ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಕುಸಿತ: ಕಳೆದ 8 ತಿಂಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ!

(ನ್ಯೂಸ್‌ ಕಡಬ) newskadaba.com,  ಜೂ.25: ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಕಳೆದ 8 ತಿಂಗಳಲ್ಲೇ ಅತಿ ಕನಿಷ್ಠ ಮಟ್ಟವನ್ನು ತಲುಪಿದೆ. 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 1 ಗ್ರಾಂಗೆ ₹278 ಇಳಿಕೆಯಾಗಿ ₹14,013 ತಲುಪಿದೆ. (10 ಗ್ರಾಂ ಬೆಲೆ: ₹1,40,130). 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂಗೆ ₹255 ಇಳಿಕೆಯಾಗಿ ₹12,845 ದಾಖಲಾಗಿದೆ. (10 ಗ್ರಾಂ ಬೆಲೆ: ₹1,28,450). ಬೆಳ್ಳಿ: ಇಂದು ಒಂದೇ ದಿನ ಬರೋಬ್ಬರಿ ₹10,000 ಕುಸಿತ […]

ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಕುಸಿತ: ಕಳೆದ 8 ತಿಂಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25;  ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ಮಾನ್ಯ F-1 ವೀಸಾ ಹೊಂದಿದ್ದರೂ, ನೆದರ್‌ಲ್ಯಾಂಡ್ಸ್‌ನ ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಯುಎಸ್ ಕಸ್ಟಮ್ಸ್ಅಧಿಕಾರಿಗಳು ಆತನನ್ನು ತಡೆದು ಭಾರತಕ್ಕೆ ವಾಪಸ್ ಕಳುಹಿಸಿದ್ದಾರೆ.ತಿಂಗಳುಗಳ ಹಿಂದೆಯೇ ಆತನ ವೀಸಾವನ್ನು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ಇಲ್ಲದೆ ರದ್ದುಗೊಳಿಸಲಾಗಿತ್ತು ಎಂಬ ವಿಷಯ ವಿಮಾನ ನಿಲ್ದಾಣದಲ್ಲಿ ತಿಳಿದುಬಂದಿದೆ. ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿಲ್ಲ ಎಂದು ವಿದ್ಯಾರ್ಥಿ ಆಘಾತ ವ್ಯಕ್ತಪಡಿಸಿದ್ದಾನೆ.ಘಟನೆಯ ನಂತರ ವಿದ್ಯಾರ್ಥಿ ಪರಿಶೀಲಿಸಿದಾಗ ಅಚ್ಚರಿಯ ವಿಷಯ ಹೊರಬಿದ್ದಿದೆ:ಅಮೆರಿಕದ

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ವರ್ಷ ಜಾಮೀನು ಅರ್ಜಿ ನಿಷೇಧಕ್ಕೆ ಸವಾಲು: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ತುರ್ತು ಅರ್ಜಿ

(ನ್ಯೂಸ್‌ ಕಡಬ) newskadaba.com,  ಜೂ.25 ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ತಮಗೆ ವಿಧಿಸಲಾಗಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಪ್ರತಿಯೊಬ್ಬರಿಗೂ ಇರುತ್ತದೆ. ಹೀಗಾಗಿ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಈ ಆದೇಶವನ್ನು ಬದಲಿಸಬೇಕು ಎಂದು ವಕೀಲರ ಮೂಲಕ ಮನವಿ ಮಾಡಿದ್ದಾರೆ. ಒಂದು ವರ್ಷದವರೆಗೆ ಜಾಮೀನು ನಿರಾಕರಿಸುವುದರಿಂದ ವೈದ್ಯಕೀಯ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ.ದೀರ್ಘಾವಧಿಯ ಬಂಧನವು

