ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ಕನ್ನಡ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ನಿಧನರಾಗಿದ್ದಾರೆಂದು ಎಂದು ತಿಳಿದುಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆಂದು ವರದಿಗಳು ತಿಳಿದುಬಂದಿದೆ. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿದ್ದು, ಇದಕ್ಕಾಗಿ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ […]

ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ Read More »

ಕ್ರೈಮ್ ನ್ಯೂಸ್, ಸಿನಿಮಾ

ಹಮಾಸ್ ಮುಖ್ಯಸ್ಥನ ಕೊನೆ ಕ್ಷಣದ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

(ನ್ಯೂಸ್ ಕಡಬ) newskadaba.com ಜೆರುಸಲೇಂ, ಅ.18. ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ ಹತ್ಯೆ ಮಾಡಲಾಗಿದ್ದು, ಆತನ ಕೊನೆಯ ಕ್ಷಣಗಳ ಡ್ರೋನ್ ದೃಶ್ಯವನ್ನು ಇಸ್ರೇಲ್ ಅವರು ಬಿಡುಗಡೆ ಮಾಡಿದ್ದಾರೆ. ಇಸ್ರೇಲ್ ರಕ್ಷಣಾ ಪಡೆ ಮಾಡಿದ ಈ ವಿಡಿಯೋದಲ್ಲಿ ಹಾನಿಗೊಳಗಾದ ಮತ್ತು ಶಿಥಿಲಗೊಂಡ ಮನೆಯೊಳಗೆ ಸಿನ್ವಾರ್ ಮಂಚದ ಮೇಲೆ ಕುಳಿತಿರುವುದನ್ನು ವೀಡಿಯೋ ತೋರಿಸಿದೆ. ಆತನ ಅಂತಿಮ ಕ್ಷಣಗಳಲ್ಲಿ, ಡ್ರೋನ್‌ಗೆ ವಸ್ತುವನ್ನು ಎಸೆಯುವುದನ್ನು ಕಾಣಬಹುದಾಗಿದೆ. ಈ ವಿಯೋವನ್ನು ಇಸ್ರೇಲ್ ಯಾಹ್ಯಾ ಸಿನ್ವಾರ್‌ನ ‘ಕೊನೆಯ ಕ್ಷಣಗಳು’ ಎಂದು ಹೇಳಿ ಪೋಸ್ಟ್ ಮಾಡಿದೆ. ಇನ್ನು

ಹಮಾಸ್ ಮುಖ್ಯಸ್ಥನ ಕೊನೆ ಕ್ಷಣದ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ’- ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.18. ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ ಖರೀದಿಯನ್ನು ಹೆಚ್ಚಳ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3ನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ. 2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ

‘ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ’- ಸಚಿವ ಪ್ರಹ್ಲಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಅ.18, ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಅವರ ಕೊಯಮತ್ತೂರ್‌ನ ಇಶಾ ಫೌಂಡೇಶನ್‌ನ ವಿರುದ್ಧ ಆರೋಪಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಆ‍ಶ್ರಮದಲ್ಲಿ ಅಕ್ರಮವಾಗಿ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬಂಧನದಲ್ಲಿಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ಕಾಮರಾಜ್ ಎಂಬವವರ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಅದನ್ನು ವಜಾಗೊಳಿಸಿದೆ. ಇನ್ನು ಇದಕ್ಕೂ ಮುನ್ನ ಇಶಾ ಫೌಂಡೇಶನ್‌ ವಿರುದ್ಧದ ಆರೋಪಗಳಿಗೆ ಪೂರಕವಾದ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ತಮಿಳುನಾಡು

ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ‌ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿರುವ ಕರ್ನಾಟಕ ತಂಡ ಶುಕ್ರವಾರದಿಂದ ಕೇರಳ ವಿರುದ್ಧ ಕಣಕ್ಕಿಳಿಯಲಿದೆ. ಪಂದ್ಯಕ್ಕೆ ನಗರದ ಹೊರವಲಯದ ಆಲೂರು ಕೆ‌ಎಸ್‌ಸಿಎ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮಳೆಯಿಂದ ಮೈದಾನ ಕೊಂಚ ಒದ್ದೆಯಾಗಿರುವುದರಿಂದ ಟಾಸ್ ಕೊಂಚ ತಡವಾಗಲಿದೆ. ಕಳೆದ ವಾರ ಇಂದೋರ್‌ನಲ್ಲಿ ನಡೆದಿದ್ದ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು. ಮಳೆಯಿಂದಾಗಿ ಇತ್ತಂಡಗಳ ಮೊದಲ ಇನ್ನಿಂಗ್ಸ್ ಕೂಡ ಮುಗಿದಿರಲಿಲ್ಲ.

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್ Read More »

ಕರಾವಳಿ

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ

(ನ್ಯೂಸ್ ಕಡಬ) newskadaba.com ಅ.18, ಚಿಕ್ಕಮಗಳೂರು. ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್‌ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿಧಾರಣೆ ಹೆಚ್ಚಾಗುತ್ತಿದ್ದಂತೆ ಇತ್ತ ಕಾಫಿಪುಡಿ ಬೆಲೆಯೂ ಗಗನಕ್ಕೇರಿದೆ.  

ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ Read More »

ಬ್ರೇಕಿಂಗ್ ನ್ಯೂಸ್
Scroll to Top