ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ

(ನ್ಯೂಸ್ ಕಡಬ) newskadaba.com ಅ. 29. ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಮಂಗಳವಾರದಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು. ಈ ಸಂದರ್ಭದಲ್ಲಿ ನಿವೃತಗೊಳ್ಳಲಿರುವ ಸರಸ್ವತಿ ಮತ್ತು ಚಿದಾನಂದ ದಂಪತಿ ಕೊಡುಗೆಯಾಗಿ ನೀಡಿದ ದೀಪವನ್ನೂ ಹಸ್ತಾಂತರಿಸಿದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ […]

ಅರಂತೋಡು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿಯವರಿಗೆ ವಿದಾಯ ಸಮಾರಂಭ Read More »

ಕರಾವಳಿ
crime, arrest, suspected

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 29. ವಿಮಾನಯಾನ, ಹೋಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಆತ 2021 ರ ಪ್ರಕರಣದಲ್ಲಿ ಬಂಧನ ದಾಖಲೆಯನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಬಂಧಿಸಿದೆ.      

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ

(ನ್ಯೂಸ್ ಕಡಬ) newskadaba.com ಚಾಡ್, ಅ. 29. ಆಫ್ರಿಕಾದ ಚಾಡ್ ದೇಶದಲ್ಲಿ ಬೋಕೊ ಹರಾಮ್ ಭಯೋತ್ಪಾದಕರು ಚಾಡ್ ಸೇನೆಯ ಮೇಲೆ ದಾಳಿ ನಡೆಸಿದ್ದರಿಂದ 40 ಸೈನಿಕರು ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿ ಯುನಿಟ್ ಕಮಾಂಡರ್ ಕೂಡ ಮೃತಪಟ್ಟಿದ್ದಾರೆ ಎಂದು ಚಾಡ್ ಸೇನಾ ವಕ್ತಾರರು ಹೇಳಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಚಾಡ್ ಅಧ್ಯಕ್ಷ ಮಹಮತ್ ಇಡ್ರಿಸ್ ಡೆಬಿ ಅವರು, ‘ನಮ್ಮ ಮೇಲೆ ದಾಳಿ ಮಾಡಿದ ಉಗ್ರರನ್ನು ಪ್ರತಿ ದಾಳಿ ಮಾಡಿ ಹತ್ಯೆ ಮಾಡಿದ್ದೇವೆ. ಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ)newskadaba.com, ಅ. 29 ಜಮ್ಮು: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರ ಸಮೀಪ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 27 ಗಂಟೆಗಳ ಅವಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಸೇನಾ ಆಂಬ್ಯುಲೆನ್ಸ್ ಗೆ ಗುಂಡು ಹಾರಿಸಿದ ಮೂವರು ಭಯೋತ್ಪಾದಕರಲ್ಲಿ ಓರ್ವ

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಕ್ಯಾನ್ ಬೆರಾ, ಅ. 29. ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮ್ಯಾಥ್ಯೂ ವೇಡ್ ಅವರು ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ. 2012ರ ಫೆಬ್ರವರಿಯಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಹಾಗೇಯೇ 2021ರ ಜುಲೈನಲ್ಲಿ ವೆಸ್ಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..!

(ನ್ಯೂಸ್ ಕಡಬ) newskadaba.com ಅ. 29. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ದೀಪಾವಳಿ ಪ್ರಯುಕ್ತ ಇಂದಿನಿಂದ (ಅ.29) ನ.02ರ ಶನಿವಾರದವರೆಗೆ ಐದು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಫುಲ್ ಅಲ್-ಫಹಮ್ ಮಂದಿ, ಫುಲ್ ಚಿಕನ್ ಲಾಲಿ ಪಾಪ್, ಮಯೋನಿಸ್, ಸಲಾಡ್, 5 ಪರೋಟಾ & ಗ್ರೇವಿ, 1 ltr. Sprite ಕೇವಲ

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..! Read More »

ಕರಾವಳಿ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ Read More »

ಕರ್ನಾಟಕ, ಸಿನಿಮಾ

ಅಡುಗೆ ಎಣ್ಣೆಯ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ದೀಪಾವಳಿ ಹಬ್ಬ ಬರುತ್ತಿದ್ದಂತೆಯೇ ಅಡುಗೆ ಎಣ್ಣೆಯ ಬೆಲೆ ಒಂದು ಲೀಟರ್‌ಗೆ  ₹1ರಿಂದ  ₹5 ರವರೆಗೆ ಹೆಚ್ಚಾಗಿದೆ. ಈಗಾಗಲೇ ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿರುವ ನಡುವೆಯೇ ಪುನಃ ಅಡುಗೆ ಎಣ್ಣೆ ದರ ಹೆಚ್ಚಾಗಿದ್ದು ಬಡ, ಮಧ್ಯಮ ವರ್ಗದ ಗ್ರಾಹಕರನ್ನು ಕಂಗೆಡಿಸಿದೆ. ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆಯ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಳ ಮಾಡಿದ್ದರಿಂದ ಏಕಾಏಕಿ ಅಡುಗೆ ಎಣ್ಣೆ ದರ ₹20ರಿಂದ ₹25ರವರೆಗೆ ಹೆಚ್ಚಳವಾಗಿತ್ತು. ಇದೀಗ ಪುನಃ ಅಡುಗೆ

ಅಡುಗೆ ಎಣ್ಣೆಯ ಬೆಲೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಇಂದು ರಾಜ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಹವಮಾನ ವರದಿ Read More »

ಕರ್ನಾಟಕ

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಹಾಸನ, ಅ.29.  ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು.    

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ Read More »

ಕರ್ನಾಟಕ
Scroll to Top