ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಜೂ.16 : ಪುಕ್ಕೇರಿ ಬೈಪಾಸ್‌ನಲ್ಲಿ ಸೋಮವಾರ ಬೆಳಿಗ್ಗೆ ಬೆಕ್ಕನ್ನು ರಕ್ಷಿಸಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಅರ್ಚಕ ನಾರಾಯಣ ಭಟ್ಟ (48) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ತಕ್ಷಣವೇ ಕಾರ್ಯಾಚರಣೆ ಆರಂಭಿಸಿತು. ಸಿಬ್ಬಂದಿ ರೂಪೇಶ್ ಅವರು ಬಾವಿಗೆ ಇಳಿದು ಅರ್ಚಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಈ ಜಂಟಿ ಕಾರ್ಯಾಚರಣೆಯಲ್ಲಿ ದಿನೇಶ್, ಭೀಮಪ್ಪ, ಗಣೇಶ್, ಸುರೇಶ್ ಹಾಗೂ ಚಾಲಕ ಮುಜಾಮೀರ್ ಸಹಕರಿಸಿದರು.

ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’

(ನ್ಯೂಸ್‌ ಕಡಬ) newskadaba.com,  ಜೂ.16 ::ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ಅಂತಿಮ ರೂಪುರೇಶೆ ಸಿದ್ಧವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.ಸ್ಮಾರ್ಟ್ ಕಾರ್ಡ್‌ಗಳ ಸಮರ್ಪಕ ವಿತರಣೆಗಾಗಿ ‘ವಿಶೇಷ ಉದ್ದೇಶಿತ ವಾಹನ’ ಅನ್ನು ರಚಿಸಿ, ಅದರ ಮೂಲಕವೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ. ಕಾರ್ಡ್‌ನ ಸ್ವರೂಪ, ತಾಂತ್ರಿಕ ನೆರವು ಮತ್ತು ಟೆಂಡರ್ ಪ್ರಕ್ರಿಯೆಯ ಮಾರ್ಗದರ್ಶನಕ್ಕಾಗಿ ‘ವಹಿವಾಟು ಸಲಹೆಗಾರರ ಸಮಿತಿ’ಯನ್ನು ನೇಮಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕಾರ್ಡ್‌ಗಳನ್ನು ವಿತರಿಸಲಾಗುವುದು. ತಾಂತ್ರಿಕ

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜೂ.16 : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಟೆಕ್ನೀಷಿಯನ್ ಗ್ರೇಡ್-1 (ಸಿಗ್ನಲ್): ಆರಂಭಿಕ ಮಾಸಿಕ ವೇತನ ರೂ. 29,200/-………ಟೆಕ್ನೀಷಿಯನ್ ಗ್ರೇಡ್-3: ಆರಂಭಿಕ ಮಾಸಿಕ ವೇತನ ರೂ. 19,900/- ಹುದ್ದೆಗಳಿಗೆ ಅನುಗುಣವಾಗಿ 10ನೇ ಪಾಸ್, ಸಂಬಂಧಿತ ಟ್ರೇಡ್‌ನಲ್ಲಿ ITI, ಡಿಪ್ಲೊಮಾ, B.Sc ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.18 ರಿಂದ 33 ವರ್ಷಗಳು (ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ). ಕಂಪ್ಯೂಟರ್ ಆಧಾರಿತ ಆನ್‌ಲೈನ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ

(ನ್ಯೂಸ್‌ ಕಡಬ) newskadaba.com,  ಜೂ.16 : ಸುಳ್ಯ ತಾಲೂಕಿನ ಪೈಚಾರು ಗ್ರಾಮದಲ್ಲಿ ಸೋಮವಾರ ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಇದ್ದಕ್ಕಿದ್ದಂತೆ ಮುರಿದು ಅಂಗಳಕ್ಕೆ ಬಿದ್ದಿದೆ. ಶಾಫಿ ಪ್ರಗತಿ ಎಂಬುವವರ ಮನೆಯ ಅಂಗಳದಲ್ಲಿ ಈ ಅವಘಡ ಸಂಭವಿಸಿದೆ. ಶಾಫಿ ಅವರ ಹಿರಿಯ ಸಹೋದರ ಹಸೈನಾರ್ ಅವರು ಮಳೆನೀರನ್ನು ಬಕೆಟ್‌ನಲ್ಲಿ ಸಂಗ್ರಹಿಸುತ್ತಿದ್ದಾಗ ಮರ ಬೀಳುವುದನ್ನು ಗಮನಿಸಿ ತಕ್ಷಣವೇ ಪಕ್ಕಕ್ಕೆ ಸರಿದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ಕೆಲವೇ ಕ್ಷಣಗಳ ಮುನ್ನ ಶಾಫಿ ಅವರ ತಾಯಿ ಕೂಡ ಇದೇ

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ!

(ನ್ಯೂಸ್‌ ಕಡಬ) newskadaba.com,  ಜೂ.16 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ನೀಡಿ ಗೌರವಿಸಲಾಗಿದೆ. ಸ್ಲೋವಾಕಿಯಾದ ಅಧ್ಯಕ್ಷರಾದ ಪೀಟರ್ ಪೆಲ್ಲೆಗ್ರಿನ್ ಅವರು ಬ್ರಾಟಿಸ್ಲಾವಾದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಹಸ್ತಾಂತರಿಸಿದರು.ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಹಾಗೂ ಜಾಗತಿಕ ರಾಜತಾಂತ್ರಿಕತೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಅವರ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ನಂತರ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು

