ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 26ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟಿಸಲಾದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, […]

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೋಮವಾರದಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಲೋಕಸಭಾಧ್ಯಕ್ಷರಾದ  ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಂತರ ಸ್ಪೀಕರ್ ಯು.ಟಿ. ಖಾದರ್ ಅವರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “the role of legislative bodies in the attainment

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ Read More »

ಕರ್ನಾಟಕ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »

ಕರಾವಳಿ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course),  ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್,

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read More »

ಕರ್ನಾಟಕ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಸೆ. 24. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಆಯ್ಕೆಗಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ www.sw.kar.nic.in ನಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಬಂಧನೆಗಳು: ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

(ನ್ಯೂಸ್ ಕಡಬ) newskadaba.com ಸೆ. 24. ಐತಿಹಾಸಿಕ ಹಿನ್ನೆಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಹಾನಿಗೊಳಗಾಗಿದೆ. ತಮಿಳುನಾಡು ನೋಂದಣಿಯ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳಗಾಗಿದೆ. ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.    

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ Read More »

ಕರಾವಳಿ
Scroll to Top