ಕಡಬ ನ್ಯೂಸ್

➤ಬಹುಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 27.ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ  ಅವರು ಜ.27 ರಂದು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ(Hampi)  ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

➤ಬಹುಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ Read More »

ಕರ್ನಾಟಕ

ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ!

(ನ್ಯೂಸ್ ಕಡಬ) newskadaba.com, ಪಾಟ್ನಾ, ಜ. 26. ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಬಯಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಲ್ಕೊಳ ಚೆಕ್‌ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಪುರ್ನಿಯಾದಲ್ಲಿ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ವೈಶಾಲಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹತ್ತಿದ್ದಾರೆ. ವೈಶಾಲಿಯಿಂದ ಬಸ್ಸು

ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳ 8 ಕನ್ನಡಿಗರಿಗೆ ಪದ್ಮ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 26. ಬೆಂಗಳೂರು: ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ.  ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.   ಕರ್ನಾಟಕದಿಂದ ಮಾಜಿ ಸಿಎಂ ಎಸ್ಎಂ

➤ ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳ 8 ಕನ್ನಡಿಗರಿಗೆ ಪದ್ಮ ಪ್ರಶಸ್ತಿ Read More »

ಕರ್ನಾಟಕ

➤ನೃತ್ಯ ಮಾಡುತ್ತಿರುವಾಗಲೇ ಆರೋಗ್ಯ ಸಿಬ್ಬಂದಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com. ಸಿಂಧನೂರು, ಜ. 26. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೋಲಾಟ ಆಡುವಾಗ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಎಎರ್‌ಟಿ ಕೇಂದ್ರದ ಸಿಬ್ಬಂದಿ ಮಹಾಂತೇಶ ಪೂಜಾರ ಮೃತಪಟ್ಟ ಸಿಬ್ಬಂದಿಯಾಗಿದ್ದಾರೆ.ಇಂದು ತಾಲೂಕಾ ಕ್ರೀಡಾಂಗಣದಲ್ಲಿ ಈ ದುರಂತ ಸಂಭವಿಸಿದೆ. ಕ್ರೀಡಾಂಗಣದಲ್ಲಿ ಶಾಲಾ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಾಲೂಕಾ ಆಡಳಿತದಿಂದ ಹಮ್ಮಿಕೊಳ್ಳಲಾಗಿತ್ತು ಮಕ್ಕಳ ಜೊತೆ ಕೋಲಾಟ ಆಡುವ ಸಮಯದಲ್ಲಿ ನೆಲಕ್ಕೆ ಕುಸಿದು ಬಿದ್ದು ಹೃದಯಘಾತದಿಂದ ಮೃತಪಟ್ಟಿದ್ದಾರೆ.  ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ

➤ನೃತ್ಯ ಮಾಡುತ್ತಿರುವಾಗಲೇ ಆರೋಗ್ಯ ಸಿಬ್ಬಂದಿ ಕುಸಿದು ಬಿದ್ದು ಮೃತ್ಯು..! Read More »

ಕರ್ನಾಟಕ

➤ ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಆತ್ಮಹತ್ಯೆ..!

ನ್ಯೂಸ್ ಕಡಬ) newskadaba.com. ಮಂಗಳೂರು , ಜ. 26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಬುಧವಾರ ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು

➤ ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಎಲ್ಐಸಿಯ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 26. ಭಾರತೀಯ ಜೀವ ವಿಮಾ ನಿಗಮ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ

➤ ಎಲ್ಐಸಿಯ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಜ. 25. ಬೀದಿನಾಯಿ ತನ್ನನ್ನು ಕಂಡು ಬೊಗಳುತ್ತಿದೆ  ಎಂದು ಸಿಟ್ಟಾದ ವಿದ್ಯಾರ್ಥಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ  ಪ್ರದೇಶದ ಮಥುರಾದ ಸದರ್ ಬಜಾರ್ ಪ್ರದೇಶದಲ್ಲಿ ನಡೆದಿದೆ. 20ವರ್ಷದ  ವಿದ್ಯಾರ್ಥಿ ಬೀದಿಶ್ವಾನ ತನ್ನನ್ನು ಕಂಡು ಬೊಗಳುತ್ತಿದೆ ಎಂದು ಈ ಕೃತ್ಯ ಎಸಗಿದ್ದಾನೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ನಾಯಿಯನ್ನು ವ್ಯಾಪಾರಿಯೊಬ್ಬರು ಬೆಂಕಿ ನಂದಿಸಿ ರಕ್ಷಿಸಿದ್ದಾರೆ.

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 25. ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನಪ್ಪಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿನಡಿಗೆ ಸಿಲುಕಿ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಮೃತರಲ್ಲಿ ಒಬ್ಬರನ್ನು ಶಶಿ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್ ಪ್ರೆಸ್ ನಿಂದ ಇಳಿದು ಮೈಸೂರಿಂದ ಬೆಂಗಳೂರಿಗೆ ಹೊರಟಿದ್ದ ಮಾಲ್ಗುಡಿ ಎಕ್ಸ್ ಪ್ರೆಸ್ ರೈಲು ಹತ್ತಲು ಮುಂದಾಗುತ್ತಾರೆ. ಈ ವೇಳೆ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಅಸುನೀಗಿದ್ದಾರೆ. ಸಾವನ್ನಪ್ಪಿರುವ

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ದಟ್ಟ ಅರಣ್ಯದಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಪಾಪಿಗಳು..!

(ನ್ಯೂಸ್ ಕಡಬ) newskadaba.com, ಬೆಳಗಾವಿ, ಜ. 23.  ಖಾನಾಪುರ  ತಾಲ್ಲೂಕಿನ ನಾವಗಾ ಗ್ರಾಮದ ಹೊರವಲಯದ ಅರಣ್ಯದಲ್ಲಿ 90 ವರ್ಷದ ವೃದ್ಧೆಯೊಬ್ಬರು ನಿತ್ರಾಣ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದಾರೆ. ಕುಟುಂಬದವರೇ ಅವರನ್ನು ಅರಣ್ಯದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಗ್ರಾಮದ ಜನ ತಿಳಿಸಿದ್ದಾರೆ. ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎನ್ನುವವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು. ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್‌ನಲ್ಲಿ ಅವರನ್ನು ಹತ್ತಿರದ ಧಾಬಾಗೆ

➤ ದಟ್ಟ ಅರಣ್ಯದಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಪಾಪಿಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಕಲಚೇತನರಿಗೆ ಗುಡ್ ನ್ಯೂಸ್ ➤ ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 23.  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು

ವಿಕಲಚೇತನರಿಗೆ ಗುಡ್ ನ್ಯೂಸ್ ➤ ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ Read More »

ಕರ್ನಾಟಕ
Scroll to Top