ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಪಾಲಕ್ಕಾಡ್‌ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾದ ಹಿನ್ನೆಲೆ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸೆ. 19ರಂದು ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 22637 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ […]

ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ Read More »

ಕರ್ನಾಟಕ

ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಪುತ್ತೂರು ಘಟಕದ ಗೃಹರಕ್ಷಕ  ಶ್ರೀ ಸುದರ್ಶನ್ ಜೈನ್  ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ನಡೆಯಿತು. 1964 ಆಗಸ್ಟ್ 10ರಂದು ಜನಿಸಿದ ಶ್ರೀ ಸುದರ್ಶನ್ ಜೈನ್ 1999ರ ಮಾರ್ಚ್ 01 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸತತವಾಗಿ ಸುಮಾರು 25 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ ಆಗಸ್ಟ್ 10ರಂದು ಸೇವಾ ನಿವೃತ್ತಿ

ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ Read More »

ಕರಾವಳಿ

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ ಡ್ರನ್ ಗೆ ಮೋಹನಾ ನಿಯೋಜನೆಗೊಂಡಿದ್ದಾರೆ. ರಾಜಸ್ಥಾನದಲ್ಲಿದ್ದ ನಂ3 ಫೈಟರ್ ಸ್ಕ್ವಾಡ್ರನ್ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್-21 ಬೈಸಾನ್ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕುಂತೂರು ಚರ್ಚ್ ಬಳಿ ನಡೆದಿದೆ. ಕುಂತೂರು ಕೆಮ್ಮಣ್ಣು ನಿವಾಸಿ ಶಶಿಧರ ಎಂಬವರು ಆಲಂಕಾರಿನಿಂದ ಕುಂತೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆ ಹೋಗುತ್ತಿದ್ದ ಉಮೇಶ ಎಂಬವರು ತನ್ನ ಬೈಕನ್ನು ಯಾವುದೇ ಮುನ್ಸೂಚನೆ ನೀಡದೇ ಒಮ್ಮಲೇ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಬೈಕ್ ಗೆ ಢಿಕ್ಕಿಯಾಗಿ ಸವಾರ ಸಹಿತ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು Read More »

ಕರ್ನಾಟಕ

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಾಗೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19.  ಸಾಲಿಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆ.ಜಿ. ಮಾಸ್ಟರ್ ವಿಭಾಗದಲ್ಲಿ ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ನಾಗೇಶ್ ಶೆಟ್ಟಿ ಬಜ್ಪೆ ಚಿನ್ನದ ಪದಕ ಗಳಿಸಿದ್ದಾರೆ. ಬಾಲಾಂಜನೇಯ ಜಿಮಿನಿಷ್ಟ್ ಮಂಗಳೂರು ಇದರ ಸದಸ್ಯ ದಿ. ಜಯೇಂದ್ರ ನಾಯಕ್ ಅವರ ಶಿಷ್ಯ. ಹಾಗೂ ಇವರು ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.    

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಾಗೇಶ್ ಶೆಟ್ಟಿ Read More »

ಕರಾವಳಿ

ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಜಿಲ್ಲಾ ಮಟ್ಟದ ಐ.ಇ.ಸಿ ಚಟುವಟಿಕೆಗಳಡಿ ವಿವಿಧ ವರ್ಗದ ಕಾರ್ಮಿಕರಿಗೆ, ಸಂಘ ಸಂಸ್ಥೆಗಳಿಗೆ ಹಾಗೂ ಮಾಲೀಕರಿಗೆ ಕಾರ್ಮಿಕ ಕಾನೂನುಗಳ ಬಗ್ಗೆ ಮತ್ತು ಇಲಾಖೆಯ ಯೋಜನೆಗಳ ಸೆಪ್ಟೆಂಬರ್ 22ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಛೇರಿ, ನೇತ್ರಾವತಿ ಸಭಾಂಗಣದಲ್ಲಿ ಒಂದು ದಿನದ ಕಾನೂನು ಅರಿವು ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗ,  ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ Read More »

ಕರಾವಳಿ

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 19.  ಕುಕ್ಕುಂದೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿಯವರ ಅಮಾನತು ಆದೇಶವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿಂದಕ್ಕೆ ಪಡೆದಿದೆ‌. ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿರುವ ಹೆಚ್ಚುವರಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರನ್ನು ಆಹ್ವಾನ ಮಾಡಲಿಲ್ಲ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಸೆಪ್ಟೆಂಬರ್ 4ರಂದು ಇಲಾಖೆ ಅಮಾನತು ಮಾಡಿತ್ತು. ಅಮಾನತು ಆದೇಶ ಬಳಿಕ ಪುನಃ ಈ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಇಂದು ಅವರನ್ನು

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ Read More »

ಕರ್ನಾಟಕ

ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯರಿಂದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಸದಸ್ಯ ಧನ್ಯಕುಮಾರ್ ಜಿನ್ನಪ್ಪ ಗುಂಡೆ ಅವರು ಸೆಪ್ಟೆಂಬರ್ 20ರಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಮುಖಂಡರು ಹಾಗೂ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯರಿಂದ ಸಭೆ Read More »

ಕರಾವಳಿ

Казино Vodka | Выигрывайте здесь, играть бесплатно в слоты

Поскольку этот обзор казино Vodka посвящен игрокам, мы смотрим, есть ли безопасный и честный бонус. Мобильный вариант Vodka Casinos был разработан с учетом опыта и доступности игрока. Независимо от того, любите ли вы играть в онлайн-видеослоты, видеопокер или карточные игры, у нас есть кое-что для вас. Это не означает, что сайт не занимается онлайн-покером, он

Казино Vodka | Выигрывайте здесь, играть бесплатно в слоты Read More »

ಕರಾವಳಿ
Scroll to Top