ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ

(ನ್ಯೂಸ್ ಕಡಬ) news kadaba.com ಅ. 14. ಹಂಪಿಯ ಆನೆಗೊಂದಿಯಲ್ಲಿ ಕಳೆದೊಂದು ವಾರದಿಂದ ಫೋಟೋ ಕ್ಲಿಕ್ಕಿಸಲು ಹಾಗೂ ವಿಡಿಯೋ ತೆಗೆದುಕೊಳ್ಳಲು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ)ಯ ಕೆಲ ಅಧಿಕಾರಿಗಳು ನಿರ್ಬಂಧ ಹೇರುತ್ತಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ Read More »

ಕರ್ನಾಟಕ

ಹೃದಯಾಘಾತ- ಗ್ರಾಮ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ. 14. ಹೃದಯಘಾತದಿಂದಾಗಿ ಗ್ರಾಮ ಸಹಾಯಕರೋರ್ವರು ಮೃತಪಟ್ಟ ಘಟನೆ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮಕುಂಜ ಗ್ರಾಮದ ದೊಡ್ಡ ಉರ್ಕ ನಿವಾಸಿ, ರಾಮಕುಂಜ ಗ್ರಾಮ ಸಹಾಯಕ ಲಿಂಗಪ್ಪ ಗೌಡ ಎಂದು‌ ಗುರುತಿಸಲಾಗಿದೆ. ಇವರಿಗೆ ಐದು ದಿನದ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸಾಗಿದ್ದರು. ಆದರೆ ಅ.13ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ಲಿಂಗಪ್ಪ ಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ರಾಮಕುಂಜ

ಹೃದಯಾಘಾತ- ಗ್ರಾಮ ಸಹಾಯಕ ನಿಧನ Read More »

ಕರಾವಳಿ

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ

(ನ್ಯೂಸ್ ಕಡಬ) newskadaba.com ಅ. 14 . ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ. ಡಾ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ರುದ್ರಿ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..!

(ನ್ಯೂಸ್ ಕಡಬ) newskadaba.com ಅ. 14 . ಪತಿಗೆ ಕೈ ಕೊಟ್ಟು ಪರಾರಿಯಾಗಿದ್ದ ಮಹಿಳೆಯೋರ್ವಳು ಪ್ರಿಯಕರನೊಂದಿಗೆ ಸೇರಿ ತಾನು ಜನ್ಮ ನೀಡಿದ್ದ ಕರುಳ ಕುಡಿಗಳನ್ನೇ ಕೊಲೆ ಮಾಡಿ ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿರುವ ಎ.ಕೆ ಕಾಲೋನಿ ನಿವಾಸಿ 24 ವರ್ಷದ ಮಹಿಳೆ ತನ್ನ ಮೂರು ವರ್ಷ ಹಾಗೂ 11 ತಿಂಗಳ ಕರುಳ ಕುಡಿಗಳನ್ನೇ ಬಲಿ ಪಡೆದ ಕ್ರೂರಿ ತಾಯಿ.

ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಡಾ. ವಿವೇಕ್ ಮೂರ್ತಿ

(ನ್ಯೂಸ್ ಕಡಬ) news kadaba ಅ. 14. ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದ್ದು, ಮಾನಸಿಕ ಆರೋಗ್ಯದ ಕುರಿತು ಗಮನಹರಿಸಬೇಕಾದ ತುರ್ತು ಅಗತ್ಯವಿದೆ ಎಂದು ಯುಎಸ್ ಸರ್ಜನ್ ಜನರಲ್ ಡಾ ವಿವೇಕ್ ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತನಾಡಿದ ಅವರು, ಮಾನಸಿಕ ಆರೋಗ್ಯದ ಕುರಿತು ಕಾಳಜಿ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಅನೇಕ ಯುವಕರು ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದರೂ ಸಂಪರ್ಕ ಕಡಿತಗೊಂಡಿದೆ ಎಂದು ವರದಿ ಮಾಡುತ್ತಾರೆ, ಸಾಮಾಜಿಕ

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಡಾ. ವಿವೇಕ್ ಮೂರ್ತಿ Read More »

ಆರೋಗ್ಯ ಮಾಹಿತಿ
Crime

ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್‌ ನಲ್ಲಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 14 . ಸ್ನೇಹಿತರ ಜೊತೆ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ನಗರ ಹೊರವಲಯದ ಕೋಟನೂರ (ಡಿ)ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕನೇ ತರಗತಿಯ ಹೇರೂರು(ಬಿ) ಗ್ರಾಮದ ಶೇಖರ ಶಾಣಪ್ಪ ಎಂದು ಗುರುತಿಸಲಾಗಿದೆ. ಕೋಟನೂರ(ಡಿ) ಗ್ರಾಮದಲ್ಲಿ ಅಪಾರ್ಟಮೆಂಟ್‌ ಗಳ ನಿರ್ಮಾಣಕ್ಕಾಗಿ ಹಾಕಲಾಗಿರುವ ಖಾಲಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗಿದ್ದ ಸೆಪ್ಟಿಂಕ್ ಟ್ಯಾಂಕ್‌ ಒಳಗೆ ಬಾಲಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮೃತ ಬಾಲಕ ಮೂಲತಃ ಹೇರೂರ

ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್‌ ನಲ್ಲಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರ ಟಿ20 ವಿಶ್ವಕಪ್; ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಗೆಲುವು

(ನ್ಯೂಸ್ ಕಡಬ) newskadaba.com ಅ. 14 . ಮಹಿಳೆಯರ ಟಿ20 ವಿಶ್ವಕಪ್ ನ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡ ಭಾರತ ತಂಡದ ವಿರುದ್ಧ 9 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿದೆ. ಎ ಗುಂಪಿನ ಪಂದ್ಯದಲ್ಲಿ ಗೆಲ್ಲಲು 152 ರನ್ ಗುರಿ ಪಡೆದ ಭಾರತವು ನಾಯಕಿ ಹರ್ಮನ್ ಪ್ರೀತ್ ಕೌರ್ (ಔಟಾಗದೆ 54, 47 ಎಸೆತ, 6 ಬೌಂಡರಿ) ಏಕಾಂಗಿ ಹೋರಾಟದ ಹೊರತಾಗಿಯೂ 20

ಮಹಿಳೆಯರ ಟಿ20 ವಿಶ್ವಕಪ್; ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಗೆಲುವು Read More »

ಕ್ರೀಡಾ ನ್ಯೂಸ್

ವಾಯುಭಾರ ಕುಸಿತ: ಇನ್ನೂ ಹೆಚ್ಚಾಗಲಿದೆ ಮಳೆ

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಬಂಗಾಳಕೊಲ್ಲಿಯಲ್ಲಿ  ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳದ ಉಪಸಾಗರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ

ವಾಯುಭಾರ ಕುಸಿತ: ಇನ್ನೂ ಹೆಚ್ಚಾಗಲಿದೆ ಮಳೆ Read More »

ಕರ್ನಾಟಕ

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 14. ಪೆಟ್ರೋಲ್ ಹಾಕಿಸಿ ಹಣ ಕೊಡದೇ ಚಾಲಕ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಅನು ಪೆಟ್ರೋಲ್ ಬಂಕ್‌ಗೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ, 4253.88ರೂ. ಮೊತ್ತದ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಹಣ ನೀಡದೆ ಕಾರನ್ನು ಚಲಾಯಿಸಿಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top