ನ್ಯೂಸ್ ಕಡಬ

ಬೆಳ್ತಂಗಡಿ: ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಕೊರೊನಾಗೆ ಪತಿಯೂ ಬಲಿ

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.24: ಕೋವಿಡ್ ಮಹಾಮಾರಿಗೆ ತುತ್ತಾಗಿ ಪತ್ನಿ ಕೊನೆಯುಸಿರೆಳೆದ ಕೇವಲ 18 ಗಂಟೆಗಳ ಅಂತರದಲ್ಲೇ ಪತಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆರಿಯ ಗ್ರಾಮದಲ್ಲಿ‌ ನಡೆದಿದೆ. ನೆರಿಯ ಗ್ರಾಮದ ಪರಂದಾಡಿ‌ ನಿವಾಸಿ ಸಾರಮ್ಮ (58) ಅವರು ಮಂಗಳೂರಿನ‌ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 22 ನೇ ಮಂಗಳವಾರ ಮೃತಪಟ್ಟರೆ, ಅವರ ಪತಿ ಇಬ್ರಾಹಿಂ(68) ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ ಇದೀಗ ದಂಪತಿ ಪುತ್ರ ಅಬ್ದುಲ್ ಖಾದರ್ […]

ಬೆಳ್ತಂಗಡಿ: ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಕೊರೊನಾಗೆ ಪತಿಯೂ ಬಲಿ Read More »

ಕರಾವಳಿ

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

(ನ್ಯೂಸ್ ಕಡಬ) newskadaba,ಬಾಗಲಕೋಟೆ ಜೂ.24: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬರು ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.   0 ವರ್ಷ ಪ್ರಾಯದ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣಿಸಿಕೊಂಡಿತ್ತು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ತೆರಳಿ ಹಾವನ್ನು ಹಿಡಿದಿದ್ದರು. ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ಬಳಿಕ ಸದಾಶಿವ ಅವರು

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು Read More »

ಕರಾವಳಿ

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯಾರಂಭ ಮಾಡಿದೆ. ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರ

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ Read More »

ಕರ್ನಾಟಕ

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24:ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (3೦) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಸಂಜೆ ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ. ಪವನ್

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ Read More »

ಕರಾವಳಿ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.23: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.   ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು

(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಉಡುಪಿ ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 117 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65468 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 322 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63340 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 1 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 372 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1756 ಸಕ್ರಿಯ

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 542 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 89249 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 637 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 81167 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 14 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1062 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 7017 ಸಕ್ರಿಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ Read More »

ಕರಾವಳಿ

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.21: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಯೋಧರು ಹಿಮಾಲಯ ಹಾಗೂ ಮರುಭೂಮಿಯಲ್ಲಿ ಯೋಗ ಮಾಡಿ ಗಮನ ಸೆಳೆದರು.ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ ಅಧಿಕಾರಿಯೊಬ್ಬರು ಲಡಾಖ್‌ನ 18,000 ಅಡಿ ಎತ್ತರದ ಉಪ ಶೂನ್ಯ ತಾಪಮಾನ ಪ್ರದೇಶದಲ್ಲಿ ಸೂರ್ಯ ನಮಸ್ಕಾರ ಮಾಡಿ ವಿಶ್ವವನ್ನು ಆಕರ್ಷಿಸಿದರು. ಅವರು ಐಟಿಬಿಪಿಯ ಹಿಮ್‌ವೀರ್‌ ಯೂನಿಟ್‌ನ ಅಧಿಕಾರಿಯಾಗಿದ್ದು, ಘನೀಕರಿಸುವ ಚಳಿಯಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಇನ್ನು, ಗಡಿ ಭದ್ರತಾ ಪಡೆಯ ಯೋಧರು ರಾಜಸ್ಥಾನದ ಭಾರತ – ಪಾಕಿಸ್ತಾನ ಗಡಿಯ ಮರುಭೂಮಿಯಲ್ಲಿ ಯೋಗಾಭ್ಯಾಸ ನಡೆಸಿದರೆ, ಸಿಆರ್‌ಪಿಎಫ್‌

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ Read More »

ರಾಷ್ಟ್ರೀಯ ನ್ಯೂಸ್
Scroll to Top