ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 31. ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ […]

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ Read More »

ಕರಾವಳಿ

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಶಂಕಿತ ಉಗ್ರನನ್ನು ಅಝೀಝ್ ಅಹ್ಮದ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಎಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದುಬಂದಿದೆ.

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಗಣಪತಿ ದೇವರನ್ನು ಪೂಜಿಸುವ ನಾವು ಪ್ರಕೃತಿ ಹಾಗೂ ಪರಿಸರವನ್ನೂ ಉಳಿಸಬೇಕು. ಹಾಗಾಗಿ ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ವರ್ಷ ದೇಶದಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಹಾಗೂ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ Read More »

ಕರ್ನಾಟಕ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ. ಸಂಯುಕ್ತ ಅವರು 2.5 ವರ್ಷದ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ‍್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಈ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು Read More »

ಕರ್ನಾಟಕ

ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಪಂದ್ಯಾವಳಿಯಲ್ಲಿ ಮುಂಬೈ ತಂಡದ ಪರವಾಗಿ ಆಟವಾಡುತ್ತಿದ್ದಾರೆ. ತಮಿಳನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ.5 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯ ಯಾವ ಪ್ರಮಾಣದ್ದು ಎಂಬುದು ತಿಳಿದುಬಂದಿಲ್ಲ. ಈವರೆಗೂ

ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ Read More »

ಕ್ರೀಡಾ ನ್ಯೂಸ್

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!            

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಆ. 31.  ವಿಜಯವಾಡದ ಮೊಗಲ್‌ರಾಜಪುರಂ ಪ್ರದೇಶದಲ್ಲಿ ಮನೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯ ನಡುವೆ ಬೆಟ್ಟದ ಮೇಲಿನಿಂದ ಬಂಡೆ ಬಿದ್ದು ಮನೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಅವಶೇಷಗಳು ಮಣ್ಣಿನ ಅಡಿಯಲ್ಲಿ ಹುದುಗಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.  

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!             Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಹರಿಯಾಣದ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 200ನೇ ದಿನ ತಲುಪಿದ್ದು, ಪ್ರತಿಭಟನಾ ಸ್ಥಳಕ್ಕೆ ಕುಸ್ತಿಪಟು ವಿನೇಶ್ ಫೋಗಟ್ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ.   ರೈತರ ಪ್ರಮುಖ ಬೇಡಿಕೆಗಳನ್ನು ಬೆಂಬಲಿಸಿದ ಅವರು ಅನ್ನದಾತರ ಕುಂದುಕೊರತೆಗಳನ್ನು ಆಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರೈತರ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ರೈತರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ. ಈ ದೇಶದ ಪ್ರಜೆಗಳಾಗಿರುವ ರೈತರು ದೇಶವನ್ನು ನಡೆಸುತ್ತಾರೆ. ಅವರು ದೇಶಕ್ಕೆ ಅನ್ನ

ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ Read More »

ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ಸರಣಿ- ಭಾರತ U-19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್

(ನ್ಯೂಸ್ ಕಡಬ) newskadaba.com ಮುಂಬೈ, ಆ. 31.  ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಹು-ಫಾರ್ಮ್ಯಾಟ್ ಸರಣಿಗಾಗಿ ಭಾರತ U-19 ತಂಡದಲ್ಲಿ ಭಾರತದ ಮಾಜಿ ಮುಖ್ಯ ಕೋಚ್ ಮತ್ತು ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಆಲ್‌ರೌಂಡರ್ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30

ಆಸ್ಟ್ರೇಲಿಯಾ ವಿರುದ್ಧ ಸರಣಿ- ಭಾರತ U-19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್ Read More »

ಕ್ರೀಡಾ ನ್ಯೂಸ್

ನಾಪತ್ತೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಗದಗ, ಆ. 31.  ಗದಗ ಜಿಲ್ಲೆಯ ತೋಟಗಂಟಿ ಗ್ರಾಮದಿಂದ ಆಗಸ್ಟ್ 20 ರಂದು ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ನಂತರ ಗ್ರಾಮದ ಹೊರವಲಯದ ಪಾಳು ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಆಕೆ ಈಗ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೋಟಗಂಟಿ ಗ್ರಾಮದ ಪಾರ್ವತಿ ಕಲ್ಮಠ ಅವರು ಆ.20ರಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಅಪರಿಚಿತ ಮಹಿಳೆ ಮನೆಗೆ ನುಗ್ಗಿ, ನನ್ನನ್ನು ಗ್ರಾಮದ ಪ್ರತ್ಯೇಕ

ನಾಪತ್ತೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ..! Read More »

ಕರ್ನಾಟಕ

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದು, ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.  

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top