ಕಡಬ ನ್ಯೂಸ್

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜು.05. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯ ರೆಡ್ಡಿ, “ಕಾಂಗ್ರೆಸ್ ಮಹಿಳೆಯರಿಗೆ ಸಬಲೀಕರಣ ನೀಡಿದೆ. ಇಡೀ ದೇಶಕ್ಕೆ ಮಾದರಿಯಾಗಬಹುದಾದ ಪಕ್ಷದ ಸಂಘಟನೆಯನ್ನು ನಿರ್ಮಿಸುವುದು ಅವಶ್ಯಕ. ಪ್ರತಿ ಮನೆ ಬಾಗಿಲಿಗೂ ಹೋಗಿ […]

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದ್ದು, ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.  ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠವು 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಜೊತೆಗೆ

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ Read More »

ಕರ್ನಾಟಕ

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು – ಮನ್ಮಾಡ್ ಮಂಗಳದ್ವೀಪ ಸೂಪರ್‌ ಫಾಸ್ಟ್ ಎಕ್ಸ್ ಪ್ರೆಸ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್‌ ನಲ್ಲಿ ಜಲಪಾತದಂತೆ ನೀರು ಸುರಿದಿದ್ದು, ಪರಿಣಾಮ ರೈಲಿನ ಒಳಭಾಗದಲ್ಲಿ ಪ್ರವಾಹ ಉಂಟಾಗಿದೆ. ನಿರಂತರ ನೀರು ಸೋರಿಕೆಯಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ರಾತ್ರಿಯಿಡಿ ನಿದ್ದೆಯಿಲ್ಲದೆ ಪರದಾಡಿದ್ದಾರೆ. ಈ ವಿಚಾರವನ್ನು

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….! Read More »

ಕರಾವಳಿ

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….!

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದ್ದು, ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….! Read More »

ಕರಾವಳಿ

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22.  ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದ್ದು, ನೀಟ್,

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ   ನಾಳೆ ಕೇಂದ್ರ ಬಜೆಟ್ ಮಂಡನೆ.! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

(ನ್ಯೂಸ್‌ ಕಡಬ) newskadaba ಮೈಸೂರು, ಮಾ.09: ಕಾಂಗ್ರೆಸ್​ನ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ Read More »

ಕರ್ನಾಟಕ
Scroll to Top