ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು […]

ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು

(ನ್ಯೂಸ್ ಕಡಬ) newskadaba.com ಸೆ. 27.ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದೆ. ಶನಿವಾರ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,740 ರೂ.ಗೆ ಇದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.  

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್‌ ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯವು ಶುಕ್ರವಾರದಂದು ಆದೇಶಿಸಿದೆ. ಈ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮುಂಬೈ: ಮುಂಬೈನಲ್ಲಿ  ಭಯೋತ್ಪಾದನಾ ಬೆದರಿಕೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಸಾಲ ಮರುಪಾವತಿ ವಿಚಾರವಾಗಿ ಉದ್ಯಮಿಯೊಬ್ಬರ ಮನೆಗೆ ಹೋಗಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ರಿಲೇಶನ್ ಶಿಪ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪ್ರಕರಣದ ಪಿರ್ಯಾದುದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿರುವ ದೂರಿನಂತೆ, ‘ಚೈತನ್ಯ ಎಂಬವರು ಪುತ್ತೂರಿನ ಕೋರ್ಟ್ ರಸ್ತೆಯ‍ಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27. ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಪಾಂಡಪ್ಪ ತಿಪ್ಪಣ್ಣ ಕೊರವರ್ (45) ಎಂದು ಗುರುತಿಸಲಾಗಿದೆ. 3 ಎಕರೆ ಜಮೀನು ಹೊಂದಿದ್ದ ಪಾಂಡಪ್ಪ ಬ್ಯಾಂಕ್‌ನಲ್ಲಿ 1 ಲಕ್ಷ ರು. ಜತೆಗೆ ಕೈ ಸಾಲ ಮಾಡಿದ್ದರು. ಮಳೆಯಿಂದ ತೊಗರಿ ಬೆಳೆ ನಷ್ಟವಾಗಿತ್ತು. ಈ ನಡುವೆ ಸಾಲ ತೀರಿಸಲು ವಕೀಲರ ಮೂಲಕ 2 ಬಾರಿ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಹೀಗಾಗಿ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ಕೆಯ್ಯೂರಿನಿಂದ ವರದಿಯಾಗಿದೆ. ಸೆ.27ರ ಶುಕ್ರವಾರದಂದು ಬೆಳಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯೂರು ರೇಷನ್ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ ಸಿಬ್ಬಂದಿ ಮಹಿಳೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯು ಸಂಪ್ಯ

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ) newskadaba.com ಸೆ. 27. ಲಕ್ನೋ: ಹೂಡಿಕೆ ನೆಪದಲ್ಲಿ ವೈದ್ಯರೊಬ್ಬರಿಗೆ 64 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ. ಐಎಫ್ಎಸ್ ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಪಿ ಅಜಿತ್ ಗುಪ್ತಾ ಹಾಗೂ ಅವರ ಸಹ ಕಂಪನಿಗಳು

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top