ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ಆ. 28. ಟೆಕ್ನಿಕಲ್ ಮೈಂಟೆನೆನ್ಸ್ ಇರುವ ಕಾರಣಕ್ಕೆ ಪಾಸ್​ಪೋರ್ಟ್ ಗೆ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದು, ನಾಳೆ (ಆ. 29 ಗುರುವಾರ) ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2ರ ಬೆಳಗ್ಗೆ 6 ಗಂಟೆಯವರೆಗೂ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ ಎಂದು ಇಲಾಖೆ ತಿಳಿಸಿದೆ.   ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಹಾಗಾಗಿ ನಾಳೆ ಸಂಜೆ 8ರಿಂದ ಸೆಪ್ಟೆಂಬರ್ 2ರ ಬೆಳಗ್ಗೆ […]

ನಾಳೆಯಿಂದ 4 ದಿನ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ – ಪಾಸ್ ಪೋರ್ಟ್ ಇಲಾಖೆ ಆದೇಶ Read More »

ಬ್ರೇಕಿಂಗ್ ನ್ಯೂಸ್

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ ಗೆ ಸೆಪ್ಟೆಂಬರ್‌ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ ನ

ರೇಣುಕಾಸ್ವಾಮಿ ಕೊಲೆ ಪ್ರಕರಣ- ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..! 

(ನ್ಯೂಸ್ ಕಡಬ) newskadaba.com ಸತ್ನಾ, ಆ. 28. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ವ್ಯಕ್ತಿಗಳ ಗುಂಪೊಂದು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಘಟನೆಯಲ್ಲಿ 15 ರಿಂದ 20 ಹಸುಗಳು ಸಾವನ್ನಪ್ಪಿವೆ, ಆದರೆ ಮಾಹಿತಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಅರಿತು, ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ,

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ.ಷರೀಫಾ, ಡಾ. ಬಂಜಗೆರೆ ಜಯಪ್ರಕಾಶ್, ಡಾ.ನಟರಾಜ್ ಹುಳಿಯಾರ್, ಬಿ.ಪೀರ್ ಬಾಷಾ, ಚ.ಹ.ರಘುನಾಥ್, ಆಯೆಷಾ ಫರ್ಝಾನಾ, ಸಿದ್ದಪ್ಪ ಮೂಲಗೆ ಸೇರಿದಂತೆ ಹಲವರನ್ನು ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.   ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡವರ ಪಟ್ಟಿ ಈ ಕೆಳಗಿನಂತಿದೆ- ಬೆಂಗಳೂರು (ಜ್ಞಾನಭಾರತಿ), ವಿಶ್ವವಿದ್ಯಾಲಯ, ಬೆಂಗಳೂರು:- ಡಾ. ಜಯಶ್ರೀ ಹೆಗ್ಡೆ, ಎಂ.ಎ. ಮಹದೇವ ನಾಯ್ಕ್‌, ಡಾ.ಕೆ.ಷರೀಫಾ, ಡಿ.ಬಿ.ಗಂಗರಾಜು, ದಂಡಿಕೆರೆ

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ Read More »

ಕರ್ನಾಟಕ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ Read More »

ಕರಾವಳಿ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ನೂತನ ಕಾರಾಗೃಹ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ ಪರಪ್ಪನ ಅಗ್ರಹಾರದಲ್ಲಿನ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿದ್ದ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ Read More »

ಕರ್ನಾಟಕ

ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಗೌರಿ-ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಹಬ್ಬಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ಆರಂಭಿಸಿದೆ. ಇದರಂತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯುತ್ತಿದೆ. ಆದರೆ, ವಶಕ್ಕೆ ಪಡೆದ ಈ ಪಿಒಪಿ ಗಣೇಶ ಮೂರ್ತಿಗಳು ಯಾವ ರೀತಿ ವಿಲೇವಾರಿಯಾಗುತ್ತಿದೆ ಎಂಬುದರ ಕುರಿತ ಪ್ರಶ್ನೆ ಹಲವರಲ್ಲಿ ಕಾಡತೊಡಗಿದೆ. ಇಲ್ಲಿಯವರೆಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB), ಜಿಲ್ಲಾಡಳಿತಗಳು ಮತ್ತು ಮಹಾನಗರ ಪಾಲಿಕೆಗಳು ರಾಜ್ಯದಲ್ಲಿ

ಗಣೇಶ ಹಬ್ಬಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧತೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ವಶಕ್ಕೆ Read More »

ಕರ್ನಾಟಕ

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 28. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್ 1, 2024 ರಿಂದ ಜಯ್ ಶಾ ICCಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top