ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com, ಅ. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು […]

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 12. ನಾಡಹಬ್ಬ ಮೈಸೂರು ದಸರಾದ ಹಿನ್ನೆಲೆಯಲ್ಲಿ ಇಂದು (ಅ. 12) ಮಧ್ಯಾಹ್ನದಿಂದ ಭಾನುವಾರ ಬೆಳಗ್ಗಿನವರೆಗೆ ಮೈಸೂರು ಕಡೆಯಿಂದ  ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೈಸೂರಿನಿಂದ ಮಂಗಳೂರು, ಸುಳ್ಯ, ಪುತ್ತೂರು ಕಡೆಗೆ ತೆರಳುವ ವಾಹನ ಸವಾರರು ಬಿಳಿಕೆರೆ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ ತೆರಳಬೇಕು. ಹಾಗೂ ಹುಣಸೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಕಟ್ಟೆಮಳಲವಾಡಿ, ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು,ಅ. 12.   ಒಂದು ಮೆಸೇಜ್‌ನಿಂದ ಯುವಕನೊಬ್ಬ ತನ್ನ ಕೆಲಸವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತ ತನ್ನ ಸಹೋದ್ಯೋಗಿ ಮಹಿಳೆಯ ಬಟ್ಟೆ ಧರಿಸುವಿಕೆಯ ಬಗ್ಗೆ ಕಮೆಂಟ್‌ ಮಾಡಿದ್ದು, ಈ ಕುರಿತು ದೂರು ದಾಖಲಿಸಲಾಗಿತ್ತು. ಮಹಿಳೆಗೆ ಆಸಿಡ್ ಹಾಕುತ್ತೀನಿ ಎಂದ ಯುವಕ ನಿಖಿತ್ ಶೆಟ್ಟಿ ಎಂಬಾತನ ವಿರುದ್ಧ ಆಕೆಯ ಪತಿ ಪೊಲೀಸರಿಗೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡುವ ಮೂಲಕ ದೂರು ನೀಡಿದ್ದರು. ಯುವಕ ನಿಖಿತ್ ಇಟಿಯೋಸ್ ಡಿಜಿಟಲ್ ಸರ್ವಿಸ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.

ಸಹೋದ್ಯೋಗಿಗೆ ʼಆಸಿಡ್‌ʼ ಮೆಸೇಜ್‌ ಮಾಡಿ ಕೆಲಸ ಕಳೆದುಕೊಂಡ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನದ ಬೆಲೆ ಮತ್ತೆ ದುಬಾರಿ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಕಡಿಮೆಯಾಗಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 27 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ಬೆಲೆ ಮತ್ತೆ ದುಬಾರಿ Read More »

ಕರಾವಳಿ
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ. ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚೆನೈ,ಅ. 12.  ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.   ಹಳಿತಪ್ಪಿದ ಬಾಗ್ಮತಿ ಎಕ್ಸ್‌ ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top