ಜೂ.9: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ
(ನ್ಯೂಸ್ ಕಡಬ) newskadaba.com ಸವಣೂರು, ಜೂ.06. ಎಸ್.ಎನ್.ಆರ್.ರೂರಲ್ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ ಜೂ.9ರಂದು ಸಂಸ್ಥೆಯ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವರದರಾಜ ಚಂದ್ರಗಿರಿ ಉದ್ಘಾಟಿಸುವರು.ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣುರು ಕೆ.ಸೀತಾರಾಮ ರೈ ವಹಿಸುವರು.ಅತಿಥಿಗಳಾಗಿ ಎಸ್.ಎನ್.ಆರ್.ರೂರಲ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಎನ್.ಸುಂದರ ರೈ ,ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಪಾಲ್ಗೊಳ್ಳುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಜೂ.9: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ Read More »
ಕರಾವಳಿ



