ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ

(ನ್ಯೂಸ್ ಕಡಬ) newskadaba.com ಗಾಲೆ, ಸೆ. 23. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಶ್ರೀಲಂಕಾ ತಂಡವು ಎಂಟ್ರಿ ಕೊಡುವುದರೊಂಡಿದೆ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಶ್ರೀಲಂಕಾ ತಂಡವು ಗಾಲೆ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಶ್ರೀಲಂಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಗೇರುವ ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಇದೀಗ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ದ್ವಿತೀಯ ಸ್ಥಾನಕ್ಕೇರಲು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ […]

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ Read More »

ಕ್ರೀಡಾ ನ್ಯೂಸ್

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ಅಂಗನವಾಡಿಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಮೈಬೂಬ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಕೇವಲ 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಸೆ.23. ಪ್ರಧಾನಿ ಮೋದಿ 3 ದಿನಗಳ ಅಮೆರಿಕಾ ಪ್ರವಾಸದ ವೇಳೆ ಇಲ್ಲಿ 15 ಟೆಕ್ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಿದ್ದು, ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ಪಿಚೈ, ಭಾರತದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಎಐ ಬೆಳವಣಿಗೆ ಆಗಬೇಕೆಂದು ಮೋದಿ ಬಯಸುತ್ತಾರೆ ಎಂದಿದ್ದಾರೆ. ಸೆಮಿಕಂಡಕ್ಟರ್ ಚಿಪ್ ಕಂಪನಿ ನಿವಿಡಿಯಾದ ಸಿಇಒ ಜೆನ್ಸೆನ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೇರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯನಿರ್ವಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿ ಸ್ಥಾನಕ್ಕೆ ಕರೆತರುತ್ತಾರೆ ಎಂದು ಭಾವಿಸುತ್ತೇನೆ. ಅಲ್ಲಿಯವರೆಗೆ ಅವರ ಕುರ್ಚಿ ಸಿಎಂ ಕಚೇರಿಯಲ್ಲೇ

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ Read More »

ರಾಷ್ಟ್ರೀಯ ನ್ಯೂಸ್

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಬಾಯಿ ನಮ್ಮ ದೇಹದ ಆರೋಗ್ಯದ ಹೆಬ್ಬಾಗಿಲು. ನಾವು ತಿನ್ನುವ  ಆಹಾರ ಬಾಯಿಯ ಮುಖಾಂತರವೇ ಹೊಟ್ಟೆಗೆ ಹೋಗುತ್ತದೆ.  ನಾವು ತಿನ್ನುವ  ಆಹಾರ  ಸರಿಯಾಗಿ  ಜಗಿಯಲು, ಪಚನವಾಗಲು  ಮತ್ತು ಜೀರ್ಣವಾಗಲು ಆರೋಗ್ಯವಂತ ಬಾಯಿ ಮತ್ತು ಸದೃಢವಾದ  ಹಲ್ಲುಗಳು  ಅತೀ ಅಗತ್ಯ. ಹಾಲು ಹಲ್ಲುಗಳು ಕೂಡಾ ಶಾಶ್ವತ ಹಲ್ಲಿನಷ್ಟೇ  ಪ್ರಾಮುಖ್ಯವಾಗಿರುತ್ತದೆ. ಈ ಕಾರಣದಿಂದ  ಬಾಯಿ ಆರೋಗ್ಯ ಯಾವತ್ತೂ ನಿರ್ಲಕ್ಷಿಸಲೇಬಾರದು. ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಂಡು ನಿರಂತರ ದಂತ ವೈದ್ಯರ ಸಂದರ್ಶನ ಮಾಡಿಕೊಂಡು ಹಲ್ಲಿನ ಆರೋಗ್ಯ

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು Read More »

ಕರಾವಳಿ

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ ಚೈತನ್ಯ ಎಂ.ಜಿ, ಉಪಾಧ್ಯಕ್ಷರಾದ ಭುವನಪ್ರಸಾದ್ ಹೆಗ್ಡೆ, ಮನೋಹರ್ ಶೆಟ್ಟಿ ತೋನ್ಸೆ, ದಿವಾಕರ ಸನಿಲ್, ರಶ್ಮಿ ಶೆಣೈ, ಜಂಟಿ ಕಾರ್ಯದರ್ಶಿಗಳಾದ

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ Read More »

ಕರಾವಳಿ

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..!

(ನ್ಯೂಸ್ ಕಡಬ) newskadaba.com ಸೆ. 24. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕುರಿತು ವರದಿಯಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದ್ದು, ಗೊಲ್ಲಗುಡೆಂ ಪಂಚಾಯತ್‌ ವ್ಯಾಪ್ತಿಯ ಭಕ್ತೆಯೊಬ್ಬರು ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 23. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಭೇಟಿ ನೀಡಿರುವುದರಿಂದ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ ಜಯ ಸಾಧಿಸಿದೆ. ಕಳ್ಳಸಾಗಣೆ ಮಾಡಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ. ‘ಸಾಂಸ್ಕೃತಿಕ ಸಂಪರ್ಕವನ್ನು ಆಳಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧದ ಹೋರಾಟವನ್ನು ಬಲಪಡಿಸುವುದಕ್ಕಾಗಿ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ್ದಕ್ಕಾಗಿ ನಾನು ಅಧ್ಯಕ್ಷ ಜೋ ಬೈಡನ್ ಮತ್ತು ಯುಎಸ್ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ’ ಎಂದು

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ದಿನ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) https://shp.karnataka.gov.in/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ  ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಸಮುದಾಯದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10ಕೊನೆಯ ದಿನ. ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentSer Vices ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್

ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top