ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಠಕರ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ […]










