ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ […]

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಅ.25, ತಿರುಪತಿ: ಕಳೆದ ಹಲವು ದಿನದಿಂದ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿತ್ತು, ಆದರೆ ಈಗ  ಜಗತ್ಪ್ರಸಿದ್ಧ ದೇಗುಲವಾದ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ ಕೇಳಿ ಬಂದಿದೆ. ಆಂಧ್ರಪ್ರದೇಶದಲ್ಲಿರುವ ಈ  ತಿರುಪತಿ ದೇವಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್

ಎಸ್.ಸಿ.ಎಸ್. ಆಸ್ಪತ್ರೆಯ 37ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಅ. 25. 37ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ದಿ. ಸೊರಕೆ ಚಂದ್ರಶೇಖರ್ – ಸ್ಥಾಪಕಾಧ್ಯಕ್ಷರು ಎಸ್.ಸಿ.ಎಸ್. ಆಸ್ಪತ್ರೆ ಇವರ ಸ್ಮರಣಾರ್ಥವಾಗಿ ನೂರಾರು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸೊರಕೆ ಚಂದ್ರಶೇಖರ್ ಸ್ಮಾರಕ ವಾರ್ಷಿಕ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶ್ರೀ. ಐವನ್ ಡಿಸೋಜ- ಸದಸ್ಯರು, ವಿಧಾನಸಭಾ ಪರಿಷತ್, ಕರ್ನಾಟಕ ಸರ್ಕಾರ, ಡಾ. ಜೆ. ಪಿ. ಆಳ್ವ- ಹಿರಿಯ ವೈದ್ಯರು, ನಿವೃತ್ತ ಡೀನ್ ಹಾಗೂ ಪ್ರಾಧ್ಯಾಪಕರು, ಮೆಡಿಸಿನ್ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು,

ಎಸ್.ಸಿ.ಎಸ್. ಆಸ್ಪತ್ರೆಯ 37ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ Read More »

ಕರಾವಳಿ

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ

(ನ್ಯೂಸ್ ಕಡಬ) newskadaba.com ಕೇರಳ, ಅ.25. ಯುಪಿಎಸ್ ಸಿಯಲ್ಲಿ ಮೊದಲ ಪ್ರಯತ್ನದಲ್ಲೇ ಪರೀಕ್ಷೆಯಲ್ಲಿ ಟಾಪರ್‌ ಆಗಿ ಪಾಸ್‌ ಆದ ಫಾಬಿ ರಶೀದ್ ಅವರ ಯಶೋಗಾಥೆ ಇಲ್ಲಿದೆ. ಫಾಬಿ ರಶೀದ್ ಕೇರಳದ ಅಲಪ್ಪುಳದ ನಿವಾಸಿಯಾಗಿದ್ದು, 1999ರ ಜೂನ್ 23ರಂದು ಜನಿಸಿದ್ದಾರೆ. ಅವರು 10 ನೇ ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರ ಪೋಷಕರಿಬ್ಬರೂ ವೈದ್ಯರು. ಫಾಬಿಯ ತಾಯಿ ಮಕ್ಕಳ ತಜ್ಞೆ, ಇತ್ತೀಚೆಗಷ್ಟೇ ಸರ್ಕಾರಿ ಕೆಲಸದಿಂದ ನಿವೃತ್ತಿಯಾಗಿದ್ದಾರೆ. ಫಾಬಿಯ ತಂದೆ ಆಯುರ್ವೇದ ತಜ್ಞರಾಗಿದ್ದು, ಅವರೂ ಸರ್ಕಾರಿ

UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ Read More »

ರಾಷ್ಟ್ರೀಯ ನ್ಯೂಸ್

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 25. ಸರಕಾರಿ ಉದ್ಯೋಗ ಒದಗಿಸಿಕೊಡುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ಗ್ರಾಮ ನಿವಾಸಿ ರಕ್ಷಿತಾ ಕೆ. ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪೆರ್ಲದ ಬರಮೇಲು ಮನೆ ನಿವಾಸಿ ಅಶ್ವಿನ್ ಕುಮಾರ್ ಶೆಟ್ಟಿ ಎಂಬವರ ಪತ್ನಿ ರಕ್ಷಿತಾ ಎಂಬವರ ಕ್ಲಾಸ್ ಮೇಟ್ ಆಗಿರುವ ಸಚಿತಾ ರೈ ಎಂಬವರು ಇರಿಗೇಶನ್ ಇಲಾಖೆಯಲ್ಲಿ ಕೆಲಸಕೊಡುವುದಾಗಿ ಹೇಳಿ

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಕೊಲ್ಕತ್ತಾ, ಅ.25. ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಜನಜೀವನ ತತ್ತರಿಸಿದೆ. ವಿಮಾನಯಾನ, ರೈಲ್ವೇ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ 10ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.  

