ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು […]

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »

ಕರಾವಳಿ

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24ರಂದು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ Read More »

ಕರಾವಳಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ Read More »

ಕ್ರೀಡಾ ನ್ಯೂಸ್

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 13. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಜೀವ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸತೀಶ ಎಂದು ಗುರುತಿಸಲಾಗಿದೆ. ಪಿಯುಸಿ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದು, ಅದೇ ದಿನ ಆರೋಪಿಯು ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕಿಸಿ

ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

Types of Corporate Governance

A well-defined corporate governance system promotes fairness and transparency as well as helping your business develop a a https://boardroomdirect.blog/saas-companies-acquisitions-best-practices-of-deal-management/ strong relationship with its shareholders and the community. It helps identify roles and responsibilities, ensures accountability, and allows for compliance with the law and regulations. It also aids in the long-term growth of a business by

Types of Corporate Governance Read More »

ಕರಾವಳಿ

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top