ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ..!  ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನವರಿಯಿಂದ 10,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು ಮೂರು ಸಾವುಗಳು ವರದಿಯಾಗಿದೆ. ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಓವಿ ಟ್ರ್ಯಾಪ್ ಸಾಧನವು ಸೊಳ್ಳೆಗಳು, ಸೊಳ್ಳೆಗಳ ಮೊಟ್ಟೆ ನಾಶಪಡಿಸಲಿದೆ. ಪ್ರಾಯೋಗಿಕವಾಗಿ ಬಿನ್ನಿಪೇಟೆ ವಾರ್ಡ್‌ ನ ಗೋಪಾಲಪುರದಲ್ಲಿ 120 ಟ್ರ್ಯಾಪ್‌ ಗಳನ್ನು ಅಳವಡಿಸಲಾಗಿದೆ. ಇದು […]

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ..!  ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ Read More »

ಕರ್ನಾಟಕ

ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 27.  ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮನಿಕಂಟ್ರೋಲ್‌ ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ದುಷ್ಕರ್ಮಿಗಳು ತಮ್ಮ ಕಾನೂನು ಬಾಹಿರ ಚುಟುವಟಿಕೆಗಳನ್ನು ನಡೆಸಲು ಟೆಲಿಗ್ರಾಂ ವೇದಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ

ಭಾರತದಲ್ಲಿ ಟೆಲಿಗ್ರಾಮ್ ನಿಷೇಧ ಸಾಧ್ಯತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಸುಳ್ಯ  ಇನ್ಸ್ಪೆಕ್ಟರ್ ಆಗಿದ್ದ ಸತ್ಯನಾರಾಯಣ ಕೆ.ಯವರು ವರ್ಗಾವಣೆಗೊಂಡ ಬಳಿಕ ಪುತ್ತೂರಿನವರಿಗೆ ಪ್ರಭಾರ ವಹಿಸಲಾಗಿತ್ತು. ಇದೀಗ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ತಿಮ್ಮಪ್ಪ ನಾಯ್ಕ್ ರವರನ್ನು, ಇದೀಗ ಸುಳ್ಯಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ್ ನೇಮಕ Read More »

ಕರ್ನಾಟಕ

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ – ಅರಣ್ಯಾಧಿಕಾರಿ ಅಮಾನತು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 27. ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿಯೋರ್ವರನ್ನು ಅರಣ್ಯ ಇಲಾಖೆಯು ಅಮಾನತು ಮಾಡಿ ಆದೇಶ ಹೊರಡಿಸಿದೆ. ಅಧಿಕಾರಿ ಚಂದನಗೌಡ ದ್ಯಾಮನಗೌಡರ ಎಂದು ತಿಳಿದುಬಂದಿದೆ. ಇವರು ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ತೆರಳಲು ಆನ್ ಲೈನ್ ಮೂಲಕ 250 ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ.

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ – ಅರಣ್ಯಾಧಿಕಾರಿ ಅಮಾನತು Read More »

ಕರ್ನಾಟಕ

ಕಾರ್ಕಳ‌ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 27. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯೋರ್ವನನ್ನು ಬಂಧಿಸಲಾಗಿದೆ.   ಬಂಧಿತ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾರ್ಕಳ ತೆಲ್ಲರು ನಿವಾಸಿ ಅಭಯ್ ಎಂದು ತಿಳಿದುಬಂದಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಸ್ನೇಹಿತರಾಗಿದ್ದು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದಾರೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಕಾರ್ಕಳ‌ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಅಬಕಾರಿ ಇಲಾಖೆ ಮೂರು ವರ್ಷದಲ್ಲಿ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ ಸಂಗ್ರಹಿಸಿದೆ ಎನ್ನಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 36 ರ ಅಡಿಯಲ್ಲಿ ದಂಡದ ಜೊತೆಗೆ, ಅಬಕಾರಿ ಇಲಾಖೆಯು 2021-22, 2022-23 ಮತ್ತು 2023-24 ರ ಆರ್ಥಿಕ ವರ್ಷದಲ್ಲಿ 121 ಅಂಗಡಿಗಳ ಪರವಾನಗಿಯನ್ನು ಅಮಾನತುಗೊಳಿಸಿದೆ. ಎಂಎಸ್‌ ಐಎಲ್ ಅಂಗಡಿಗಳಲ್ಲಿ ಆರನೇ ಒಂದು

ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ Read More »

ಕರ್ನಾಟಕ

ಚೆಕ್ ಬೌನ್ಸ್: ನಟಿ ಪದ್ಮಜಾ ರಾವ್’ಗೆ 3 ತಿಂಗಳ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಕನ್ನಡ ಚಿತ್ರರಂಗದ ನಟ-ನಟಿಯರ ಒಂದೊಂದೇ ವಿವಾದಗಳು ಬೆಳಕಿಗೆ ಬರುತ್ತಿದ್ದು, ಇದೀಗ ಜನಪ್ರಿಯ ನಟಿಯೊಬ್ಬರು ಜೈಲು ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಸಿನಿಮಾ ಜೊತೆಗೆ ಸದ್ಯ ಕಿರುತೆರೆಯಲ್ಲೂ ಬಹುಬೇಡಿಕೆಯ ನಟಿಯಾಗಿರುವ ಪದ್ಮಜಾ ರಾವ್ ಅವರ ಚೆಕ್

ಚೆಕ್ ಬೌನ್ಸ್: ನಟಿ ಪದ್ಮಜಾ ರಾವ್’ಗೆ 3 ತಿಂಗಳ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ

ಸಾಲಬಾಧೆ- ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಯಾದಗಿರಿ, ಆ. 27. ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಸುರಪುರ ತಾಲೂಕಿನ‌ ನಗನೂರ ಗ್ರಾಮದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ರೈತನನ್ನು ತಿಪ್ಪಣ್ಣ ಕಟ್ಟಿಮನಿ (45) ಎಂದು‌ ಗುರುತಿಸಲಾಗಿದೆ. ಬ್ಯಾಂಕ್ ಸಾಲ ಹಾಗೂ ಕೈ ಸಾಲ ಸೇರಿ ಒಟ್ಟು 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಇವರು ಸಾಲತೀರಿಸಲಾಗದೇ ಕಂಗಾಲಾಗಿದ್ದರು. ಇದರಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾಲಬಾಧೆ- ರೈತ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ.

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ Read More »

ಕರ್ನಾಟಕ
Scroll to Top