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ Read More »

ರಾಷ್ಟ್ರೀಯ ನ್ಯೂಸ್

ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ 12 ಯೋಜನೆಗಳು: ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಕೇಂದ್ರ ಸರಕಾರವು ಸಂಘಟಿತವಲ್ಲದ ಕಾರ್ಮಿಕ ವಲಯಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಇ–ಶ್ರಮ್ ಪೋರ್ಟಲ್ ನಲ್ಲಿ 12 ಯೋಜನೆಗಳನ್ನು ಒಟ್ಟುಗೂಡಿಸಿ ‘ಇಶ್ರಮ್-ಒನ್ ಸ್ಟಾಪ್ ಪರಿಹಾರ’ ಎಂಬುದನ್ನು ಪ್ರಾರಂಭಿಸಿದೆ. ಇದು ಅಸಂಘಟಿತ ವಲಯದ ಉದ್ಯೋಗಿಗಳಿಗೆ ಪ್ರೋತ್ಸಾಹಕವಾಗಿದೆ. ವಿವಿಧ ಯೋಜನೆಗಳು ಒಂದೇ ಪ್ಲಾಟ್‌ಫಾರ್ಮ್‌ನಲ್ಲಿ  ಸಂಯೋಜಿಸುವುದರಿಂದ ಸರ್ಕಾರದ ನಾನಾ ಯೋಜನೆಗಳ ಪ್ರಯೋಜನ ಪಡೆಯುವುದು ಕಾರ್ಮಿಕರಿಗೆ ಸುಲಭಸಾಧ್ಯ.ಅಸಂಘಟಿತ ಕಾರ್ಮಿಕರಿಗೆ ಮಾಹಿತಿಯ ಲಭ್ಯತೆಯ ಕೊರತೆ ಹಾಗೂ ಅನೇಕ ಕಾರಣಗಳಿಂದ ಸರ್ಕಾರದ ಪ್ರಯೋಜನಗಳನ್ನು ಪಡೆಯುವಲ್ಲಿ ವಿಫಲರಾಗಿರುತ್ತಾರೆ. ಆದರೆ ಇ ಶ್ರಮ್

ಇ-ಶ್ರಮ್ ಪೋರ್ಟಲ್ ಅಡಿಯಲ್ಲಿ 12 ಯೋಜನೆಗಳು: ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ Read More »

ಬ್ರೇಕಿಂಗ್ ನ್ಯೂಸ್

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಅ.25. ನಿವೃತ್ತ ನೌಕರರಿಗೆ ಸಿಗಬೇಕಾದ ಹಕ್ಕಿನ ಮೊತ್ತ ಸಿಗುತ್ತಿಲ್ಲ. ರಾಜ್ಯ ಸರಕಾರಕ್ಕೆ ನಮ್ಮ ಸಮಸ್ಯೆಯನ್ನು ಮುಟ್ಟಿಸಿ 7ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಹ ಸಂಚಾಲಕಿ ಮಂಜುಳಾ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ 1-7-2022 ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಸದಸ್ವತ್ವ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ Read More »

ಕರಾವಳಿ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25. ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಸಿಜೆಐ ಚಂದ್ರಚೂಡ್ ರವರು ನವೆಂಬರ್ 10ರಂದು ನಿವೃತ್ತರಾಗಲಿದ್ದು, ಡಿ ವೈ ಚಂದ್ರಚೂಡ್‌ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್‌ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು. 2005ರಲ್ಲಿ ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ Read More »

ರಾಷ್ಟ್ರೀಯ ನ್ಯೂಸ್
Scroll to Top