ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಅ. 11. ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರದಂದು ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ […]

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಅ. 11. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ

ಕೋವಿಡ್ ಹಗರಣ- ಡಿಕೆಶಿ ನೇತೃತ್ವದ ಸಂಪುಟ ಉಪಸಮಿತಿ ರಚನೆ Read More »

ಕರ್ನಾಟಕ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು Read More »

ಕರಾವಳಿ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ

(ನ್ಯೂಸ್ ಕಡಬ)newskadaba.com, ಅ. 11 : ಚಿನ್ನದ ದರ ಸತತವಾಗಿ 5ನೇ ದಿನವೂ ಕಡಿಮೆಯಾಗುವ ಮೂಲಕ ಹಬ್ಬದ ಖುಷಿಯನ್ನು ಹೆಚ್ಚಿಸಿದೆ. ಇಂದುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 70 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 76 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,740 ರೂ. ಇದೆ.   22 ಕ್ಯಾರಟ್‌

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ Read More »

ಕರ್ನಾಟಕ
crime, arrest, suspected

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ‌ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ

ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ

(ನ್ಯೂಸ್ ಕಡಬ) newskadaba.com ಅ. 11. ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೇ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿರುವುದಾಗಿ ವರದಿಯಾಗಿದೆ. ಗುರುವಾರದಂದು ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗವು, ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ Read More »

ಕರ್ನಾಟಕ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ

(ನ್ಯೂಸ್ ಕಡಬ)newskadaba.com ಮೈಸೂರು, ಅ. 11.  ದಸರಾ ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ವಿಜಯದಶಮಿ ಸಡಗರದಲ್ಲಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ

ಗಂಡು ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ Read More »

ಕರ್ನಾಟಕ

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ

(ನ್ಯೂಸ್ ಕಡಬ)newskadaba.com, ಅ. 11ನವದೆಹಲಿ : ಕೇಂದ್ರ ಸರ್ಕಾರವು ₹1,78,173 ಕೋಟಿ ತೆರಿಗೆ ಪಾಲನ್ನು ಹಂಚಿಕೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ₹6,498 ಕೋಟಿ ಸಿಕ್ಕಿದೆ. ಬಿಜೆಪಿ ಆಡಳಿತದ ರಾಜ್ಯಗಳಿಗೆ ಮತ್ತು ಮಿತ್ರ ಪಕ್ಷಗಳ ಸರ್ಕಾರಕ್ಕೆ ಸಿಂಹಪಾಲು ದೊರೆತಿದೆ.   “ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ಹೆಚ್ಚಿಸಲು ರಾಜ್ಯಗಳನ್ನು ಸಕ್ರಿಯಗೊಳಿಸುವ ಪ್ರಯತ್ನದಲ್ಲಿ,ರಾಜ್ಯ ಸರ್ಕಾರಗಳಿಗೆ ₹1,78,173 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಟೋಬರ್‌ನಲ್ಲಿ ಬಾಕಿ ಇರುವ ₹89,086.50 ಕೋಟಿ ನಿಯಮಿತ ಕಂತಿನ

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ Read More »

ರಾಷ್ಟ್ರೀಯ ನ್ಯೂಸ್

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ
Scroll to Top