಇರುವ ಪ್ರಕರಣಗಳಲ್ಲಿ ಕೂಡಾ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಡಿ. 13ರಂದು ಅವಕಾಶ ನೀಡಲಾಗುತ್ತಿದ್ದು, ಸಂಬಂಧಿಸಿದವರು ಆಯೋಗಕ್ಕೆ ಭೇಡಿ ನೀಡಿ ತಮ್ಮ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಹಕರಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್ Read More »

ಕರಾವಳಿ

ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ನ. 14. ಉಳ್ಳಾಲ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆಯು ನ.16 ರಂದು ಬೆಳಿಗ್ಗೆ 11 ಗಂಟೆಗೆ ನರಿಂಗಾನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ Read More »

ಕರಾವಳಿ, ಕರ್ನಾಟಕ

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ನ. 14. ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿರುವ ಕುರಿತು ಬುಧವಾರದಂದು ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಎಂದು ಗುರುತಿಸಲಾಗಿದೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿತ್ತು. ಗ್ಲೋರಿಯಾ

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಧಾರವಾಡ, ನ. 13.  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಮಂದಿ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ Read More »

ಕರ್ನಾಟಕ

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 13.  ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ ಎನ್ನಲಾಗಿದೆ.  

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ Read More »

ರಾಷ್ಟ್ರೀಯ ನ್ಯೂಸ್

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 13.  ವಿನೋದ್ ಕ್ರಾಸ್ಟೋ ಅವರ ತಂದೆ ತಾಯಿ ಜನಸೇವೆಯಲ್ಲಿ ಗುರುತಿಸಿಕೊಂಡವರು. ಇವರು ಕೂಡಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದವರು. ಅವರ ಸೇವೆಯನ್ನು ಪಕ್ಷ ಗುರುತಿಸಿದ್ದು, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪಕ್ಷದ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆದೂರು ಸದಾನಂದ

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ Read More »

ಕರಾವಳಿ

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು,

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೃಷ್ಣಾ ನದಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ

(ನ್ಯೂಸ್ ಕಡಬ) newskadaba.com ರಾಯಚೂರು,  ನ. 13. ವಿದ್ಯುತ್ ಕೇಂದ್ರಗಳು ಎಗ್ಗಿಲ್ಲದೇ ಕೃಷ್ಣಾ ನದಿಗೆ ರಾಸಾಯನಿಕ ವಸ್ತುಗಳನ್ನು ಹರಿಬಿಡುತ್ತಿದ್ದು, ಈ ಕುರಿತು ಮಾಧ್ಯಮದಲ್ಲಿ  ಸುದ್ದಿಗಳು ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಜಿಲ್ಲೆಯ ಹೆಮ್ಮೆ. ಇದರಲ್ಲಿ ವಿದ್ಯುತ್ ಕೇಂದ್ರಗಳು ಜೀವಮಾರಕವಾಗಿರುವ ರಾಸಾಯನಿಕವನ್ನು ನೇರವಾಗಿ ಕೃಷ್ಣಾ ನದಿಗೆ ಹರಿಬಿಡುತ್ತಿದೆ. ವಿದ್ಯುತ್ ಕೇಂದ್ರದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಬೇಜವಾಬ್ದಾರಿತನದ ಬಗ್ಗೆ ವರದಿಯಾದ

ಕೃಷ್ಣಾ ನದಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ Read More »

ಕರ್ನಾಟಕ
Scroll to Top