ಕಡಬ ನ್ಯೂಸ್

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com.ಅಮೆರಿಕ, ಮೇ.8.  ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ […]

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಮೃತ್ಯು..

 (ನ್ಯೂಸ್ ಕಡಬ) newskadaba.com.ಮೈಸೂರು, ಮೇ.8.  ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ದಾಖಲೆ ನಿರ್ಮಿಸಿದ್ದ 67 ವರ್ಷದ ಬಲರಾಮ ಆನೆ ಭಾನುವಾರ ಸಂಜೆ ಅನಾರೋಗ್ಯದಿಂದ ಸಾವನ್ನಪ್ಪಿದೆ. ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹುಣಸೂರು ಅರಣ್ಯ ವ್ಯಾಪ್ತಿಯ ಹನಗೂಡು ಬಳಿಯ ಭೀಮನಕಟ್ಟೆ ಬಳಿಯ ಅರಣ್ಯ ಶಿಬಿರದಲ್ಲಿ ಆರೈಕೆ ಮಾಡಲಾಗುತ್ತಿತ್ತು, ಹಲವು ದಿನಗಳಿಂದ ಆಹಾರ ನೀರನ್ನು ಸೇವಿಸಿದರೂ ವಾಂತಿ ಮಾಡುತ್ತಿರುವುದಾಗಿ ಕಾವಾಡಿ ತಿಳಿಸಿದ ಮೇರೆಗೆ ಪಶುವೈದ್ಯಾಧಿಕಾರಿಗಳು ಬಲರಾಮನನ್ನು

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಮೃತ್ಯು.. Read More »

ಕರ್ನಾಟಕ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

 (ನ್ಯೂಸ್ ಕಡಬ) newskadaba.com. ಪುತ್ತೂರು, ಮೇ.6. ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್‌ ಶೋ ಆರಂಭಿಸಿದರು. ನಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದಿದ್ದಾರೆ.  

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ Read More »

ಕರಾವಳಿ, ಕರ್ನಾಟಕ

ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ನಟ ಸುದೀಪ್​ಗೆ ಬೆದರಿಕೆ ಪತ್ರಗಳನ್ನು ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ನಿರ್ದೇಶಕ ರಮೇಶ್ ಕಿಟ್ಟಿ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆಲ ಕಾಲ ಸುದೀಪ್ ಆಪ್ತವಲಯದಲ್ಲಿದ್ದ ಆರೋಪಿ, ಕಿಚ್ಚ ಸುದೀಪ್ ಚಾರಿಟಬಲ್‌ ಟ್ರಸ್ಟ್ ಅಧ್ಯಕ್ಷನಾಗಿಯೂ ಕೆಲಸ ನಿರ್ವಹಿಸಿದ್ದರು. ಆದರೆ, ನಂತರದ ದಿನಗಳಲ್ಲಿ ಹಣಕಾಸು ವಿಚಾರವಾಗಿ ಅವರಿಬ್ಬರ ಮಧ್ಯೆ ವೈಷಮ್ಯ ಉಂಟಾಗಿತ್ತು. ಈ ಕಾರಣಕ್ಕೆ ದೂರವಾಗಿದ್ದ ರಮೇಶ್​​, ಸುದೀಪ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ

ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್ Read More »

ಕರ್ನಾಟಕ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಮೇ.6. ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಚೇಳು ಕಡಿದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಗಪುರದಿಂದ ಮುಂಬಯಿಗೆ ಕಳೆದ ತಿಂಗಳು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆಯೇ ಮಹಿಳೆಗೆ ವೈದ್ಯರೊಬ್ಬರಿಂದ ಚಿಕಿತ್ಸೆ ಕೊಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರು ಚೇತರಿಸಿಕೊಂಡಿದ್ದು ಬಿಡುಗಡೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ  ಹೇಳಿಕೆ ನೀಡಿದೆ.

