ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ   ಆರೆಂಜ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.                                                                                                          

ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ   ಆರೆಂಜ್ ಅಲರ್ಟ್ ಘೋಷಣೆ       Read More »

ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com ಆ. 27. ಆಹಾರ ಅರಸಿಕೊಂಡು ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಯು ಬೇಲಿ ದಾಟುವ ವೇಳೆ ತೋಟಕ್ಕೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 39 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ 2024ರ ಕಾರ್ಯಕ್ರಮವು ವೆನ್‍ ಲಾಕ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಮಾತನಾಡಿ, ಮಾನವನ ಸಾವಿನ

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 27.  ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಇಂದು ಮಧ್ಯರಾತ್ರಿಯ ನಂತರ ಮಠದ ಇತರ ಸ್ವಾಮೀಜಿಗಳ ಜೊತೆಗೂಡಿ ಶ್ರೀಕೃಷ್ಣನಿಗೆ ಪ್ರಸಾದ (ಅರ್ಘ್ಯ) ಅರ್ಪಿಸಿದರು. ಮಧ್ಯಾಹ್ನ 12.07ರ ಸುಮಾರಿಗೆ ಧಾರ್ಮಿಕ ವಿಧಿವಿಧಾನ ನೆರವೇರಿತು. ಬಳಿಕ ಭಕ್ತರಿಗೆ ಶ್ರದ್ಧಾ ಭಕ್ತಿಯಿಂದ ಅರ್ಘ್ಯ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ರಾಕ್ಷಸ ಸಂಹಾರಕ್ಕಾಗಿ ಭಗವಾನ್ ಶ್ರೀಕೃಷ್ಣನು ಭೂಮಿಯಲ್ಲಿ ಕಾಣಿಸಿಕೊಂಡಿದ್ದನ್ನು ಆಚರಿಸಲು ಭಕ್ತರು ಶುಕ್ರವಾರ ಇಡೀ ದಿನ ಉಪವಾಸವನ್ನು ಆಚರಿಸಿದರು.

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ

ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನ ಪದವು, ಕದ್ರಿ ಬಿ ಮತ್ತು ಮರೋಳಿ  ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅರ್ಜಿ ಸಲ್ಲಿಸಿದ್ದಾರೆ.   ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯನ್ವಯ

ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ Read More »

ಕರಾವಳಿ, ಕರ್ನಾಟಕ

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಯಾವುದೇ ಜಾತಿ, ಮತದ ಭೇದವಿಲ್ಲದೆ  ಅನ್ಯ ಜಾತಿಯವರು  ತಮ್ಮ ಮಕ್ಕಳಿಗೆ ಕೃಷ್ಣವೇಶವನ್ನು  ಹಾಕುವ ಸನ್ನಿವೇಶವನ್ನು  ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು  ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್  ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಸಂಘ ನಂದಿನಿ ಸಭಾಭವನದಲ್ಲಿ

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮಂಗಳೂರಿನ ಸರ್ಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಗಸ್ಟ್ 31ರವರೆಗೆ ಪ್ರವೇಶಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರ– ಎಲೆಕ್ಟ್ರಾನಿಕ್ ಮೆಕ್ಯಾನಿಕ್ ತರಬೇತಿ ಅವಧಿ 2 ವರ್ಷ, ಖಾಲಿ ಇರುವ ಸೀಟುಗಳು 18 ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ತರಬೇತಿ ಅವಧಿ ಎರಡು ವರ್ಷ,  ಖಾಲಿ ಇರುವ ಸೀಟುಗಳು 10. ಎಲೆಕ್ಟ್ರಿಷಿಯನ್

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 6ನೇ ತರಗತಿಯ ಆಯ್ಕೆಗೆ ನಡೆಯುವ ಈ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವೆಬ್ಬ್ ಸೈಟ್ www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯ ಮುಡಿಪು, ಉಳ್ಳಾಲ ತಾಲೂಕು  ದೂರವಾಣಿ ಸಂಖ್ಯೆ 08255-261300 ಸಂಪರ್ಕಿಸಬಹುದು ಎಂದು

ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ(ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ  ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನುವಿತರಿಸಿದರು. ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78,000 ರೂ. ಸಬ್ಸಿಡಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ
Scroll to Top