ಕಡಬ ನ್ಯೂಸ್

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿಸೆಂಬರ್ 25 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.ಕಡಬ, ಕೋಡಿಂಬಾಳ ಕುಟ್ರುಪಾಡಿ ಕುಂತೂರು ನೆಲ್ಯಾಡಿ ಸೇರಿದಂತೆ ಬಹುತೇಕ ಎಲ್ಲ ಚರ್ಚ್‍ಗಳನ್ನು ವಿದ್ಯುತ್ ದೀಪ ಸಕ್ಷತ್ರಗಳಿಂದ ಅಲಂಕಾರಿಸಲಾಗಿದೆ. ಚರ್ಚ್ ಆವರಣದಲ್ಲಿ ಮತ್ತು ಕೈಸ್ತರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಬಾಲಯೇಸು ಮೂರ್ತಿಯನ್ನು ಇಟ್ಟು, ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.   ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 100 ಅಡಿ ಆಳಕ್ಕೆ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ ನೂರು ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದ್ದು, ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಚಾಲಕರಾದ

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.24: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.   ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು.  

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಇಂದು ‘ರಾಷ್ಟ್ರೀಯ ದಂತ ವೈದ್ಯರ ದಿನ’ದ ಅಂಗವಾಗಿ ಪೂರ್ವಾಹ್ನ 10 ರಿಂದ ಸಾಯಂಕಾಲ 6 ರವರೆಗೆ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಹೊಸಂಗಡಿಯ ಖ್ಯಾತ ಉದ್ಯಮಿ ಶ್ರೀ ಪೇಮ್‍ಕುಮಾರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ಡಾ|| ಮುರಲೀಮೋಹನ್ ಚೂಂತಾರು ಇವರು ಭಾರತ ಕಂಡ ಶ್ರೇಷ್ಠ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ Read More »

ಕರಾವಳಿ, ಕರ್ನಾಟಕ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕಳೆದ ದಿನ ತಡರಾತ್ರಿ ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.ಘಟನೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಂದು (ಗುರುವಾರ) ಮುಂಜಾನೆ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು. ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಯಾವುದೇ ಜಾತಿ, ಮತ, ಧರ್ಮಗಳು ರೋಗಕ್ಕಿಲ್ಲ. ಆದರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೋಗಾಣು ಎಲ್ಲರಿಗೂ ಬಂದೇ ಬರುತ್ತದೆ. ರಾಜ್ಯದಲ್ಲಿ ಆಡಳಿತ ನಡೆಸುವವರಿಗೆ ಪ್ರತಿಯೊಬ್ಬರ ಪ್ರಾಣ ಮುಖ್ಯವಾಗೊದೆ. ಡಬ್ಲ್ಯುಹೆಚ್‌ಒ ಮಾರ್ಗಸೂಚಿ ಪ್ರಕಾರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ
Scroll to Top