ಒಂದು ವರ್ಷ ಜಾಮೀನು ಅರ್ಜಿ ನಿಷೇಧಕ್ಕೆ ಸವಾಲು: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ತುರ್ತು ಅರ್ಜಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಲ್ಲಿಗೆ ಗ್ರಾಮದಲ್ಲಿ ಮಳೆಕೊಯ್ಲು ಅಭಿಯಾನ: ಬೋರ್‌ವೆಲ್ ಇಂಗುಗುಂಡಿ ನಿರ್ಮಾಣದ ಕುರಿತು ಪ್ರಾತ್ಯಕ್ಷಿಕೆ

(ನ್ಯೂಸ್‌ ಕಡಬ) newskadaba.com,  ಜೂ.25 ಬಂಟ್ವಾಳ: ಸೇಕ್ರೆಡ್ ಹಾರ್ಟ್ ತೊಡಂಬಿಲ ಚರ್ಚ್‌ನ ಕ್ಯಾಥೋಲಿಕ್ ಸಭಾ ಘಟಕದ ವತಿಯಿಂದ ಕಲ್ಲಿಗೆ ಗ್ರಾಮದ ಕನಪಾಡಿ ನೋಬರ್ಟ್ ಲೋಬೊ ಅವರ ಮನೆ ಪರಿಸರದಲ್ಲಿ ಜೂನ್ 21ರಂದು ಬೃಹತ್ ಮಳೆಕೊಯ್ಲು ಅಭಿಯಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಚರ್ಚ್‌ನ ಧರ್ಮಗುರು ವಂದನೀಯ ಆಂಟನಿ ಲೋಬೊ ಅವರು ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಮಳೆ ನೀರನ್ನು ಬೋರ್‌ವೆಲ್‌ಗಳಿಗೆ ಇಂಗಿಸುವ ಹಾಗೂ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಲ್ಲಿಗೆ ಗ್ರಾಮ ಪಂಚಾಯತ್

ಕಲ್ಲಿಗೆ ಗ್ರಾಮದಲ್ಲಿ ಮಳೆಕೊಯ್ಲು ಅಭಿಯಾನ: ಬೋರ್‌ವೆಲ್ ಇಂಗುಗುಂಡಿ ನಿರ್ಮಾಣದ ಕುರಿತು ಪ್ರಾತ್ಯಕ್ಷಿಕೆ Read More »

ಕರಾವಳಿ

ರಾಮಮಂದಿರ ಉಡಾಯಿಸಲು ಸ್ಕೆಚ್: ಹರಿಹರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಯುಪಿ ಮೂಲದ ಯುವಕ

(ನ್ಯೂಸ್‌ ಕಡಬ) newskadaba.com,  ಜೂ.25 ದಾವಣಗೆರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಎಂಬಾತನನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ರಾಮ ಮಂದಿರವನ್ನು ಸ್ಫೋಟಿಸುವ ತನ್ನ ಉದ್ದೇಶವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನಿಖೆಯ ವೇಳೆ ಈತನ ಮೊಬೈಲ್‌ನಲ್ಲಿ ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ವಾಟ್ಸಾಪ್ ಗ್ರೂಪ್‌ಗಳು, ಮಾರಕಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ಹಾಗೂ ‘ರಾಣಾ ಬಾಯ್’ ಎಂಬ ಹೆಸರಿನ

ರಾಮಮಂದಿರ ಉಡಾಯಿಸಲು ಸ್ಕೆಚ್: ಹರಿಹರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಯುಪಿ ಮೂಲದ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ”: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್‌ ಕಡಬ) newskadaba.com,  ಜೂ.25:   “ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರೌರ್ಯ ಮತ್ತು ಲೈಂಗಿಕ ದುರ್ಬಳಕೆಯ ಗಂಭೀರ ಆರೋಪ ಎದುರಿಸುತ್ತಿರುವ ಬೆಂಗಳೂರಿನ ನಾಗಸಂದ್ರ ನಿವಾಸಿ ಕೆ.ಇ. ರಮೇಶ್ ಎಂಬಾತನಿಗೆ, ರಕ್ಷಿಸಲಾದ 9 ನಾಯಿಗಳ ಕಸ್ಟಡಿಯನ್ನು ಮರಳಿ ನೀಡಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ನಾಯಿಗಳನ್ನು ಮಾಲೀಕನಿಗೆ ಹಿಂತಿರುಗಿಸಲು ಈ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು “ಆಘಾತಕಾರಿ” ಎಂದು ಕಟುವಾಗಿ ಟೀಕಿಸಿತು. “ಪ್ರಾಣಿಗಳಿಗೆ

“ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ”: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯೂ ಆದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮಂಗಳೂರು ಕೇಂದ್ರ ಜುಮಾ ಮಸ್ಜಿದ್‌ ನಲ್ಲಿ ಮೃತದೇಹದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಝಿಯವರ

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ವಿಧಿವಶ Read More »

ಕರಾವಳಿ

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ

(ನ್ಯೂಸ್‌ ಕಡಬ) newskadaba.com,  ಜೂ.22 ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತೆರವುಗೊಳಿಸಿದೆ. ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ಹಿಂಪಡೆಯಲಾಗಿದ್ದು, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ‘ಮೆಸೇಜ್-ಎಡಿಟಿಂಗ್’ ಮೇಲಿನ ನಿರ್ಬಂಧವನ್ನು ಜೂನ್ 30 ರವರೆಗೆ ಮುಂದುವರಿಸಲು ಸರ್ಕಾರ ಆದೇಶಿಸಿದೆ.ಸದ್ಯ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳಲ್ಲಿ ಆ್ಯಪ್ ಇನ್ನು ಲಭ್ಯವಾಗಿಲ್ಲದಿದ್ದರೂ, ಇಂಟರ್ನೆಟ್ ಸೇವಾ ಪೂರೈಕೆದಾರರು ಹಂತಹಂತವಾಗಿ ನಿಷೇಧವನ್ನು

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ

(ನ್ಯೂಸ್‌ ಕಡಬ) newskadaba.com,  ಜೂ.22 ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ವಿವಾದವು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಬಿಜೆಪಿ ಹೈಡ್ರಾಮಾವೊಂದಕ್ಕೆ ವೇದಿಕೆ ಸಿದ್ಧಪಡಿಸಿದೆ.ಪಕ್ಷದ ಎಲ್ಲಾ 63 ಶಾಸಕರನ್ನು ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಕರೆದೊಯ್ದು, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ “ನಾವು ಅಡ್ಡ ಮತದಾನ ಮಾಡಿಲ್ಲ” ಎಂದು ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ. ಇದೇ ಗುರುವಾರ ಅಥವಾ ಶುಕ್ರವಾರ ಧರ್ಮಸ್ಥಳದಲ್ಲೇ ಮಹತ್ವದ ಬಿಜೆಪಿ ಶಾಸಕಾಂಗ

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ: ಸಿಎಂಗೆ ಸಾರಿಗೆ ನಿಗಮಗಳ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com,  ಜೂ.22 : ರಾಜ್ಯದ ಸಾರಿಗೆ ನಿಗಮಗಳು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ದರ ಪರಿಷ್ಕರಣೆಗೆ ಕೋರಿ KSRTC, BMTC, ಕಲ್ಯಾಣ ಕರ್ನಾಟಕ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.ಶಕ್ತಿ ಯೋಜನೆ ,ಗಣನೀಯವಾಗಿ ಏರಿಕೆಯಾಗಿರುವ ಡೀಸೆಲ್ ದರ ಹಾಗೂ ನೌಕರರ ಸಂಬಳ ಹೆಚ್ಚಳದಿಂದಾಗಿ ನಿಗಮಗಳ ಮೇಲೆ ಭಾರಿ ಆರ್ಥಿಕ ಹೊರೆ ಬಿದ್ದಿದೆ. ಇಂಧನ ದರ ಏರಿಕೆಯಿಂದಾಗಿ ಸಾರಿಗೆ ನಿಗಮಗಳಿಗೆ

ರಾಜ್ಯದಲ್ಲಿ ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ: ಸಿಎಂಗೆ ಸಾರಿಗೆ ನಿಗಮಗಳ ಪ್ರಸ್ತಾವನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top