ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ […]

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 01.  ವಿಮಾನ ನಿಲ್ದಾಣದ ಒಂದು ತಿಂಗಳು ಲೈಸೆನ್ಸ್ ವಿಸ್ತರಣೆಯಾಗಿರುವ ಬೆನ್ನಲ್ಲೆ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ 20 ಲಕ್ಷ ರೂ.ದಂಡ ವಿಧಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಏರೋಡ್ರೋಮ್ ಮಾನದಂಡಗಳನ್ನು ಅನುಸರಿಸಲು ವಿಫಲವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಿಮಾನ ನಿಲ್ದಾಣದ ನಿರ್ವಾಹಕರಾಗಿರುವ ಕೆಎಸ್ಐಐಡಿಸಿ ಶಿವಮೊಗ್ಗ ಇದಕ್ಕೆ ಡಿಜಿಸಿಎ 20 ಲಕ್ಷ ರೂ. ದಂಡ ವಿಧಿಸಿದೆ.  

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ Read More »

ಕರ್ನಾಟಕ

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 01.  ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ಬಗ್ಗೆ ಬಾಲಕನ ಹೆತ್ತವರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಹೊರಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕೆ ಎ19 ಎಫ್ 3276 ರನ್ನೇರಿದ್ದ ಈ ವಿದ್ಯಾರ್ಥಿಯು ಬಸ್ ನಿರ್ವಾಹಕ ಬಂದು ಬಸ್ ಪಾಸ್

ಪಾಸ್ ಇಲ್ಲವೆಂದು ವಿದ್ಯಾರ್ಥಿಯನ್ನು ಅರ್ಧದಲ್ಲೇ ಇಳಿಸಿ ಅವಮಾನಿಸಿದ ನಿರ್ವಾಹಕ: ಆರೋಪ Read More »

ಕರಾವಳಿ

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com, ಮಂಡ್ಯ(ಅ.01)  ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಸ್ಯಾಂಜೋ ಆಸ್ಪತ್ರೆ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಬಂದ ಸಾರಿಗೆ ಬಸ್ಸು ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸರ್ವೀಸ್ ರಸ್ತೆಯಲ್ಲಿ ಟ್ಯಾಂಕರ್ ನಿಂತಿತ್ತು. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಬಸ್ಸನ್ನು

ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್ Read More »

ಕರಾವಳಿ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): – ಭಾರತದಿಂದ ಅಮೇರಿಕಾಗೆ ತೆರಳುವ ಪ್ರವಾಸಿಗರು, ನುರಿತ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಹೆಚ್ಚುವರಿ 2.50 ಲಕ್ಷ ವೀಸಾ ನೇಮಕಾತಿಗಳನ್ನು ತೆರೆದಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ಹೇಳಿದೆ. ಕಳೆದ ವರ್ಷ 1.4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿತ್ತು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದರು. ಇದರ ಬೆನ್ನಲ್ಲೇ ಭಾರತದಿಂದ ಅಮೆರಿಕಾಕ್ಕೆ ಪ್ರವಾಸ ಹಾಗೂ ವ್ಯಪಾರ ವಹಿವಾಟು, ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 01.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024 Read More »

ಕರಾವಳಿ
Scroll to Top