ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ರಾಂಚಿ, ಸೆ. 12.  ಜಾರ್ಖಂಡ್ ನ ಅಬಕಾರಿ ಪೊಲೀಸ್ ಪರೀಕ್ಷೆಯ ಎರಡನೇ ದಿನವಾದ ಬುಧವಾರ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿದ್ದ 16 ಮಂದಿ ಅಭ್ಯರ್ಥಿಗಳು ಒಂದು ಗಂಟೆಯಲ್ಲಿ 10 ಕಿಲೋಮೀಟರ್ ದೂರವನ್ನು ಕ್ರಮಿಸಬೇಕಾದ ಪರೀಕ್ಷೆಯ ವೇಳೆ ಅಸ್ವಸ್ಥಗೊಂಡಿದ್ದಾರೆ. ರಾಜ್ಯದ ಆರು ಕಡೆಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಐದು ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ವಾಂತಿ ಮತ್ತು ಬಳಲಿಕೆಗಾಗಿ ಪರೀಕ್ಷಾ ಕೇಂದ್ರಗಳ ವೈದ್ಯಕೀಯ ಶಿಬಿರಗಳಲ್ಲಿ ಮತ್ತು ಸ್ಥಳೀಯ ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. […]

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಮಹಿಳೆಯರಿಗೆ ಸೆಪ್ಟೆಂಬರ್ 17 ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪಾಲ್ಗೊಂಡವರಿಗೆ ಪ್ರಮಾಣ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ Read More »

ಕರಾವಳಿ

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದ.ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ  ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸೀನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ Read More »

ಕರಾವಳಿ

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ ನೀಡಿರುವ ವಿಚಾರ ಈಗಾಗಲೇ ಪ್ರಕಟಗೊಂಡಿದ್ದು, ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಲಾಗಿದೆ ಎಂಬುದನ್ನು ಯುನಿಕೋಡ್ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖಿಸಿದೆ. ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರ ಪ್ರಯತ್ನ ಶ್ಲಾಘನೀಯ. ಸುದೀರ್ಘ ಅವಧಿಯಲ್ಲಿ ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಅವರು ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ದೊಡ್ಡ ಪರಿಶ್ರಮ ಇದೆ.

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ Read More »

ಕರಾವಳಿ

ಮಹಿಳೆ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿಗೆ ಹೋದ ಭಾರತಿ ಎಂಬವರು ವಾಪಸ್ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯಲ್ಲಿ  ಮನೆ ರಿಪೇರಿಗಾಗಿ ಸಾಲ ಪಡೆದುಕೊಂಡಿದ್ದ ಇವರು, ಮರುಪಾವತಿಸಲು ಜುಲೈ 7ರಂದು ಮಂಗಳೂರಿಗೆ ಹೋದವರು ಮನೆಗೆ ಪಾಪಸ್ ಬಾರದೇ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ಉರುಟು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ. ಮಾತನಾಡುವ ಭಾಷೆ ಕನ್ನಡ, ತುಳು,.

ಮಹಿಳೆ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. 2024-25ನೇ ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆಮಾಡಿ ಆಯ್ಕೆಯಾದ ಪ್ರತಿ ಮಗುವಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8ರಿಂದ 18 ವರ್ಷದೊಳಗಿರಬೇಕು. ಜನನ

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಶ್ರೇಣಿ ಉಪನಿರ್ದೇಶಕರಾಗಿ (ಡಿಡಿಪಿಐ) ಬಡ್ತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ) ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2008ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೋಕೇಶ ಅವರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ Read More »

ಕರಾವಳಿ

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12.  ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top