ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 13.  ಅಂಜನಾದ್ರಿ ಹಾಗೂ ಪಂಪಾಸರೋವರದ ಬಳಿ ಆಗಾಗ್ಗೆ ಚಿರತೆ ಹಾಗೂ ಕರಡಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳು ನುಗ್ಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಭಕ್ತರು ಹಾಗೂ ಪ್ರವಾಸಿಗರ ಆಗ್ರಹಿಸುತ್ತಿದ್ದಾರೆ. ಉತ್ತರ ಭಾರತದಿಂದ ಬರುವ ಅನೇಕ ಪ್ರವಾಸಿಗರು ಇಲ್ಲಿ ರಾತ್ರಿ ವೇಳೆ ಸಮಯ ಕಳೆಯಲು ಬಯಸುತ್ತಾರೆ. […]

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ Read More »

ಕರ್ನಾಟಕ

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇತ್ತೀಚೆಗೆ ತರಬೇತಿ ವಿಮಾನಗಳು ಭಾಗಿಯಾಗಿರುವ ಅಪಘಾತಗಳು ಉಂಟಾಗಿರುವ ಹಿನ್ನೆಲೆ ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಆದೇಶಿಸಿದೆ. ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ಲೆಕ್ಕ ಪರಿಶೋಧನೆಯನ್ನು ಸೆಪ್ಟೆಂಬರ್ ನಿಂದ ನವೆಂಬರ್ 2024ರ ವರೆಗೆ ಮೂರು ಹಂತದಲ್ಲಿ ನಡೆಸಲಾಗುತ್ತದೆ. ಈ ವಿಶೇಷ ಲೆಕ್ಕ ಪರಿಶೋಧನೆಯು 33 ವಿಮಾನ ಹಾರಾಟ ತರಬೇತಿ ಸಂಸ್ಥೆಗಳನ್ನು ಒಳಗೊಳ್ಳಲಿದೆ. ಈ ಹಿಂದೆ ಇಂತಹ ವಿಶೇಷ ಲೆಕ್ಕ ಪರಿಶೋಧನೆಯನ್ನು 2022ರಲ್ಲಿ

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ Read More »

ರಾಷ್ಟ್ರೀಯ ನ್ಯೂಸ್

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮುಕ್ತಾಯ – ಸೋಮವಾರದಿಂದಲೇ ದಂಡ ಫಿಕ್ಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ರಾಜ್ಯ ಸರಕಾರ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಿರುವ ಗಡುವು 15ರಂದು ಮುಕ್ತಾಯವಾಗಲಿದ್ದು, ಹಾಗಾಗಿ ಸೆಪ್ಟೆಂಬರ್ 16 ರಿಂದ ಹೆಚ್‌ಎಸ್‌ಆರ್ಪಿ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇನ್ನುಮುಂದೆ HSRP ಇಲ್ಲದ ವಾಹನಗಳಿಗೆ ಎರಡು ಬಾರಿ ದಂಡ ವಿಧಿಸಿ ಮೂರನೇ ಬಾರಿಗೆ ವಾಹನ ಜಪ್ತಿ ಮಾಡುವ ಬಗ್ಗೆಯೂ ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನದನ್ವಯ 2019ರ ಏಪ್ರಿಲ್ 1ಕ್ಕಿಂತ

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮುಕ್ತಾಯ – ಸೋಮವಾರದಿಂದಲೇ ದಂಡ ಫಿಕ್ಸ್..! Read More »

ಕರ್ನಾಟಕ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಹೊಸ ಬೈಕ್ ಕೊಡಿಸಲು ತಾಯಿ ನಿರಾಕರಿಸಿದ್ದಕ್ಕೆ ಮನನೊಂದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯ್ಯಪ್ಪ ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬ ಬೆಂಗಳೂರಿನ ತಣಿಸಂದ್ರದಲ್ಲಿ ನೆಲೆಸಿತ್ತು. ಆರು ವರ್ಷಗಳ ಹಿಂದೆ ತಂದೆ ತೀರಿಕೊಂಡ ಬಳಿಕ ಯುವಕನ ತಾಯಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಅಡಚಣೆಯಿಂದಾಗಿ, ಬೈಕ್ ಖರೀದಿಸಲು ಸಾಧ್ಯವಾಗಲಿಲ್ಲ. ಮತ್ತು ಸ್ವಲ್ಪ ಸಮಯ ಕಾಯುವಂತೆಯೂ

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪರೀಕ್ಷಾ ಅವಧಿಯಲ್ಲಿ ಹದಿನೈದು ನಿಮಿಷ ಕಡಿತಗೊಳಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಲಾಗಿದ್ದು, ಈ ನಿಯಮ ಈ ವರ್ಷ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಯಾಗಲಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್

ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ Read More »

ಕರ್ನಾಟಕ

ನಾಗಮಂಗಲ ಗಲಭೆ ಪ್ರಕರಣ – ಓರ್ವ ಪೊಲೀಸ್ ಅಧಿಕಾರಿ ಅಮಾನತು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 13. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ‌ಪಟ್ಟಣ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ರವರನ್ನು ಅಮಾನತು ಮಾಡಿ ಆದೇಶಿಸಸಲಾಗಿದೆ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ. ಇನ್ನು ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ನಾಗಮಂಗಲ ಸಹಜ ಸ್ಥಿತಿಗೆ ಮರಳಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ನಾಗಮಂಗಲದ

ನಾಗಮಂಗಲ ಗಲಭೆ ಪ್ರಕರಣ – ಓರ್ವ ಪೊಲೀಸ್ ಅಧಿಕಾರಿ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ 

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 13.  ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಸೆಪ್ಟೆಂಬರ್ 21 ರಂದು ಡೆಲವೇರ್‌ ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್​-ಹ್ಯಾರಿಸ್ ಆಡಳಿತವು 2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಕ್ವಾಡ್ ಶೃಂಗಸಭೆಯಲ್ಲಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶ, ಮಿಲಿಟರಿ, ಆರೋಗ್ಯ, ನೈಸರ್ಗಿಕ ವಿಕೋಪ, ಸಾಗರ ಭದ್ರತೆ, ಗುಣಮಟ್ಟದ ಮೂಲಸೌಕರ್ಯ, ತಂತ್ರಜ್ಞಾನ

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ  Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ ಪ್ರಸ್ತುತ ಹೈಕೋರ್ಟ್ ನ ವಕೀಲೆಯಾಗಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಯಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ Read More »

ಕರಾವಳಿ
Scroll to Top