ಕಡಬ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ […]

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.!

(ನ್ಯೂಸ್ ಕಡಬ) newskadaba.com ಮಂಗಳೂರು, ಆ,18:   ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿ ಸರ್ಕಾರ ಹೊರಡಿಸಿರುವ ನೂತನ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಆದರೆ, ಸ್ಥಳೀಯ ಪೊಲೀಸರ ಅನುಮತಿಯೊಂದಿಗೆ ಸಭಾಂಗಣಗಳಲ್ಲಿ ಒಂದು ದಿನದ ಸರಳ ಆಚರಣೆಗೆ ಹೆಚ್ಚಿನ ಸಮಿತಿಗಳು ಸಿದ್ಧತೆ ನಡೆಸಿವೆ. ಜಿಲ್ಲೆಯ ವಿವಿಧೆಡೆ ಸಣ್ಣ, ದೊಡ್ಡ ಮೈದಾನಗಳಲ್ಲಿ ಮೂರರಿಂದ ಐದು ದಿನಗಳ ಸಾರ್ವಜನಿಕ ಆಚರಣೆಗಳು ವಿಜ್ರಂಭಣೆಯಿಂದ ಜರುಗುತಿದ್ದವು. ಸರ್ಕಾರದ ಮಾರ್ಗಸೂಚಿ ಪ್ರಕಾರ, ರಸ್ತೆ ಬದಿ, ಮೈದಾನಗಳಲ್ಲಿ ಪೆಂಡಾಲ್ ಹಾಕಿ ಆಚರಣೆ ಮಾಡುವಂತಿಲ್ಲ. ಆದ್ದರಿಂದ ಜಿಲ್ಲೆಯ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.! Read More »

ಕರಾವಳಿ, ಕರ್ನಾಟಕ

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.     ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ಹೆತ್ತವರ ಮೇಲೆ ಮಕ್ಕಳು ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಇದೀಗಾ ಪುತ್ತೂರಿನಲ್ಲಿ ಅಂತಹುದೇ ಪ್ರಕರಣ ನಡೆದಿದೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.     ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಹಾಗೂ ಮಗನ ನಡುವೆ ಕಲಹ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ.  ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು.

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,17: ಮಂಚಿಲ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ  ಬೃಹತ್ ರಕ್ತದಾನ ಶಿಬಿರ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ನಲ್ಲಿ ನಡೆಯಿತು ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಯು.ಎಚ್ ಫಾರೂಕ್ ಮಾತನಾಡಿ ಪ್ರತೀ ವರ್ಷವು ನಾವು ಸ್ವಾತಂತ್ರ್ಯೋತ್ಸವದ ದಿನದಂದು ಈ ಕಾರ್ಯಕ್ರಮವನ್ನು ಆಯೋಜಿಸುತ್ತೇವೆ, ಈ ಬಾರಿ

ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ,17:  ಇತ್ತೀಚೆಗೆ ಮಂಗಳೂರು ಎಫ್ ಸಿ ಮಂಗಳೂರು ಅಕಾಡೆಮಿಗೆ ನಡೆದ ಅಂಡರ್18 ಆಯ್ಕೆ ಟ್ರಯಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಹೀರೊ ಹೈ ಲೀಗ್ ಪಂದ್ಯಾಟದಲ್ಲಿ ಎಫ್ ಸಿ ಮಂಗಳೂರು ಫುಟ್ಬಾಲ್ ಅಸ್ಸೋಸಿಯೇಷನ್ ತಂಡದ ಪರವಾಗಿ ಅದ್ನಾನ್ ಪಟೇಲ್ ಪಾಲ್ಗೊಳ್ಳಲಿದ್ದಾರೆ.   ಆಲ್ ಇಂಡಿಯಾ ಫುಟ್ಬಾಲ್ ಅಸ್ಸೋಸಿಯೇಷನ್ ಗೆ ತನ್ನನ್ನು ನೋಂದಾಯಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹಲವಾರು ಜಿಲ್ಲಾ  ಮತ್ತು ತಾಲೂಕು ಮಟ್ಟದ ಪಂದ್ಯಾವಳಿಯನ್ನು ಪ್ರತಿನಿಧಿಸಿ

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ,17:  ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿ, 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು.     ಈ ಪೈಕಿ ಓರ್ವ ವ್ಯಕ್ತಿಯ ಮೃತ ದೇಹ ಸೋಮವಾರ ಪತ್ತೆಯಾಗಿದೆ.ಪತ್ತೆಯಾದ ಮೃತದೇಹವನ್ನು ಮೀನುಗಾರ  ನಾಗರಾಜ್ ಖಾರ್ವಿಯದ್ದು ಎಂದು ಗುರುತಿಸಲಾಗಿದ್ದು ಇತರೆ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

(ನ್ಯೂಸ್ ಕಡಬ) newskadaba.com ಉಡುಪಿ. ಆ,17:  ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,17:  ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ

(ನ್ಯೂಸ್ ಕಡಬ) newskadaba.com ಬಾಂಜಿಕೋಡಿ, ಆ,17:  ಕರಾವಳಿಯಲ್ಲಿ ಇತ್ತೀಚಿಗೆ ಸುರಿದ ವಿಪರೀತ ಮಳೆಗೆ ಬಾಂಜಿಕೋಡಿಯ ಪ್ರಭಾಕರ ನಾಯಕ್ ಎಂಬವರ ಮನೆಯು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.ಘಟನ ಸ್ಥಳಕ್ಕೆ ಶಾಸಕ ಎಸ್.ಅಂಗಾರ ರವರು ಇಂದು ಭೇಟಿ ನೀಡಿದ್ದರು.     ಮಳೆಹಾನಿ ಯೋಜನೆಯಡಿಯಲ್ಲಿ ಹೊಸ ಮನೆಗೆ ರೂ.5 ಲಕ್ಷ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ದ.ಕ. ಜೇನು ವ್ಯವಸಾಯಗಾರರ ಸೇವಾ ಸರಕಾರಿ ಸಂಘದ ಅಧ್ಯಕ್ಷ ಚಂದ್ರ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ Read More »

ಕರಾವಳಿ, ಕರ್ನಾಟಕ
Scroll to Top