ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ […]

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ

(ನ್ಯೂಸ್ ಕಡಬ) newskadaba.com ಅ.18, ಚಿಕ್ಕಮಗಳೂರು. ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್‌ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿಧಾರಣೆ ಹೆಚ್ಚಾಗುತ್ತಿದ್ದಂತೆ ಇತ್ತ ಕಾಫಿಪುಡಿ ಬೆಲೆಯೂ ಗಗನಕ್ಕೇರಿದೆ.  

ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ Read More »

ಬ್ರೇಕಿಂಗ್ ನ್ಯೂಸ್

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ.18. ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಜಾಮೀನು ವಿಚಾರವಾಗಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿತ್ತು. ಜಾಮೀನಿಗೂ ತಡೆಯಾಜ್ಞೆ ನೀಡುವ ಬಗ್ಗೆ ಚರ್ಚೆಯಾಗಿತ್ತು, ಈ ವಿಚಾರವಾಗಿ ಭವಾನಿ ರೇವಣ್ಣಗೆ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಬಿಗ್ ರಿಲೀಫ್ Read More »

ರಾಷ್ಟ್ರೀಯ ನ್ಯೂಸ್

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ ಮೇಲೆ ಮೂವರು ಹೋಗುತ್ತಿದ್ದ ವೇಳೆ ರೋಪ್ ತುಂಡಾಗಿದೆ. ಮೂವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.  

ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ Read More »

ಕರಾವಳಿ

ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.   22 ಕ್ಯಾರಟ್‌ ಚಿನ್ನದ ದರಗಳ ವಿವರ

ಚಿನ್ನದ ಬೆಲೆ ಮತ್ತೆ ಏರಿಕೆ Read More »

ಕರಾವಳಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ.18. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ

ಮೂಡುಬಿದಿರೆ: ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ

ಬಿಜೆಪಿ ಟಿಕೆಟ್ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇವರುಗಳು ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ಹಣ

ಬಿಜೆಪಿ ಟಿಕೆಟ್ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್ Read More »

ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಅ.18. ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹ 5 ಕೋಟಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗಿರುತ್ತದೆ ಎಂದು ಕಳುಹಿಸಿದವರು

ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.18. ಪಡನ್ನ ಆಯಿತ್ತಲ ಸಮುದ್ರದಲ್ಲಿ ಬೋಟ್ ದುರಂತದಲ್ಲಿ ನಾಪತ್ತೆಯಾದ ಬೆಸ್ತನ ಮೃತದೇಹ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಎಂ.ರಾಜ ಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಿಲ್ಪಾ ನೇತೃತ್ವ ನೀಡಿದ್ದರು. ದುರಂತದಲ್ಲಿ ಮೃತಪಟ್ಟ ಅಬೂಬಕ್ಕರ್ ರವರ ಮೃತ ದೇಹ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತಕ್ಕೀಡಾಗಿತ್ತು. ದೋಣಿಯಲ್ಲಿದ್ದ 37 ಮಂದಿಯಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು. ಓರ್ವ

ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಅ.18. ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ  ಪ್ರದರ್ಶನ ನೀಡಿ ಮೈಸೂರಿನ ಸಾಂಸ್ಕೃತಿಕ ತಂಡದ ತೀರ್ಪುಗಾರರ ಮೆಚ್ಚುಗೆ ಪಡೆದ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ , ಸಾಂಸ್ಕೃತಿಕ ತಂಡ ಯುವ ದಸರದಲ್ಲಿ ದಕ್ಷಿಣ ಕನ್ನಡ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ಸಾವಿರಾರು ಪ್ರೇಕ್ಷಕರ ಗಮನ ಸೆಳೆದರು.   ಕಾಲೇಜಿನ ಪ್ರಾಂಶುಪಾಲರಾದ ಡಾ ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ತಂಡದ ಸಂಯೋಜಕರಾದ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ Read More »

ಕರಾವಳಿ
Scroll to Top