ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. […]

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಲಿಖಿತ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು Read More »

ಕರಾವಳಿ, ಕರ್ನಾಟಕ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ

(ನ್ಯೂಸ್ ಕಡಬ) newskadaba.com ಅ. 21. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ವಲಯದ ಮರ್ಧಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಕ್ಟೋಬರ್ ತಿಂಗಳ ಮಾಸಿಕ ಸಭೆಯು ಬಿಳಿನೆಲೆ ವಲಯದ ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೌರ್ಯಘಟಕದ ಸ್ವಯಂ ಸೇವಕರುಗಳು ಸಾಮಾಜಿಕ ಸೇವೆ ಹಾಗೂ ವಿಪತ್ತು ಸೇವೆಯಲ್ಲಿ ತೊಡಗಿಕೊಳ್ಳುವುದರಿಂದ ಬಿಳಿನೆಲೆ ವಲಯದ ಜನರಲ್ಲಿ ವಿಪತ್ತಿನ ಬಗ್ಗೆ ಭಯವನ್ನು ಹೋಗಲಾಡಿಸಿ ಬರವಸೆಯನ್ನು

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ Read More »

ಕರಾವಳಿ

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ನ ಲ್ಲಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..!

(ನ್ಯೂಸ್ ಕಡಬ) newskadaba.com ಅ. 20. ಕಡಬ ತಾಲೂಕಿನ ಪ್ರಥಮ ಮಂದಿ ಬಿರಿಯಾನಿ ಹೋಟೆಲ್, “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್” ಶುಕ್ರವಾರದಂದು (ಅ.18) ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಶುಭಾರಂಭಗೊಂಡಿತು. ನೂತನ ಹೋಟೆಲ್ ನಲ್ಲಿ ಮಂದಿ ಬಿರಿಯಾನಿ, ಚಿಕನ್ ಬಿರಿಯಾನಿ, ಅಲ್-ಫಹಮ್, ಶವರ್ಮಾ, ಟಿಕ್ಕ, ಗೋಬಿ ಮಂಚೂರಿ, ಚಿಕನ್ ಮಂಚೂರಿ, ಫ್ರೈಡ್ ರೈಸ್, ನೂಡಲ್ಸ್ ಸೇರಿದಂತೆ ಮಿಲ್ಕ್ ಶೇಕ್, ಫ್ರೆಶ್ ಜ್ಯೂಸ್ ಮತ್ತು ಐಸ್ ಕ್ರೀಂ ಗಳು ಲಭ್ಯವಿರಲಿದ್ದು, 10

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..! Read More »

ಅಡುಗೆ, ಕರಾವಳಿ

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..! Read More »

ಕ್ರೈಮ್ ನ್ಯೂಸ್, ಸಿನಿಮಾ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಅ.19 ಉಡುಪಿ:  ಬಿಜೆಪಿ ತನ್ನ ಅತಿಯಾದ ಆತ್ಮವಿಶ್ವಾಸದಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಫಲಿತಾಂಶ ಹಾಗೂ ಮತದಾರರ ಮನಸ್ಥಿತಿಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಬಲವರ್ಧನೆಗೆ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ, ನಾವು ನಮ್ಮ ಅಭ್ಯರ್ಥಿಯ ಯಶಸ್ಸಿಗೆ ಬೇಕಾದ ಎಲ್ಲಾ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಒಂದೇ ದಿನದಲ್ಲಿ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ!

(ನ್ಯೂಸ್ ಕಡಬ) newskadaba.com ಅ.19 ನವದೆಹಲಿ:  ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಇಂದು ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೋದ ದೆಹಲಿ ಮತ್ತು ಮುಂಬೈನಿಂದ ಇಸ್ತಾನ್‌ಬುಲ್‌ಗೆ ಹಾಗೂ ಜೋಧ್‌ಪುರದಿಂದ ದೆಹಲಿಗೆ ಮತ್ತು ಉದಯಪುರದಿಂದ ಮುಂಬೈ ವಿಸ್ತಾರಾ ವಿಮಾನಗಳಿಗೂ ಬಾಂಬ್

ಇಂದು ಒಂದೇ ದಿನದಲ್ಲಿ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ! Read More »

ಬ್ರೇಕಿಂಗ್ ನ್ಯೂಸ್
Scroll to Top