ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, […]

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ Read More »

ಕರ್ನಾಟಕ

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 01. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಸಿಡಿಲು ಬಡಿದು ಮನೆಗೆ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 01. ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸಿಡಿಲು ಬಡಿದ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ ಎನ್ನಲಾಗಿದೆ.

ಸಿಡಿಲು ಬಡಿದು ಮನೆಗೆ ಅಪಾರ ಹಾನಿ Read More »

ಕರಾವಳಿ

ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ನಗರದ ಹೊರವಲಯದ ಎದುರು ಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪತ್ತೆಯಾಗಿದೆ. ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋ ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01):  ನಿಗದಿತ ಸಮಯದೊಳಗೆ ಪ್ರವೇಶ ಶುಲ್ಕ ಪಾವತಿಸಲು ಆಗದ ಕಾರಣ ಐಐಟಿ ಸೀಟ್ ಧನಬಾದ್‌ನಲ್ಲಿ ಕಳೆದುಕೊಂಡಿದ್ದ ದಲಿತ ಯುವಕನಿಗೆ ಮರಳಿ ಸೀಟು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಂವಿಧಾನದ 142 ವಿಧಿ ಅಡಿ ಸುಪ್ರೀಂ ಕೋರ್ಟಿಗಿರುವ ವಿಶೇಷ ಶಕ್ತಿ ಬಳಸಿ ಈ ಆದೇಶ ಹೊರಡಿಸಿದೆ. ಅತುಲ್ ಕುಮಾರ್‌ಎಂಬ ವಿದ್ಯಾರ್ಥಿ ಜಾರ್ಖಂಡ್‌ನಲ್ಲಿನ ಐಐಟಿ ಧನ್‌ಬಾದ್‌ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್ Read More »

ಬ್ರೇಕಿಂಗ್ ನ್ಯೂಸ್

ತಮಿಳು ಚಿತ್ರದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಚೆನ್ನೈ(ಅ.01):  ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅನಾರೋಗ್ಯದಿಂದ ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ದಾಖಲಾಗಿದ್ದರ ಬಗ್ಗೆ ಆಸ್ಪತ್ರೆ ಅಥವಾ ರಜನಿಕಾಂತ್ ಅವರ ಕುಟುಂಬದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 73 ವರ್ಷದ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.

ತಮಿಳು ಚಿತ್ರದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಯುವ ವಿದ್ವಾಂಸ ರವೂಫ್ ಇರ್ಫಾನಿ ಅಲ್ ಮಖ್ದೂಮಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ.01. ತಾಲೂಕಿನ ಮರ್ಧಾಳ ಚಾಕಟೆಕೆರೆ ನಿವಾಸಿ ಹಮೀದ್ ಮುಸ್ಲಿಯಾರ್ ಎಂಬವರ ಪುತ್ರ ಯುವ ವಿದ್ವಾಂಸ ಅಬ್ದುಲ್ ರವೂಫ್ ಇರ್ಫಾನಿ ಅಲ್ ಮಖ್ದೂಮಿ (30) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಕುಂಬ್ಳೆ, ಫರಂಗಿಪೇಟೆ ಹಾಗೂ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯಲ್ಲಿ ಸಹಾಯಕ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದ ಇವರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಪುಟ್ಟ ಮಗು ಸೇರಿದಂತೆ ಬಂಧು ಬಳಗ ಹಾಗೂ ಅಪಾರ ಶಿಷ್ಯ

ಕಡಬ: ಯುವ ವಿದ್ವಾಂಸ ರವೂಫ್ ಇರ್ಫಾನಿ ಅಲ್ ಮಖ್ದೂಮಿ ನಿಧನ Read More »

ಕರಾವಳಿ

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ.30. ಎಸ್ ಪ್ಲನೇಡ್ ನಿಂದ ಮೈದಾನದವರೆಗಿನ ಟ್ರಾಮ್ ರೈಲು ಸಂಚಾರವನ್ನು ಹೊರತುಪಡಿಸಿ, ಕೋಲ್ಕತ್ತಾದಲ್ಲಿನ ಎಲ್ಲ ಮಾರ್ಗಗಳ ಟ್ರಾಮ್ ರೈಲು ಸೇವೆಯನ್ನು ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ ಸರಕಾರ ನಿರ್ಧರಿಸಿದೆ ಎಂದು ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೋಲ್ಕತ್ತಾದಲ್ಲಿನ ಟ್ರಾಮ್ ರೈಲು ಸೇವೆಗೆ 150 ವರ್ಷಗಳ ಇತಿಹಾಸವಿದೆ. ಸಾರಿಗೆ ಸಚಿವರ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿರುವ ಹಲವಾರು ಪ್ರಯಾಣಿಕರು, ರಸ್ತೆಗಳಲ್ಲಿನ ವಾಹನ ದಟ್ಟಣೆಗೆ ಟ್ರಾಮ್ ರೈಲುಗಳನ್ನು ದೂಷಿಸಲಾಗದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

150 ವರ್ಷಗಳ ಇತಿಹಾಸವಿರುವ ಟ್ರಾಮ್ ರೈಲು ಸೇವೆ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸ್ಸು ಕರೆತರಲು ಗೊತ್ತುಪಡಿಸಿದ ಸ್ಪೇಸ್ಎಕ್ಸ್ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಯಲ್ಲಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ. ಸ್ಪೇಸೆಕ್ಸ್ ಬಾಹ್ಯಾಕಾಶ ನೌಕೆ ರವಿವಾರ 5:30ಕ್ಕೆ ಬಾಹ್ಯಾಕಾಶದಲ್ಲಿ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಜೊತೆ ಸಂಪರ್ಕವನ್ನು ಸಾಧಿಸಿದೆ. ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಬಂದ ಹೊಸ ಒಡನಾಡಿಗಳಿಗೆ ಸ್ವಾಗತವನ್ನು ಕೋರಿದ್ದಾರೆ.    

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ Read More »

ರಾಷ್ಟ್ರೀಯ ನ್ಯೂಸ್
Scroll to Top