ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ

(ನ್ಯೂಸ್ ಕಡಬ) newskadaba.com ಅ.23,  ಪುತ್ತೂರು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿರುವ ಪುತ್ತೂರು ತಾಲೂಕಿನ ಎಲ್ಲ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಸ್ಥಾನವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಹೊಸ ವರ್ಷದ ಆಗಮನದೊಂದಿಗೆ ಹೊಸ ಶಿಕ್ಷಣ ಸೌಧದಲ್ಲಿ ಕಾರ್ಯಾರಂಭ ಮಾಡುವ ಯೋಗ ಅಧಿಕಾರಿಗಳಿಗೆ ಸಿಗಲಿದೆ. ಪುತ್ತೂರು ತಾಲೂಕಿನಲ್ಲಿ ಹೊಸ ಬಿಇಒ ಕಚೇರಿ ನಿರ್ಮಾಣವಾಗುತ್ತಿದೆ. ನೆಲ್ಲಿಕಟ್ಟೆಯಲ್ಲಿರುವ ಸರ್ಕಾರಿ ಶಾಲೆಯ ಜಮೀನಿನ ಒಂದು ಪಾರ್ಶ್ವದಲ್ಲೇ ಈ […]

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.23. ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಮೃತಪಟ್ಟಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಎಂದು ಗುರುತಿಸಲಾಗಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಮೃತಪಟ್ಟಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು. ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಇದಕ್ಕಾಗಿ ಸರ್ಕಾರ 160 ಕೋಟಿ

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್ Read More »

ಕರಾವಳಿ

ಹಸಿರು ಇಂಧನ ಉತ್ಪಾದನೆಗೆ ಹೊಸ ನೀತಿ: ಸಚಿವ ಎಂ.ಬಿ ಪಾಟೀಲ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು .  ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆಗೆ ಒತ್ತು ನೀಡುವ ಸಂಬಂಧ ಇಂಧನ ಇಲಾಖೆ ಜೊತೆಗೂಡಿ ಸೂಕ್ತ ನೀತಿ ರೂಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಖನಿಜ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಹಸಿರು ಇಂಧನ ಮತ್ತು ಕೋರ್ ಉತ್ಪಾದನಾ ವಲಯಗಳಿಗೆ ಸಂಬಂಧಪಟ್ಟ ಸರ್ಕಾರದ ವಿಷನ್‌ ಗ್ರೂಪ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ವಿಪುಲ ಅವಕಾಶಗಳಿವೆ. ಈ ಸಂಬಂಧ

ಹಸಿರು ಇಂಧನ ಉತ್ಪಾದನೆಗೆ ಹೊಸ ನೀತಿ: ಸಚಿವ ಎಂ.ಬಿ ಪಾಟೀಲ್ Read More »

ಕರ್ನಾಟಕ

ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.23. ವಾರೀಸುದಾರರಿಲ್ಲದ ಮತ್ತು ವಾರೀಸುದಾರರ ಸ್ವೀಕರಿಸಲು ನಿರಾಕರಿಸಿದ 5 ಹಳೆಯ ದ್ವಿಚಕ್ರ ವಾಹನಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವಠಾರದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10ಗಂಟೆಗೆ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರ (ದೂರವಾಣಿ ಸಂಖ್ಯೆ 0824-2220518) ಪೊಲೀಸ್ ನಿರೀಕ್ಷಕರು ಮಂಗಳೂರು ದಕ್ಷಿಣ ಠಾಣೆ (ಮೊಬೈಲ್ ಸಂಖ್ಯೆ 9480805339) ಸಂಪರ್ಕಿಸುವಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.

ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.  

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಮೂಲವ್ಯಾಧಿ, Piles, Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವಂತಹ ರೋಗಿಗಳ ಉಪಯೋಗಕ್ಕಾಗಿ ಆಯುರ್ವೇದದ ಯಶಸ್ವಿ ಶಸ್ತ್ರಚಿಕಿತ್ಸಾ ವಿಧಾನವಾದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಜಿಲ್ಲೆಯ ಹೆಸರಾಂತ ಆಯುರ್ವೇದ ಶಸ್ತ್ರಚಿಕಿತ್ಸಕ ಡಾ.ರವಿಶಂಕರ್ ಪೆರುವಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್, ಬಡರೋಗಿಗಳಿಗೆ ಆಯುರ್ವೇದ ಚಿಕಿತ್ಸೆಗಳ ಉಪಯೋಗವನ್ನು ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ Read More »

ಕರಾವಳಿ

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ

(ನ್ಯೂಸ್ ಕಡಬ) newskadaba.com ಅ.23.  ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ ಕಡಲತೀರದ ನಿರ್ವಹಣಾ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ Read More »

ಕರಾವಳಿ
Scroll to Top