ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಓರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ನಡೆದಿದೆ. ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 18. ಅಡುಗೆ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ನಿಟ್ರೆ ಗ್ರಾಮದ ಹಲವೆಡೆ ಅಬ್ಕಾರಿ ಅಧಿಕಾರಿಗಳು ಸಾಮೂಹಿಕ ದಾಳಿ ನಡೆಸಿದಾಗ ಗ್ರಾಮದ ಮಂಜು ಎಂಬ ಮನೆಯಲ್ಲಿ ಅಡುಗೆ ಕೋಣೆಯಲ್ಲಿ ನಿರ್ಮಿಸಿಕೊಂಡಿದ್ದ ರಹಸ್ಯ ಗೂಡಿನಲ್ಲಿ ಮದ್ಯ ಹಾಗೂ ಬಿಯರ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಮಂಜುರವರ ಮನೆಯ ಅಡುಗೆ ಮನೆಯ ರಹಸ್ಯಗೂಡಿನಲ್ಲಿ 8 ಲೀಟರ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಬಿ.ಕೆ ಕೃಷ್ಣಪ ಸೆ.17 ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಕೃಷ್ಣಪ್ಪ ಅವರು ಸಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿಯೂ ದುಡಿದಿದ್ದಾರೆ. ಅವರು ಎಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಲೋಕ ಅದಾಲತ್ – 3,122 ಪ್ರಕರಣಗಳು ಇತ್ಯರ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದ.ಕ ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ. ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು ಪ್ರಕರಣಗಳಲ್ಲಿ ದಂಪತಿಗಳು ರಾಜಿ ಸಂಧಾನದ ಮೂಲಕ ಲೋಕ್ ಅದಾಲತ್‍ನಲ್ಲಿ ಒಂದುಗೂಡಿದ್ದಾರೆ ಎಂದು ಜಿಲ್ಲಾ

ರಾಷ್ಟ್ರೀಯ ಲೋಕ ಅದಾಲತ್ – 3,122 ಪ್ರಕರಣಗಳು ಇತ್ಯರ್ಥ Read More »

ಕರಾವಳಿ

ಸೆ.20ರಂದು ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ರಾಷ್ಟ್ರೀಯ ಸೇವಾ ಯೋಜನೆ, ಕುಂಬ್ರ ಜತ್ತಪ್ಪ ರೈ ಪ್ರತಿಷ್ಠನ, ಕಜೆಮಾರು ಕೆದಂಬಾಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವು ಸೆಪ್ಟೆಂಬರ್ 20 ರಂದು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ  ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು,

ಸೆ.20ರಂದು ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »

ಕರಾವಳಿ

ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಹಾಯಕ ನಿರ್ದೇಶಕರ ಕಛೇರಿ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿಯು ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಮಾಣಿಪ್ಪಾಡಿ ಕಾಂಪ್ಲೆಕ್ಸ್, 2ನೇ ಮಹಡಿ ಇಲ್ಲಿಂದ ಜನತಾ ಬಜಾರ್ ಕಟ್ಟಡ ಎರಡನೇ ಮಹಡಿ ಜಿ.ಎಚ್.ಎಸ್ ರಸ್ತೆ ಹಂಪನಕಟ್ಟ ಮಂಗಳೂರು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿ ಸ್ಥಳಾಂತರ Read More »

ಕರಾವಳಿ

ಸೆ.21 ರಂದು ತಣ್ಣೀರುಬಾವಿ ಬೀಚ್ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಭಾರತ ಸರ್ಕಾರದ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇದರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 7ರಿಂದ ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಕ್ಲೀನಿಂಗ್ ಚಟುವಟಿಕೆ/ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪರಿಸರ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.21 ರಂದು ತಣ್ಣೀರುಬಾವಿ ಬೀಚ್ ಸ್ವಚ್ಚತೆ Read More »

ಕರಾವಳಿ

ವಿಶ್ವಕರ್ಮರು ಶ್ರಮ ಜೀವಿಗಳು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ವಿಶ್ವಕರ್ಮರು ಶ್ರಮಜೀವಿಗಳು, ತಮ್ಮ ಕರ್ಮದಿಂದಲೇ ಗುರುತಿಸಿಕೊಂಡವರು, ಪ್ರತಿಯೊಂದು ಶುಭಕಾರ್ಯವು ವಿಶ್ವಕರ್ಮರ ಸಹಕಾರವಿಲ್ಲದೆ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಳ್ಮೆಯಿಂದಲೇ ತಮ್ಮ

ವಿಶ್ವಕರ್ಮರು ಶ್ರಮ ಜೀವಿಗಳು- ಮಮತಾ ಗಟ್ಟಿ Read More »

ಕರಾವಳಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ- ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 18. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭರತನಾಟ್ಯದಲ್ಲಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ- ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ

ಸ್ವಚ್ಛತೆಯೇ ನಮ್ಮ ಸಂಸ್ಕಾರವಾಗಲಿ- ಸಂಸದ ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೇ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ” ಸ್ವಚ್ಛತೆಯೇ ಸೇವೆ -2024″ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛತೆಯನ್ನು ಪಾಲಿಸಲು ಅಭಿಯಾನ ನಡೆಸಬೇಕಾಗಿರುವುದು ವಿರೋಧಕರವಾಗಿದೆ. ಸ್ವಚ್ಛತೆ

ಸ್ವಚ್ಛತೆಯೇ ನಮ್ಮ ಸಂಸ್ಕಾರವಾಗಲಿ- ಸಂಸದ ಬ್ರಿಜೇಶ್ ಚೌಟ Read More »

ಕರಾವಳಿ
Scroll to Top