ಕಡಬ ನ್ಯೂಸ್

ಬೆಂಗಳೂರು ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನಲ್ಲಿ ಹೊಸ ಮೆಟ್ರೋ ನಿಲ್ದಾಣ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೂಲಗಳ ಪ್ರಕಾರ ಬಹುನಿರೀಕ್ಷಿತ 12.75 ಕಿಮೀ ಉದ್ದದ ವೈಟ್​ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗವು ಮಾರ್ಚ್ 25 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. ವೈಟ್​ಫೀಲ್ಡ್-ಕೆಆರ್ ಪುರ ಮೆಟ್ರೋ ಮಾರ್ಗದಲ್ಲಿ 12 ನಿಮಿಷಗಳಿಗೊಮ್ಮೆ ರೈಲು ಸಂಚರಿಸುವ ಸಾಧ್ಯತೆಯಿದ್ದು, ಈ ಮೂಲಕ ಟ್ರಾಫಿಕ್ ಸಮಸ್ಯೆ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ Read More »

ಕರ್ನಾಟಕ

ಮತ್ತೆ ದಾಖಲೆಯತ್ತ ಚಿನ್ನದ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 17. ಒಂದೂವರೆ ತಿಂಗಳ ಹಿಂದೆ 58,900 ರೂ. ಸಮೀಪ ತಲುಪಿದ್ದ ಚಿನ್ನದ ದರ ಮತ್ತೆ ಏರಿಕೆ ಮೂಲಕ ದಾಖಲೆ ಬರೆಯುತ್ತಿದೆ. ಆಗಸ್ಟ್ 2022 ರಲ್ಲಿ ಚಿನ್ನವು 56,200 ರೂ. ವರೆಗೆ ಮುಟ್ಟಿತು. ಫೆಬ್ರವರಿ ನಂತರ ಚಿನ್ನ 55,000 ರೂ.ಗೆ ಇಳಿದಿತ್ತು. ಆದರೆ ಈಗ ಕಳೆದ ಕೆಲವು ದಿನಗಳಿಂದ ಮತ್ತೆ ಏರಿಕೆ ನಡೆಯುತ್ತಿದೆ. ಬೆಳ್ಳಿ ಕೂಡ 2023 ಫೆಬ್ರವರಿ 2 ರಂದು 71,500 ಮಟ್ಟವನ್ನು ತಲುಪಿತು. ನಂತರ ಪ್ರತಿ ಕೆಜಿಗೆ 10,000

ಮತ್ತೆ ದಾಖಲೆಯತ್ತ ಚಿನ್ನದ ಬೆಲೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಪಿಎಂ ಮಿತ್ರ ಜವಳಿ ಪಾರ್ಕ್ ➤ ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧೆಡೆ 7 ಬೃಹತ್ ಪಿಎಂ ಮಿತ್ರ ಮೆಗಾ ಟೆಕ್ಸ್​ಟೈಲ್ ಪಾರ್ಕ್​ಗಳನ್ನು ಸ್ಥಾಪಿಸುತ್ತಿದ್ದು, ಇದರಲ್ಲಿ ಒಂದು ಪಾರ್ಕ್ ಕರ್ನಾಟಕದ ಪಾಲಾಗಿದೆ. ಕರ್ನಾಟಕ ಸೇರಿದಂತೆ ಭಾರತದ ಏಳು ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್​ಟೈಲ್ ಪಾರ್ಕ್​ಗಳು ಸ್ಥಾಪನೆ ಆಗಲಿವೆ ಎಂದು ಶುಕ್ರವಾರದಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಭಾರತದ ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು

ಕರ್ನಾಟಕಕ್ಕೆ ಪಿಎಂ ಮಿತ್ರ ಜವಳಿ ಪಾರ್ಕ್ ➤ ಪ್ರಧಾನಿ ಮೋದಿ ಘೋಷಣೆ Read More »

ಕರ್ನಾಟಕ

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

(ನ್ಯೂಸ್ಕಡಬ) newskadaba.com ಮಂಗಳೂರು, ಮಾ. 17. ಮಾ.16 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯದ  ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ Read More »

ಕರ್ನಾಟಕ

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ. ಮಾ. 17. ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಶವವಾಗಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರೇಖಾ ಸಂಗಪ್ಪ ಯಂಕಂಚಿ(11) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಹಾಕಿ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ತಂದೆಯೇ ಕೊಂದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಆಶಾ(32) ಎಂದು ಗುರುತಿಸಲಾಗಿದೆ. ತಂದೆ- ತಾಯಿ ಜೊತೆ ವಾಸವಿದ್ದ ಆಶಾ, ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ತಂದೆ-ತಾಯಿಗೆ ನಿತ್ಯವೂ ಕಿರುಕುಳ ನಿಡುತ್ತಿದ್ದಳು ಎನ್ನಲಾಗಿದೆ. ಮಗಳ ಈ ವರ್ತನೆಯಿಂದ ಬೇಸತ್ತ ತಂದೆ ರಾತ್ರಿ ಮಲಗಿದ್ದ ಮಗಳ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿನ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019 ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಗುರುತಿನ ಚೀಟಿ ಮತ್ತು

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ Read More »

ಕರಾವಳಿ, ಕರ್ನಾಟಕ

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 17. ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಿನ್ಸ್ ದೀಕ್ಷಿತ್ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು, ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದೀಕ್ಷೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ Read More »

ಕರ್ನಾಟಕ

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 17.  ಭಾರತದ ಚುನಾವಣಾ ಆಯೋಗವು ಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರ ಮನೆಗಳಿಗೆ ಬಿಎಲ್ ಒಗಳು ಭೇಟಿ ನೀಡಿ ಮಾಹಿತಿ ನೀಡುತ್ತಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಆಸಕ್ತರು ಚುನಾವಣಾ ಅಧಿಸೂಚನೆ ಪ್ರಕಟವಾದ 5 ದಿನಗಳ ಒಳಗೆ 11 ಬಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯಿಂದ ಇಂತಹ ಒಟ್ಟು 27,000 ಮತದಾರರನ್ನು ಪಟ್ಟಿ ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ Read More »

ಕರ್ನಾಟಕ

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com.ಕೋಲಾರ,  ಮಾ 17. ಇಂದು ಮುಂಜಾನೆ ಕಾರು ಪಲ್ಟಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಕ್ರಾಸ್ ಬಳಿ ನಡೆದಿದೆ.  ಶಫಿ (55), ಶಮಾ (50) ಮೃತ ದಂಪತಿಗಳು.   ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ ಮಗಳನ್ನು ಡ್ರಾಪ್ ಮಾಡಿ ಆಂಧ್ರಪ್ರದೇಶದ ಮದನಪಲ್ಲಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಕಾರು ಬಿದ್ದಿದೆ. ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನಾ

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top