(ನ್ಯೂಸ್ ಕಡಬ) newskadaba.com ಜೂ. 10. ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಸುಬ್ರಹ್ಮಣ್ಯದಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಅರಕಲಗೂಡು ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ಎಂದು ಗುರುತಿಸಲಾಗಿದೆ.   ವರದಿಯ ಪ್ರಕಾರ, ಜೂನ್ 13ರಂದು ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎರಡು ಹೋರಿಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಾಹನವು ಕುಲ್ಕುಂದದ ಕಡೆಗೆ ಸಂಚರಿಸುತ್ತಿದ್ದಾಗ, ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಇದೇ ವೇಳೆ ಪಿಕಪ್

ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ CRIF ಯೋಜನೆಯಡಿ ಒಟ್ಟು 57 ಕೋಟಿ ರೂ. ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94

ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ CRIF ಯೋಜನೆಯಡಿ ಒಟ್ಟು 57 ಕೋಟಿ ರೂ. ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಮುಂಗಾರು ಮಳೆ ಕೊರತೆ: ಕರಾವಳಿಯಲ್ಲಿ ಮೀನುಗಾರಿಕೆ ಸ್ತಬ್ಧ, ಬಂಗುಡೆ ಬೆಲೆ ₹400ಕ್ಕೆ ಏರಿಕೆ!

(ನ್ಯೂಸ್‌ ಕಡಬ) newskadaba.com,  ಜೂ.13 ಕರಾವಳಿಯಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಮೀನುಗಳು ಆಳ ಸಮುದ್ರದಲ್ಲೇ ಉಳಿದಿವೆ. ದಡದತ್ತ ಬರುತ್ತಿಲ್ಲ.ಮಂಗಳೂರಿನಿಂದ ಉಳ್ಳಾಲದವರೆಗೆ ನಾಡದೋಣಿ ಮೀನುಗಾರಿಕೆ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಮೀನಿನ ತೀವ್ರ ಕೊರತೆ ಎದುರಾಗಿದೆ.ಗ್ರಾಹಕರ ನೆಚ್ಚಿನ ಬಂಗುಡೆ ಮೀನಿನ ಬೆಲೆ ಕೆಜಿಗೆ 400 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ. ಹವಾಮಾನ ಇಲಾಖೆ ಕಡಿಮೆ ಮಳೆಯ ಮುನ್ಸೂಚನೆ ನೀಡಿದ್ದು, ಪೂರ್ಣ ಪ್ರಮಾಣದ ಮೀನುಗಾರಿಕೆಗೆ ಜುಲೈ 1ರವರೆಗೆ ಕಾಯಬೇಕಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನೆರೆ ರಾಜ್ಯಗಳ ‘ಐಸ್ ಮೀನು’ಗಳನ್ನೇ ನೆಚ್ಚಿಕೊಳ್ಳಬೇಕಾಗುತ್ತದೆ. ಕರಾವಳಿ ಆರ್ಥಿಕತೆ ಕುಸಿಯುವ

ಮುಂಗಾರು ಮಳೆ ಕೊರತೆ: ಕರಾವಳಿಯಲ್ಲಿ ಮೀನುಗಾರಿಕೆ ಸ್ತಬ್ಧ, ಬಂಗುಡೆ ಬೆಲೆ ₹400ಕ್ಕೆ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜೂ.13 ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ತಿರುವನಂತಪುರಂ ಪೊಲೀಸ್ ಕಂಟ್ರೋಲ್ ರೂಮ್‌ಗೆ ಎರಡು ಬಾರಿ ಕರೆ ಮಾಡಿದ್ದ ಆರೋಪಿ, ಕೊಲೆ ಬೆದರಿಕೆ ಒಡ್ಡಿ ಪೊಲೀಸರೊಂದಿಗೂ ಅಸಭ್ಯವಾಗಿ ವರ್ತಿಸಿದ್ದ. “ನನಗೆ ಸತೀಶನ್ ಇಷ್ಟವಿಲ್ಲ” ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಮೊಬೈಲ್ ಸಿಗ್ನಲ್ ಟ್ರ್ಯಾಕ್

ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಕಷ್ಟದಲ್ಲಿರುವ ಪ್ರತಿಷ್ಠಿತ ಎಚ್‌ಎಂಟಿ ಸಂಸ್ಥೆಗೆ ಹೊಸ ಕಳೆ: ಸಚಿವ ಕುಮಾರಸ್ವಾಮಿ ಮಹತ್ವದ ಪ್ರಕಟಣೆ

(ನ್ಯೂಸ್‌ ಕಡಬ) newskadaba.com,  ಜೂ.13 ಬೆಂಗಳೂರು: ಸಂಕಷ್ಟದಲ್ಲಿರುವ ಭಾರತದ ಪ್ರತಿಷ್ಠಿತ ಸಾರ್ವಜನಿಕ ವಲಯದ ಉದ್ಯಮ ‘ಹಿಂದೂಸ್ತಾನ್‌ ಮಷೀನ್‌ ಟೂಲ್ಸ್‌’ ಕಂಪನಿಗೆ ಮರುಜೀವ ನೀಡುವ ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಸಿಎಂಟಿಐ ಸಂಸ್ಥೆಯ 65ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಉತ್ಪಾದನೆ ಆಧಾರಿತ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಯ ದೂರದೃಷ್ಟಿಗೆ ಪೂರಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ನೀತಿ ಆಯೋಗದ

ಸಂಕಷ್ಟದಲ್ಲಿರುವ ಪ್ರತಿಷ್ಠಿತ ಎಚ್‌ಎಂಟಿ ಸಂಸ್ಥೆಗೆ ಹೊಸ ಕಳೆ: ಸಚಿವ ಕುಮಾರಸ್ವಾಮಿ ಮಹತ್ವದ ಪ್ರಕಟಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top