ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ನ.11ರಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ […]

ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 12. ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ “ಸುವರ್ಣ ಸಂಭ್ರಮ-50” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 20 ಮತ್ತು 21ರಂದು ವಿವಿಧ ಕಾರ್ಯಕ್ರಮಗಳನ್ನು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವಂತಹ ವಸ್ತುಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲು ಆಸಕ್ತ ಸಂಸ್ಥೆಗಳಿಗೆ 10+10 ಅಳತೆಯ ಮಳಿಗೆಯನ್ನು 2 ದಿನಗಳಿಗೆ ಒಟ್ಟು ರೂ. 2,000 ನೆಲಬಾಡಿಗೆಯಂತೆ ಹಂಚಿಕೆ ಮಾಡಲಾಗುವುದು. ಕರ್ನಾಟಕದ ಕಲೆ,

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ Read More »

ಕರಾವಳಿ

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ನ. 12. ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ Read More »

ಕರಾವಳಿ

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, ನ. 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ. ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 12. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ಹಾಗೂ ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಮಂಜೇಶ್ವರ ಹೊಸಬೆಟ್ಟು ಕಲಾಸ್ಪರ್ಶಂ ಅಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ Read More »

ಕರಾವಳಿ
crime, arrest, suspected

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್‌ ಖಾನ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್)

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ನ. 12. ವೆನ್‍ಲಾಕ್ ಜಿಲ್ಲಾಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ರೋಗಿಗಳ ಸೇವೆ ಆರಂಭಗೊಂಡಿರುವುದಕ್ಕೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಆಗಸ್ಟ್ 15ರಂದು ಉದ್ಘಾಟನೆಗೊಂಡಿದ್ದ, ಈ ನೂತನ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ನವೆಂಬರ್ 7ರಿಂದ ರೋಗಿಗಳ ಶಸ್ತ್ರಚಿಕಿತ್ಸೆಗಳು ಆರಂಭಗೊಂಡು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆಗಳು ನಡೆದಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆ ನಡೆಸಲು ಕಾರ್ಯಯೋಜನೆ ರೂಪಿಸಲಾಗುವುದು. ಈ ನೂತನ ಶಸ್ತ್ರಚಿಕಿತ್ಸಾ ಘಟಕದಿಂದ

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ Read More »

ಕರಾವಳಿ

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್‌ವುಡ್‌ ಸ್ಟಾರ್ ಅಭಿಷೇಕ್ ಅಂಬರೀಶ್‌ ಹಾಗೂ ಅವಿವಾ ಬಿದಪ್ಪ ದಂಪತಿಗೆ ಗಂಡು ಮಗು ಜನಿಸಿದೆ. ಇಂದು (ನ 12) ಮಗು ಜನಿಸಿದೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದು, ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಭಿಷೇಕ್-‌ ಅವಿವಾ 2023ರಲ್ಲಿ ವಿವಾಹ ಆಗಿದ್ದರು. ಇವರ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಈಗ ಕುಟುಂಬದಿಂದ ಖುಷಿಯ ಸುದ್ದಿ ಹೊರ ಬಂದಿದೆ. ರೆಬೆಲ್ ಸ್ಟಾರ್

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಸಿನಿಮಾ
Scroll to Top