ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25:ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ. ಹಾಗೆಯೇ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡದಂತೆ ಅಪಹರಣಕೊಳಗಾಗಿದ್ದ ಉಜಿರೆಯ ಬಾಲಕನ ತಂದೆ ಬಿಜಾಯ್ ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜಾಯ್, ನಾನು ಕೋಟ್ಯಂತರ ರೂಪಾಯಿ ಸಾಲವನ್ನು ಪಾವತಿಸಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ. ನಾನು ಯಾರಿಗಾದರೂ ಹಣ ನೀಡಲು ಬಾಕಿಯಿದೆ ಎಂದು ಅವರು ಸಾಕ್ಷಿ ಸಮೇತ ಪೊಲೀಸರಿಗೆ ಸಾಬೀತುಪಡಿಸಿದರೆ ನಾನು ಮೊತ್ತವನ್ನು ಅವರಿಗೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು. ಬಿಟ್ ಕಾಯಿನ್ […]