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಕಡಿದ ಚೇಳು Read More »

ರಾಷ್ಟ್ರೀಯ ನ್ಯೂಸ್

➤ಹಜ್‌ ಯಾತ್ರೆಗೆ ಮಂಗಳೂರಿನಿಂದ ನೇರ ವಿಮಾನ ಯಾನ ರದ್ದು

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6.  ಪ್ರಸಕ್ತ ಸಾಲಿನ ಪವಿತ್ರ ಹಜ್‌ ಯಾತ್ರೆಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರ ಪ್ರಯಾಣ ಅವಕಾಶವನ್ನು ರದ್ದುಪಡಿಸಲಾಗಿದೆ. ಕೋವಿಡ್‌ ಸಾಂಕ್ರಾಮಿಕದ ಬಳಿಕ ಮತ್ತೆ ಮಂಗಳೂರು ವಿಮಾನ ನಿಲ್ದಾಣದಿಂದ ಹಜ್‌ ಯಾತ್ರೆಗೆ ತೆರಳಲು ಯಾತ್ರಿಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಹಜ್‌ ಯಾತ್ರೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೂ ಯಾತ್ರಿ ಗಳಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮಾನ ಹತ್ತುವ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಭಾರತೀಯ ಹಜ್‌ ಸಮಿತಿಯು ದೇಶದ ಹಲವಾರು ರಾಜ್ಯ ಗಳಲ್ಲಿನ ವಿಮಾನ ಹತ್ತುವ ಕೇಂದಗಳನ್ನು

➤ಹಜ್‌ ಯಾತ್ರೆಗೆ ಮಂಗಳೂರಿನಿಂದ ನೇರ ವಿಮಾನ ಯಾನ ರದ್ದು Read More »

ಕರಾವಳಿ, ಕರ್ನಾಟಕ

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com.ವಿಜಯಪುರ , ಮೇ.6. ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ರೌಡಿಶೀಟರ್​ ಸಾವನ್ನಪ್ಪಿದ್ದಾನೆ. ನಗರದ ಚಾಂದಪುರ ಕಾಲೋನಿಯಲ್ಲಿ ಘಟನೆ ನಡೆದಿದೆ. ರೌಡಿಶೀಟರ್​ ಹೈದರ್ ಅಲಿ ನದಾಫ್ಮೇ ಲೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹತ್ಯೆ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಮೃತ ಹೈದರ್​ ಅಲಿ ನಧಾಪ್ ಪತ್ನಿ ನಿಶಾತ್ ನದಾಫ್ ಅವರು ಪಾಲಿಕೆ ಸದಸ್ಯೆ ಆಗಿದ್ದಾರೆ.

ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ

 (ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಆಗಮಿಸಲಿದ್ದಾರೆ.  ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ  ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಮೇ.6. ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ  ಬೀರುವಿನಲ್ಲಿಟ್ಟಿದ್ದ 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ  ಜನರೇಟರ್ ಶೆಡ್ ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಚರ್ಚ್ ನಲ್ಲಿ ಕಳ್ಳತನ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮೌಲ್ಯಮಾಪನ ಕಾರ್ಯ ಪೂರ್ಣ – ಎಸೆಸ್ಸೆಲ್ಸಿ ಫಲಿತಾಂಶ ಶೀಘ್ರ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ಎಸೆಸ್ಸೆಲ್ಸಿ ಫಲಿತಾಂಶ ಮೇ.11 ಅಥವಾ 12ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿವೆ. ಆ ಮೂಲಕ ಚುನಾವಣಾ ಫಲಿತಾಂಶದ ಮೊದಲೇ ಪರೀಕ್ಷಾ ಫಲಿತಾಂಶ ಹೊರಬೀಳುವುದು ಬಹುತೇಕ ಖಚಿತ. ಮೌಲ್ಯ ಮಾಪನ ಕಾರ್ಯ ಸಂಪೂರ್ಣ ಮುಗಿದಿದ್ದು ಮತ್ತೊಮ್ಮೆ ಉತ್ತರ ಪತ್ರಿಕೆಗಳು ಪರಿಶೀಲನೆ ನಡೆಯುತ್ತಿದೆ. ಈ ಬಾರಿ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮಾ.31ರಿಂದ ಏ.15ರವರೆಗೆ ಒಟ್ಟು 3305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಮೌಲ್ಯಮಾಪನ ಕಾರ್ಯ ಪೂರ್ಣ – ಎಸೆಸ್ಸೆಲ್ಸಿ ಫಲಿತಾಂಶ ಶೀಘ್ರ Read More »

ಕರ್ನಾಟಕ
Scroll to Top