ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಅ. 30. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿ ಇಂದು 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ದರ್ಶನ್‌ಗೆ ವೈದ್ಯಕೀಯ ವರದಿ ಆಧರಿಸಿಯೇ ಮಧ್ಯಂತರ ಜಾಮೀನು ನೀಡಲಾಗಿದೆ. ಹೀಗಾಗಿ, ದರ್ಶನ್ ಅವರು ಮಂಜೂರಾಗಿರುವ 6 ವಾರಗಳ ಜಾಮೀನನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ದರ್ಶನ್ ಅವರಿಗೆ ಜಾಮೀನು ಮಂಜೂರು […]

ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..! Read More »

ಕರ್ನಾಟಕ

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..!

(ನ್ಯೂಸ್ ಕಡಬ) newskadaba.com ಅ. 30. ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರದಂದು ಮುಂಜಾನೆ ನಡೆದಿದೆ. ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್

ಪಿಲಿಕುಳದಲ್ಲಿ ಹೊತ್ತಿ ಉರಿದ 2 ಇಲೆಕ್ಟ್ರಿಕ್ ವಾಹನಗಳು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಜಾನುವಾರು ಗಣತಿಗೆ ಇಂದು ಸಿ.ಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ)newskadaba.com, ಅ. 30 ಬೆಂಗಳೂರು: 21ನೇ ಸಾಲಿನ  ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು. ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರು, ಪಶು ಸಂಗೋಪನಾ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.ಜಾನುವಾರು ಗಣತಿ ಕಾರ್ಯ 2025ರ ಫೆಬ್ರವರಿ ತಿಂಗಳವರೆಗೆ ನಡೆಯಲಿದೆ.

ರಾಷ್ಟ್ರೀಯ ಜಾನುವಾರು ಗಣತಿಗೆ ಇಂದು ಸಿ.ಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಮಾಧ್ಯಮ ಅಕಾಡೆಮಿಯ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 30. ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ 2023 ಮತ್ತು 24ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ

ಮಾಧ್ಯಮ ಅಕಾಡೆಮಿಯ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು Read More »

ಕರ್ನಾಟಕ

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಅ. 30. ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ Read More »

ಕರಾವಳಿ

ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ

(ನ್ಯೂಸ್ ಕಡಬ) newskadaba.com ಅ. 30. ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ತಿಳಿದುಕೊಂಡು ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಮನೋಸ್ಥೈರ್ಯ ತರಬೇತಿ ಕಾರ್ಯಕ್ರಮವನ್ನು ಶಿಕ್ಷಕರಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್.ಕೆ ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ

ಶಾಲಾ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾವಹಿಸಿ- ಶಿಕ್ಷಕರಿಗೆ ಜಿ.ಪಂ ಸಿಇಓ ಕರೆ Read More »

ಕರಾವಳಿ

ಕೋಳಿಸಾಕಾಣಿಕೆ ಮತ್ತು ಫೋಟೋಗ್ರಫಿಯ ಉಚಿತ ತರಬೇತಿ: ಅರ್ಜಿ ಅಹ್ವಾನ

(ನ್ಯೂಸ್ ಕಡಬ)newskadaba.com, ಅ. 30 ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಹಾಗೂ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ

ಕೋಳಿಸಾಕಾಣಿಕೆ ಮತ್ತು ಫೋಟೋಗ್ರಫಿಯ ಉಚಿತ ತರಬೇತಿ: ಅರ್ಜಿ ಅಹ್ವಾನ Read More »

ಕರ್ನಾಟಕ

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 30. ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಮೃತಪಟ್ಟ ಘಟನೆ ವರದಿಯಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ

(ನ್ಯೂಸ್ ಕಡಬ) newskadaba.com ಅ. 30. ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ Read More »

ಕರಾವಳಿ
Scroll to Top