ಕಡಬ ನ್ಯೂಸ್

ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರದ ಹರಡುವಿಕೆಯ ಬಗ್ಗೆ ಅರಿವು ಮೂಡಿಸಲು ➤ ಲಾರ್ವಾ ಕರ್ಟೂನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಮಂಗಳೂರು ಪರಿಸರದಲ್ಲಿ ಡೆಂಗ್ಯೂ ಜ್ವರದ ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಹಾಗೂ ವಿದ್ಯಾರ್ಥಿಗಳ ಮೂಲಕ ಸಾರ್ವಜನಿಕರಲ್ಲಿ ಅಗತ್ಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲ ಶಾಲೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 3 ರಂದು ಮಂಗಳೂರು ದಕ್ಷಿಣ ವಲಯದ 114 ಪ್ರಾಥಮಿಕ ಶಾಲೆಗಳು ಹಾಗೂ 77 ಪ್ರೌಢಶಾಲೆಗಲ್ಲಿ ಲಾರ್ವಾ ಕರ್ಟೂನ್ ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಂದ ಸೃಜನಶೀಲ ಚಿತ್ರಗಳು ಮೂಡಿಬಂದವು. ಹೆಚ್ಚಿನ ವಿದ್ಯಾರ್ಥಿಗಳ ಆಗಮಿಸುವಿಕೆ ಲಾರ್ವಾದ […]

ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರದ ಹರಡುವಿಕೆಯ ಬಗ್ಗೆ ಅರಿವು ಮೂಡಿಸಲು ➤ ಲಾರ್ವಾ ಕರ್ಟೂನ್ ಸ್ಪರ್ಧೆ Read More »

ಕರಾವಳಿ

‘ನೋ ಹೆಲ್ಮೆಟ್ ನೋ ಪೆಟ್ರೋಲ್’ ➤ ಜಾಗೃತಿ ಆಂದೋಲನಕ್ಕೆ ಸಂಚಾರ ಪೊಲೀಸರ ಚಿಂತನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆಗಸ್ಟ್.6.ದ್ವಿಚಕ್ರ ವಾಹನಗಳಿಂದ ಆಗುವ ಅನಾಹುತಗಳನ್ನು ತಪ್ಪಿಸುವುದಕ್ಕೆ ನಗರದಲ್ಲಿಯೂ ಸಂಚಾರಿ ಪೊಲೀಸರು ಹೊಸ ಚಿಂತನೆಯೊಂದನ್ನು ನಡೆಸಿದೆ. ‘ಹೆಲ್ಮೆಟ್ ಧರಿಸಿ ಬಂದರಷ್ಟೇ ಬಂಕ್‌ಗಳಲ್ಲಿ ಪೆಟ್ರೋಲ್’ ಎನ್ನುವ ಒಂದು ಹೊಸ ನಿಯಮವು ದ್ವಿಚಕ್ರ ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಆಂದೋಲನವನ್ನು ಪ್ರಾರಂಭಿಸುವುದಕ್ಕೆ ಸಂಚಾರಿ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿ ಅಪಘಾತಗಳಾಗಿ ಸಾವು-ನೋವು ಸಂಭವಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕೆ ಬೆಂಗಳೂರಿನ ಕೆಲವು ಪೆಟ್ರೋಲ್ ಬಂಕ್‌ಗಳಲ್ಲಿ ಸುರಕ್ಷತೆಯ

‘ನೋ ಹೆಲ್ಮೆಟ್ ನೋ ಪೆಟ್ರೋಲ್’ ➤ ಜಾಗೃತಿ ಆಂದೋಲನಕ್ಕೆ ಸಂಚಾರ ಪೊಲೀಸರ ಚಿಂತನೆ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ➤ ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆ.7 ಹಾಗೂ ಆ.8 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ. ಮುಂದಿನ ಎರಡು ದಿನ ಕೂಡಾ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗ ರೆಡ್ ಅಲರ್ಟ್ ಮಾತ್ರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.  

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ➤ ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ Read More »

ಕರಾವಳಿ

ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ➤ ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು,ಭಕ್ತಾದಿಗಳು ನೀರಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು,ಈ ವರ್ಷದಲ್ಲಿ ಮೊದಲ ಸಲ ಈ ಸ್ನಾನ ಘಟ್ಟ ಮುಳುಗಡೆಯಾಗಿದೆ.ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ. ಕುಮಾರಧಾರ ನದಿ ನೀರು ತುಂಬಿ ಹರಿಯುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು,ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.  

ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ➤ ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆ Read More »

ಕರಾವಳಿ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ : ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ➤ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆಗಸ್ಟ್.6. ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಘಾಟ್ ನ ತಿರುವಿನಲ್ಲಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದು ವಾಹನ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ : ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ➤ ಸಂಚಾರ ಸ್ಥಗಿತ Read More »

ಕರಾವಳಿ

ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕೊಂಬಾರು ಗ್ರಾ.ಪಂ, ಶೀರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೊಂಬಾರು ಆರೋಗ್ಯ ಉಪಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ. 5 ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಹರ್ಷಿತಾ ಡಿ.ಬಿ ಉಚಿತ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು ಆ.6 ರಂದು ಕೊಂಬಾರು ಗ್ರಾ.ಪಂ ವ್ಯಾಪ್ತಿಯ ಕೆಂಜಾಳ ,ಗುಂಡ್ಯ-ಪಿಲಿಕಜೆ ಶಾಲೆಯಲ್ಲಿ ಶಿಬಿರ ಮುಂದುವರಿಯಲಿದ್ದು, ಈ

ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಕಲ್ಲುಗುಡ್ಡೆ: ನೇರ್ಲ ಶಾಲೆಯಲ್ಲಿ ಚಪ್ಪಲಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಇಚ್ಲಂಪಾಡಿ ನೇರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದ ಉಚಿತ ಚಪ್ಪಲಿಯನ್ನು ವಿತರಿಸಲಾಯಿತು. ಸರಕಾರದಿಂದ ಉಚಿತವಾಗಿ ನೀಡಲಾದ ಚಪ್ಪಲಿಯನ್ನು ನೇರ್ಲ ಶಾಲೆಯ ಸುಮಾರು 103 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶಾಂತಿ ವಿ.ಭಟ್, ನೂಜಿಬಾಳ್ತಿಲ ಸಿ.ಆರ್.ಪಿ. ಗೋವಿಂದ ನಾಯ್ಕ್, ಶಿಕ್ಷಕ ಗಿರೀಶ್ ನೆಲ್ಯಾಡಿ ನ್ಯೂಸ್ ಸ್ಟೋರ್ ಮಾಲಕ ನಝೀಮ್ ಉಪಸ್ಥಿತರಿದ್ದರು.

ಕಲ್ಲುಗುಡ್ಡೆ: ನೇರ್ಲ ಶಾಲೆಯಲ್ಲಿ ಚಪ್ಪಲಿ ವಿತರಣೆ Read More »

ಕರಾವಳಿ

ಕಲ್ಲುಗುಡ್ಡೆ: ಎಸ್.ಅಂಗಾರರಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.6.ಸುಳ್ಯ ಶಾಸಕ ಎಸ್.ಅಂಗಾರ ರವರಿಗೆ ಸಚಿವ ಸ್ಥಾನ ಸಿಗಲೆಂದು ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಸೋಮವಾರ ವಿಶೇಷ ಪ್ರಾರ್ಥನೆ ಮಾಡಲಾಯಿತು. ಬಿ.ಎಸ್.ಯಡಿಯೂರಪ್ಪ ನವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ, ವಿಶ್ವಾಸಮತ ಸಾಭೀತುಪಡಿಸಿದ್ದು, ಮುಂದೆ ನಡೆಯುವ ಸಚಿವ ಸಂಪುಟ ರಚನೆಯಲ್ಲಿ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಎಸ್.ಅಂಗಾರ ರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲೆಂದು ರೆಂಜಿಲಾಡಿ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಲ್ಲುಗುಡ್ಡೆ: ಎಸ್.ಅಂಗಾರರಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪ್ರಾರ್ಥನೆ Read More »

ಕರಾವಳಿ

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನಾಗಬನದಲ್ಲಿ ಸೋಮವಾರ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ನಡೆಯಿತು. ದೈವಸ್ಥಾನದ ಬಳಿಯಲ್ಲಿರುವ ನಾಗಬನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ, ಸೀಯಾಳಭಿಷೇಕ ನಡೆದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಬಳಿಕ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಅರ್ಚಕರಾದ ಕೃಷ್ಣ ಹೆಬ್ಬಾರ್ ಹಾಗೂ ರವಿ ಹೆಬ್ಬಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ

ನೂಜಿಬೈಲ್: ನಾಗರ ಪಂಚಮಿ, ನಾಗ ತಂಬಿಲ Read More »

ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.2019-20ನೇ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ಕೇಂದ್ರೀಯ ಸೈನಿಕ ಬೋರ್ಡಿನಿಂದ ಚಾಲನೆ ನೀಡಲಾಗಿದೆ. ಅರ್ಹ ಮಾಜಿ ಸೈನಿಕರ ಮಕ್ಕಳು ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ವಬ್‍ಸೈಟ್ www.ksb.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಂಟಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top