ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ :  ಲಾವೋಸ್‌ನಲ್ಲಿ ನಡೆಯುತ್ತಿರುವ ಆಸಿಯಾನ್-ಭಾರತ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ಭೇಟಿಯಾದರು. ಸಭೆಯಲ್ಲಿ, ಪಿಎಂ ಮೋದಿ ಯುಎಸ್‌ನಲ್ಲಿ ಮಿಲ್ಟನ್ ಚಂಡಮಾರುತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ಪ್ರಾದೇಶಿಕ ವಿಷಯಗಳಲ್ಲಿನ ಸಹಕಾರದ ಬಗ್ಗೆಯೂ ಚರ್ಚಿಸಿದರು.ಗುರುವಾರ, ಪ್ರಧಾನಿ ಮೋದಿ ಅವರು ಲಾವೋಸ್‌ನಲ್ಲಿ ಏಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಮತ್ತು ನ್ಯೂಜಿಲೆಂಡ್‌ನ ತಮ್ಮ […]

ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು

(ನ್ಯೂಸ್ ಕಡಬ)newskadaba.com, ಅ. 11 ನಾಸಿಕ್ :  ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಗುಂಡಿನ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿವೀರ್‌ಗಳ ತಂಡವು ಭಾರತೀಯ

ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು Read More »

ರಾಷ್ಟ್ರೀಯ ನ್ಯೂಸ್

ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು:  ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಭಾಗಗಳಲ್ಲಿ ವಾಡಿಕೆ ಪ್ರಮಾಣದ ಮಳೆ ಕಳೆದ ಹತ್ತು ದಿನಗಳಲ್ಲಿ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.14

ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ Read More »

ಕರ್ನಾಟಕ

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್

(ನ್ಯೂಸ್ ಕಡಬ) newskadaba.com ಅ. 11. ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ ಎಂದು ಸಂಸ್ಥೆಯ ನಿರ್ದೇಶಕರಾದ ರೆ.ಫಾ.ಜೈಸನ್ ಸೈಮನ್ ಓಐಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಬೆಥನಿ ಐಟಿಐಯ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ವರ್ಗೀಸ್ ಕೈಪನಡುಕ ಓ ಐ ಸಿ  ಇವರು ಮಾತನಾಡಿ, ಆಯ್ಕೆಯಾದವರು ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಸ್ವತಃ ನಾಯಕರಾಗಬೇಕು. ಅವರವರ ಏಳಿಗೆಗೆ ಅವರವರೇ ಪ್ರಯತ್ನಿಸಬೇಕು ಎಂಬ

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್ Read More »

ಕರಾವಳಿ

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ. 11. ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಡಬ ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿರುವ ಘಟನೆ ನಡೆದಿದೆ. ಬಂಧಿತನನ್ನು ಕಡಬ ತಾಲೂಕು ಕುಂತೂರು ನಿವಾಸಿ ರಾಝಿಕ್ ಅಲಿಯಾಸ್ ಎರ್ಮಾಳ ರಾಝಿಕ್ ಎಂದು ಗುರುತಿಸಲಾಗಿದೆ. ಈತ ಕಳೆದ ಒಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಅ. 10ರಂದು ತಮಿಳುನಾಡಿನ ಕೊಯಮತ್ತೂರಿನಿಂದ ಪೊಲೀಸರು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ನ್ಯಾಯಾಂಗ ಬಂಧನ

ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಪಾನ್ ನ ಸಂಸ್ಥೆ ನಿಹಾನ್ ಹಿಡಂಕ್ಯೂಗೆ ನೊಬೆಲ್ ಶಾಂತಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com, ಅ. 11 ಸ್ವೀಡನ್ : ಅಣ್ವಸ್ತ್ರ ಮುಕ್ತ ಜಗತ್ತನ್ನು ಸೃಷ್ಟಿಸುವ ಪ್ರಯತ್ನಗಳಿಗಾಗಿ ಜಪಾನಿನ ಸಂಸ್ಥೆ ನಿಹಾನ್ ಹಿಡಂಕ್ಯೊಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಸಂಘಟನೆಯು 1945ರಲ್ಲಿ ಜಪಾನ್‌ನ ಹಿರೋಷಿಮಾ ಮತ್ತು ನಾಗಸಾಕಿಯಲ್ಲಿ ನಡೆದ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರ ತಳಮಟ್ಟದ ಆಂದೋಲನವಾಗಿದ್ದು, ಇದನ್ನು ಹಿಬಾಕುಶಾ ಎಂದೂ ಕರೆಯಲಾಗುತ್ತದೆ. ಇದು ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತವಾದ ಜಗತ್ತನ್ನು ಸಾಧಿಸಲು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎನ್ನುವುದನ್ನು ಸಾಕ್ಷಿ ಮೂಲಕ ಪ್ರದರ್ಶಿಸಲು ಶ್ರಮಿಸುತ್ತಿದೆ ಎಂದು

ಜಪಾನ್ ನ ಸಂಸ್ಥೆ ನಿಹಾನ್ ಹಿಡಂಕ್ಯೂಗೆ ನೊಬೆಲ್ ಶಾಂತಿ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 11.  ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದ್ದು, ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 10ರೂ.ನಂತೆ ಏರಿಕೆ ಕಂಡಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆಗೆ 350ರೂ. ಇತ್ತು. ಅ.10ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 325 ರೂ. ಇದ್ದರೆ ಹೊರ ಮಾರುಕಟ್ಟೆಯಲ್ಲಿ ಕೆಲವೆಡೆ 355ರಿಂದ 360 ರೂ. ತನಕವೂ ಬೇಡಿಕೆ ಇತ್ತು. ಹೊಸ ಅಡಿಕೆ ಕೊರತೆ

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ Read More »

ಕರಾವಳಿ

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್‌ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ Read More »

ಕರಾವಳಿ

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top