ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಅ.10. ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಯೋಸಹಜ ಖಾಯಿಲೆಯಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರನ್ನು ಕಳೆದ ಸೋಮವಾರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿದ್ದ ರತನ್ […]

ಟಾಟಾ ಗ್ರೂಪ್‌ನ ಗೌರವಾಧ್ಯಕ್ಷ ರತನ್ ಟಾಟಾ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು Read More »

ಕರಾವಳಿ
crime, arrest, suspected

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ,ಹೈದ್ರಾಬಾದ್ – ಇಬ್ಬರು,

ಬೆಂಗಳೂರು: 12 ಮಂದಿ ಪಾಕಿಗಳ ಸೆರೆ ಹಿಡಿದ ಪೊಲೀಸರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸಾಯನಶಾಸ್ತ್ರ ವಿಭಾಗದ ಮೂವರು ವಿಜ್ಣಾನಿಗಳಿಗೆ ನೊಬೆಲ್ ಪ್ರಶಸ್ತಿ

(ನ್ಯೂಸ್ ಕಡಬ)newskadaba.com, ಅ. 09 ಹೊಸದಿಲ್ಲಿ: 2024ರ ಸಾಲಿನ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಬಹುಮಾನಕ್ಕೆ ವಿಜ್ಞಾನಿಗಳಾದ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಅವರನ್ನು ಆಯ್ಕೆ ಮಾಡಲಾಗಿದೆ. ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ರಸಾಯನಶಾಸ್ತ್ರ ವಿಭಾಗದಲ್ಲಿನ 2024ರ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಘೋಷಿಸಿದೆ. ಡೇವಿಡ್ ಬೇಕರ್ ಅವರಿಗೆ “ಕಂಪ್ಯೂಟೇಶನಲ್ ಪ್ರೊಟೀನ್ ಡಿಸೈನ್ʼ ಗಾಗಿ ಮತ್ತು ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ ʼಪ್ರೊಟಿನ್ ಸ್ಟ್ರಕ್ಚರ್ ಪ್ರಿಡಿಕ್ಸನ್ʼ ಗಾಗಿ ನೊಬೆಲ್ ಪ್ರಶಸ್ತಿಗೆ

ರಸಾಯನಶಾಸ್ತ್ರ ವಿಭಾಗದ ಮೂವರು ವಿಜ್ಣಾನಿಗಳಿಗೆ ನೊಬೆಲ್ ಪ್ರಶಸ್ತಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಬೆಂಗಳೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಭಾರತ ಭೇಟಿಯಲ್ಲಿರುವ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರಿನಲ್ಲಿ ಇಂದು ಸಂಜೆ ಅವರು ಮಾಲ್ದೀವ್ಸ್‌ ಡಯಾಸ್ಪೋರಾವನ್ನು ಭೇಟಿಯಾಗಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮುಹಮ್ಮದ್ ಹಾಗೂ ಅವರ ನಿಯೋಗವನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಇತರರು ಆತ್ಮೀಯವಾಗಿ ಸ್ವಾಗತಿಸಿದರು.  

ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಬೆಂಗಳೂರಿಗೆ ಆಗಮನ Read More »

ಕರ್ನಾಟಕ

‘ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’- ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಹರಿಯಾಣ ಸೋಲಿನ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,

‘ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’- ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..!

(ನ್ಯೂಸ್ ಕಡಬ)newskadaba.com ಶ್ರೀನಗರ, ಅ. 09. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ದಕ್ಷಿಣ ಕಾಶ್ಮೀರದ ಕೋಕರ್‌ನಾಗ್ ಅರಣ್ಯದಲ್ಲಿ ರಾತ್ರೋರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 26 ವರ್ಷದ ಪ್ರಾದೇಶಿಕ ಸೇನಾ ಸಿಬ್ಬಂದಿಯನ್ನು ಅಪಹರಿಸಿದ್ದರು ಎಂದು ಸೇನೆ ಇಂದು ದೃಢಪಡಿಸಿದೆ.

ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿಯನ್ನು ಹೊಗಲಿದ ಎನ್ಸಿ ನಾಯಕ ಒಮರ್ ಅಬ್ದುಲ್ಲಾ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ ಎಂಬುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು, ಸ್ಪಷ್ಟವಾಗಿ ಕೆಲವು ಕೆಲಸಗಳನ್ನು ಮಾಡಲಾಗುವುದಿಲ್ಲ ಆದರೆ ಜಮ್ಮು ಕಾಶ್ಮೀರ ಶಾಶ್ವತವಾಗಿ ಯುಟಿಯಾಗಿ ಉಳಿಯುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ. ಗೌರವಾನ್ವಿತ ಪ್ರಧಾನಿಯವರು ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ, ಮತ್ತು ಜಮ್ಮು ಕಾಶ್ಮೀರಕ್ಕೆ ರಾಜ್ಯತ್ವವನ್ನು

ಮೋದಿಯನ್ನು ಹೊಗಲಿದ ಎನ್ಸಿ ನಾಯಕ ಒಮರ್ ಅಬ್ದುಲ್ಲಾ Read More »

ರಾಷ್ಟ್ರೀಯ ನ್ಯೂಸ್

ಇನ್ನು ಮುಂದೆ 10ನೇ ತರಗತಿಯವರಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ- ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಹೇಳಿದರು.

ಇನ್ನು ಮುಂದೆ 10ನೇ ತರಗತಿಯವರಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ- ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top