ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ನ. 09. ಕೆವೈಸಿ ಅಪ್‌ ಡೇಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರ ಮೊಬೈಲ್ ಗೆ ನ.7ರಂದು ಕೆನರಾ ಬ್ಯಾಂಕ್‌ ನವರು ಎಂದು ಹೇಳಿ ಕರೆ ಮಾಡಿದ್ದ ಅಪರಿಚಿತರು, ಕೆವೈಸಿ ಅಪ್‌ಡೇಟ್ ಆಗದೇ ಇರುವುದರಿಂದ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿ, ಬಳಿಕ ದೂರುದಾರರಿಂದ ಬ್ಯಾಂಕ್ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 09. ಸ್ಲೋಪಾಯಿಸನ್ ನೀಡಿ ಪತಿಯ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಶುಕ್ರವಾರದಂದು ಆದೇಶ ಹೊರಡಿಸಿದೆ. ಆರೋಪಿ ಪ್ರತಿಮಾಳನ್ನು ವಶಕ್ಕೆ ಪಡೆದ ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ.07ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್‌

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ನ. 09. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಸವಾರೆಯನ್ನು ಪುತ್ತೂರು ಖಾಸಗಿ ಕಾಲೇಜೊಂದರ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ- ಸಿಜೆಐ ಚಂದ್ರಚೂಡ್

(ನ್ಯೂಸ್ ಕಡಬ) newskadaba.com ನ. 09. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು, ‘ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ’ ಎಂದು ಕೇಳಿಕೊಂಡಿದ್ದಾರೆ. ಈ ಕುರಿತು ಶುಕ್ರವಾರದಂದು ಕೋರ್ಟ್ ಹಾಲ್‌ ನಲ್ಲಿ ಮಾತನಾಡಿದ ಅವರು, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ ಅರಿವಿಗೆ ಬಾರದಂತೆ ಎಷ್ಟೋ ಜನರನ್ನು ಭೇಟಿಯಾಗಿರುತ್ತೇವೆ. ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ತಿಳಿಸಿದ್ದಾರೆ.

ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ- ಸಿಜೆಐ ಚಂದ್ರಚೂಡ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ನ. 09. ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣಾ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ

(ನ್ಯೂಸ್ ಕಡಬ) newskadaba.com ನ. 09. ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನವೆಂಬರ್ 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದ್ದು, ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ ಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸುಮಾರು 130 ಮೀ. ಉದ್ದ, 3 ಮೀ. ಅಗಲವಿರುವ ಈ ಬ್ರಿಡ್ಜ್ ನಲ್ಲಿ ಏಕಕಾಲಕ್ಕೆ 200ಕ್ಕೂ ಮಿಕ್ಕ

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ Read More »

ಕರಾವಳಿ, ಕರ್ನಾಟಕ

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ನ. 09. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ.ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 09. ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಂಡು ಠಾಣಾ ಆವರಣದಲ್ಲಿ ಇರಿಸಲಾದ ವಾರಿಸುದಾರರು ಪತ್ತೆಯಾಗದ ಹಾಗೂ ಪ್ರಕರಣದಲ್ಲಿ ವಾರಿಸುದಾರರು ಈವರೆಗೂ ಬಾರದೇ ಶಿಥಿಲಾವಸ್ಥೆಗೆ ತಲುಪಿದ ಹಳೆಯ ವಾಹನಗಳ ವಿಲೇವಾರಿಗೆ ನ್ಯಾಯಾಲಯ ಹಾಗೂ ಮೇಲಾಧಿಕಾರಿಗಳು ಆದೇಶಿಸಿದ್ದು, ವಾಹನಗಳನ್ನು ನವೆಂಬರ್ 9 ರಂದು ಸಂಜೆ 4 ಗಂಟೆಗೆ ಕೊಣಾಜೆ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಕೊಣಾಜೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ನ. 09. ವೆನ್‍ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ.ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ Read More »

ಕರಾವಳಿ, ಕರ್ನಾಟಕ

ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ನ. 09. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್

ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top