ಮಂಗಳೂರು: ಜಿಪಿಎಸ್ ಅಳವಡಿಸದ ಸಿಟಿ ಬಸ್ ಪರವಾನಿಗೆ ರದ್ದು ಜಿಲ್ಲಾಧಿಕಾರಿ ➤ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಜಿಪಿಎಸ್ ಅಳವಡಿಸದಿರುವ ಸಿಟಿ ಬಸ್‌ಗಳ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಬಸ್ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರಿಗೆ ಪ್ರಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಲ್ಲಿ ಸಿಟಿ ಬಸ್‌ಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ. ಮುಂದಿನ 15 ದಿನಗಳೊಳಗಾಗಿ ಜಿಪಿಎಸ್ ಅಳವಡಿಸದಿದ್ದ ಪಕ್ಷದಲ್ಲಿ ಅಂತಹ ಬಸ್‌ಗಳನ್ನು ಗುರುತಿಸಿ, ಪರವಾನಿಗೆ ರದ್ದುಗೊಳಿಸುವ ಜೊತೆಗೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.ಮಂಗಳೂರು ನಗರ ವ್ಯಾಪ್ತಿಯಲ್ಲಿ […]









