ಅಪಘಾತ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆ.28, ಟ್ರಕ್ ಹಾಗೂ ತೂಫಾನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರದಂದು ನಡೆದಿದೆ. ವಡೋದರಾದ ಕುಟುಂಬವೊಂದು ತೂಫಾನ್ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ […]

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಭೀಕರ ರಸ್ತೆ ಅಪಘಾತ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಕ್ವಾಲಿಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮಖಾಮುಖಿ ಢಿಕ್ಕಿಯಾಗಿ ಕ್ವಾಲಿಸ್‍ ನಲ್ಲಿದ್ದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಬುಧವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಹೆಸರು ಪತ್ತೆಯಾಗಿಲ್ಲ. ಉಳಿದಂತೆ ನಾಗರಾಜು, ಆನಂದ, ಪ್ರಭುಲಿಂಗದೇವರು ಎಂಬವರು ಗಾಯಗೊಂಡಿದ್ದಾರೆ. ಕ್ವಾಲಿಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದವರನ್ನು ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜ್ಯೋತಿಷಿಗಳು ಎಂದು ಹೇಳಲಾಗ್ತಿದೆ. ಬುಧವಾರ ಬೆಳಗ್ಗೆ ಕೊಳ್ಳೆಗಾಲದಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದ ಕ್ವಾಲಿಸ್‍ ಹಾಗೂ

ಭೀಕರ ರಸ್ತೆ ಅಪಘಾತ ► ಇಬ್ಬರ ದುರ್ಮರಣ Read More »

ಕರ್ನಾಟಕ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಾರವಾರ, ಆ.10. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ಬಿಜಾಪುರ ಜಿಲ್ಲೆಯ ಜಮನಾಳ ನಿವಾಸಿಗಳು 9 ಮಂದಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ
Scroll to Top