ಕಡಬ ನ್ಯೂಸ್

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ […]

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ. ಮಳೆ ಹಾನಿ ಹಾಗೂ ತೊಂದರೆಗಳು ಉಂಟಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಈ ಕೆಳಗಿನಂತಿವೆ. ಗ್ರಾಮೀಣ ಅಥವಾ ದೂರ ಪ್ರದೇಶಗಳಿಂದ ತೆರಳುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭಗಳಲ್ಲಿ ಆನ್‍ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಿಸಿದ ವಿದ್ಯಾಸಂಸ್ಥೆಗಳು ಅವಕಾಶ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ Read More »

ಕರ್ನಾಟಕ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.05. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಕಡಬ ಲೀಜನ್ ವತಿಯಿಂದ ಕಡಬ ಮಿನಿ ವಿಧಾನಸೌಧದ ವಠಾರದಲ್ಲಿ ಬುಧವಾರದಂದು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಡಬ ತಹಶೀಲ್ದಾರ್ ರಮೇಶ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿನಿ ವಿಧಾನ ಸೌಧದ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಕಡಬ ಲೀಜನ್ ಅಧ್ಯಕ್ಷರಾದ ಪಿ.ವಿಲ್ಸನ್, ಕಾರ್ಯದರ್ಶಿ ಪಿ.ಕೆ.ಚೆರಿಯನ್, ಕೋಶಾಧಿಕಾರಿ ಯೋಹನ್ನಾನ್, ಪೂರ್ವಾಧ್ಯಕ್ಷರಾದ ಟೈಟಸ್ ವರ್ಗೀಸ್, ಇ.ಸಿ.ಚೆರಿಯನ್ ಮೊದಲಾದವರು ಉಪಸ್ಥಿತರಿದ್ದರು.

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಭಾರೀ ಗಾತ್ರದ ಹೆಬ್ಬಾವು ಆಡೊಂದನ್ನು ನುಂಗಲು ವಿಫಲ ಯತ್ನ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಡೆಂಕಿರಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಆಡನ್ನು ಹೆಬ್ಬಾವೊಂದು ಉರುಳು ಹಾಕಿಕೊಂಡು ನುಂಗಲು ಯತ್ನಿಸಿದೆ. ಸುಮಾರು ಒಂದು ಗಂಟೆಗಳ ಕಾಲ ಸೆಣಸಾಡಿದ ಹೆಬ್ಬಾವು ಆಡಿನ ತಲೆಯ ಭಾಗವನ್ನು ಮಾತ್ರ ನುಂಗಿದ್ದು, ಉಳಿದ ಭಾಗವನ್ನು ನುಂಗಲು

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್ Read More »

ಕರ್ನಾಟಕ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು

 (ನ್ಯೂಸ್ ಕಡಬ) newskadaba.com ಕೇರಳ, ಜೂ. 20.  ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್ ಎಂದು ಗುರುತಿಸಲಾಗಿದೆ, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದು, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು Read More »

ಕರಾವಳಿ

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ)newskadaba @gmail.com ,ಜೂ.01. ಮಂಡಿ (ಹಿಮಾಚಲ ಪ್ರದೇಶ): ಜಿಲ್ಲೆಯ ಕರ್ಸೋಗ್‌ನಲ್ಲಿ ಬಹುದೊಡ್ಡ ಅನಾಹುತ ಪವಾಡದಂತೆ ತಪ್ಪಿದೆ. ಮಂಡಿ ಜಿಲ್ಲೆಯ ಕರ್ಸೋಗ್‌ ಎಂಬಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯಾಗಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ!

(ನ್ಯೂಸ್ ಕಡಬ)newskadaba @gmail.com , ಬೆಂಗಳೂರು: ಜೂನ್ 1, ಲೋಕಾರ್ಪಣೆಯಾದ ಒಂದೇ ವರ್ಷದೊಳಗೆ ಎರಡನೇ ಬಾರಿ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ ಕುಸಿದಿದೆ. ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಉದ್ಘಾಟನೆಯಾದ ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಒಂದೇ ವರ್ಷಕ್ಕೆ ಕುಸಿದು ಬಿದ್ದಿದ್ದು, ಭಾರಿ ಅಪಘಾತ ತಪ್ಪಿದೆ.ಟರ್ಮಿನಲ್​ನಲ್ಲಿ ಮಂಗಳವಾರ ಮಧ್ಯಾಹ್ನ ಗಾಳಿ, ಮಳೆಯಿಂದಾಗಿ ಈ ಘಟನೆ ನಡೆದಿದೆ. ಛಾವಣಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ವರದಿಯಾಗಿದೆ.    

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top