ಇಂದಿನ ಹವಾಮಾನ ವರದಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ. 18:  ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, […]

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.16: ರಾಜ್ಯದಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಇಲಾಖೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.12: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆ ವೇಳೆಗೆ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರ ಜೊತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.09 :  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ…. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಹೆಚ್ಚಿನ ಚಳಿ ಇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.03 : ದಿತ್ವಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದ್ದು, ಮೈ ಕೊರೆಯುವ ಚಳಿ ಇರಲಿದೆ. ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.27:  ರಾಜ್ಯಾದ್ಯಂತ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.25 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ…….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ವರದಿ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top